IPL 2022: ಒಂದೇ ಪಂದ್ಯದ ಮೂಲಕ 3 ದಾಖಲೆ ಬರೆದ ಶಿಖರ್ ಧವನ್

IPL 2022: ಶಿಖರ್ ಧವನ್ ಐಪಿಎಲ್‌ನಲ್ಲಿ ಇದುವರೆಗೆ 5 ವಿವಿಧ ತಂಡಗಳ ಪರ ಆಡಿದ್ದಾರೆ. ಡೆಲ್ಲಿ ಡೇರ್ ಡೆವಿಲ್ಸ್ (ಈಗ ಡೆಲ್ಲಿ ಕ್ಯಾಪಿಟಲ್ಸ್) ಮೂಲಕ ಐಪಿಎಲ್ ಇನಿಂಗ್ಸ್ ಆರಂಭಿಸಿದ್ದ ಧವನ್ ಆ ಬಳಿಕ ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಡೆಕ್ಕನ್ ಚಾರ್ಜರ್ಸ್‌ ತಂಡದ ಭಾಗವಾಗಿದ್ದಾರೆ.

IPL 2022: ಒಂದೇ ಪಂದ್ಯದ ಮೂಲಕ 3 ದಾಖಲೆ ಬರೆದ ಶಿಖರ್ ಧವನ್
SHIKHAR DHAWAN
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 26, 2022 | 4:01 PM

ಪಂಜಾಬ್ ಕಿಂಗ್ಸ್‌ನ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಐಪಿಎಲ್​ನ 38ನೇ ಪಂದ್ಯದಲ್ಲಿ 3 ದೊಡ್ಡ ಸಾಧನೆಗಳನ್ನು ಮಾಡಿದ್ದಾರೆ. ಸಿಎಸ್​ಕೆ ವಿರುದ್ದದ ನಡೆದ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಐಪಿಎಲ್​ನಲ್ಲಿ 200 ಪಂದ್ಯವಾಡಿದ ವಿಶೇಷ ಸಾಧಕರ ಪಟ್ಟಿ ಧವನ್ ಸೇರ್ಪಡೆಯಾದರು. ಅಷ್ಟೇ ಅಲ್ಲದೆ 36 ವರ್ಷದ ಎಡಗೈ ಬ್ಯಾಟ್ಸ್​​ಮನ್ ಈ ಪಂದ್ಯದಲ್ಲಿ 2 ರನ್ ಗಳಿಸಿದ ತಕ್ಷಣ ಐಪಿಎಲ್‌ನಲ್ಲಿ 6000 ರನ್ ಪೂರೈಸಿದ ದಾಖಲೆಯನ್ನೂ ಕೂಡ ಬರೆದರು. ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ಆರನೇ ಓವರ್‌ನಲ್ಲಿ ಸಿಕ್ಸರ್ ಬಾರಿಸುವ ಮೂಲಕ, ಟಿ20ಯಲ್ಲಿ 9000 ರನ್‌ಗಳನ್ನು ಪೂರೈಸಿದರು.

ಕೊಹ್ಲಿ ಕ್ಲಬ್​ಗೆ ಧವನ್: ವಾಂಖೆಡೆ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರವೀಂದ್ರ ಜಡೇಜಾ ಪಂಜಾಬ್ ಕಿಂಗ್ಸ್ ತಂಡವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಪಂಜಾಬ್ ಪರ ಆರಂಭಿಕರಾಗಿ ಶಿಖರ್ ಧವನ್ ಮತ್ತು ಮಯಾಂಕ್ ಅಗರ್ವಾಲ್ ಕಣಕ್ಕಿಳಿದಿದ್ದರು. ಅಲ್ಲದೆ ಈ ಪಂದ್ಯದ ಮೂಲಕ ಧವನ್ 6 ಸಾವಿರ ರನ್ ಪೂರೈಸಿದರು. ಈ ಮೂಲಕ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಸದ್ಯ ವಿರಾಟ್ ಕೊಹ್ಲಿ 6402 ರನ್ ಬಾರಿಸುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. ಇದೀಗ ಧವನ್ ಕೂಡ 6 ಸಾವಿರ ರನ್ ಪೂರೈಸಿ ಈ ಸಾಧನೆ ಮಾಡಿದ 2ನೇ ಬ್ಯಾಟ್ಸ್​ಮನ್​ ಎನಿಸಿಕೊಂಡಿದ್ದಾರೆ.

9 ಸಾವಿರ ರನ್ ಸಾಧನೆ: ಈ ಪಂದ್ಯದಲ್ಲಿ ಶಿಖರ್ ಧವನ್ ಟಿ20 ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲೂ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಹೆಸರಿನಲ್ಲಿ 10392 ರನ್‌ಗಳಿವೆ. ಹಾಗೆಯೇ 10048 ರನ್ ಗಳಿಸಿದ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ಶಿಖರ್ ಧವನ್ 9000 ರನ್ ಪೂರೈಸಿ ಮೂರನೇ ಸ್ಥಾನಕ್ಕೇರಿದ್ದಾರೆ.

200 ಪಂದ್ಯಗಳ ಸಾಧನೆ: ಸಿಎಸ್​ಕೆ ವಿರುದ್ದ ಧವನ್ ಕಣಕ್ಕಿಳಿಯುವ ಮೂಲಕ 200 ಐಪಿಎಲ್ ಪಂದ್ಯಗಳನ್ನು ಆಡಿದ 8ನೇ ಆಟಗಾರ ಎನಿಸಿಕೊಂಡರು. 228 ಐಪಿಎಲ್ ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ದಿನೇಶ್ ಕಾರ್ತಿಕ್ ಮತ್ತು ರೋಹಿತ್ ಶರ್ಮಾ 221-221 ಪಂದ್ಯಗಳನ್ನು ಆಡಿದ್ದಾರೆ.

ಕಳೆದ ಸೀಸನ್​ವರೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿದ್ದ 36 ವರ್ಷದ ಶಿಖರ್ ಧವನ್ ಈ ಸೀಸನ್​ನಲ್ಲಿ ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡದಿರಬಹುದು. ಆದರೆ ಮುಂಬೈ ಇಂಡಿಯನ್ಸ್ ವಿರುದ್ಧ 70 ರನ್‌ಗಳ ಅದ್ಭುತ ಇನ್ನಿಂಗ್ಸ್‌ಗಳನ್ನು ಆಡಿದ್ದರು. ಇದೀಗ ಸಿಎಸ್​ಕೆ ವಿರುದ್ದ ಕೂಡ 88 ರನ್​ ಬಾರಿಸುವ ಮೂಲಕ ಪಂಜಾಬ್ ಕಿಂಗ್ಸ್ ತಂಡದ ಗೆಲುವಿನ ರುವಾರಿ ಎನಿಸಿಕೊಂಡಿದ್ದಾರೆ.

ಶಿಖರ್ ಧವನ್ ಐಪಿಎಲ್‌ನಲ್ಲಿ ಇದುವರೆಗೆ 5 ವಿವಿಧ ತಂಡಗಳ ಪರ ಆಡಿದ್ದಾರೆ. ಡೆಲ್ಲಿ ಡೇರ್ ಡೆವಿಲ್ಸ್ (ಈಗ ಡೆಲ್ಲಿ ಕ್ಯಾಪಿಟಲ್ಸ್) ಮೂಲಕ ಐಪಿಎಲ್ ಇನಿಂಗ್ಸ್ ಆರಂಭಿಸಿದ್ದ ಧವನ್ ಆ ಬಳಿಕ ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಡೆಕ್ಕನ್ ಚಾರ್ಜರ್ಸ್‌ ತಂಡದ ಭಾಗವಾಗಿದ್ದಾರೆ. ಇದೀಗ ಪಂಜಾಬ್ ಕಿಂಗ್ಸ್‌ನ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತಿರುವ ಧವನ್ ಐಪಿಎಲ್​ನಲ್ಲಿ ಇದುವರೆಗೆ 46 ಅರ್ಧಶತಕ ಮತ್ತು 2 ಶತಕಗಳನ್ನು ಬಾರಿಸಿದ್ದಾರೆ.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್