ಪಂಜಾಬ್ ಕಿಂಗ್ಸ್‌ನ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಐಪಿಎಲ್ನ 38ನೇ ಪಂದ್ಯದಲ್ಲಿ 3 ದೊಡ್ಡ ಸಾಧನೆಗಳನ್ನು ಮಾಡಿದ್ದಾರೆ. ಸಿಎಸ್ಕೆ ವಿರುದ್ದದ ನಡೆದ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಐಪಿಎಲ್‌ನಲ್ಲಿ 200 ಪಂದ್ಯವಾಡಿದ ವಿಶೇಷ ಸಾಧಕರ ಪಟ್ಟಿ ಧವನ್ ಸೇರ್ಪಡೆಯಾದರು. ಅಷ್ಟೇ ಅಲ್ಲದೆ 36 ವರ್ಷದ ಎಡಗೈ ಬ್ಯಾಟ್ಸ್‌ಮನ್ ಈ ಪಂದ್ಯದಲ್ಲಿ 2 ರನ್ ಗಳಿಸಿದ ತಕ್ಷಣ ಐಪಿಎಲ್‌ನಲ್ಲಿ 6000 ರನ್ ಪೂರೈಸಿದ ದಾಖಲೆಯನ್ನೂ ಕೂಡ ಬರೆದರು. ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ಆರನೇ ಓವರ್‌ನಲ್ಲಿ ಸಿಕ್ಸರ್ ಬಾರಿಸುವ ಮೂಲಕ, ಟಿ20ಯಲ್ಲಿ 9000 ರನ್‌ಗಳನ್ನು ಪೂರೈಸಿದರು.
ಕೊಹ್ಲಿ ಕ್ಲಬ್ಗೆ ಧವನ್:
ವಾಂಖೆಡೆ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರವೀಂದ್ರ ಜಡೇಜಾ ಪಂಜಾಬ್ ಕಿಂಗ್ಸ್ ತಂಡವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಪಂಜಾಬ್ ಪರ ಆರಂಭಿಕರಾಗಿ ಶಿಖರ್ ಧವನ್ ಮತ್ತು ಮಯಾಂಕ್ ಅಗರ್ವಾಲ್ ಕಣಕ್ಕಿಳಿದಿದ್ದರು. ಅಲ್ಲದೆ ಈ ಪಂದ್ಯದ ಮೂಲಕ ಧವನ್ 6 ಸಾವಿರ ರನ್ ಪೂರೈಸಿದರು. ಈ ಮೂಲಕ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಸದ್ಯ ವಿರಾಟ್ ಕೊಹ್ಲಿ 6402 ರನ್ ಬಾರಿಸುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. ಇದೀಗ ಧವನ್ ಕೂಡ 6 ಸಾವಿರ ರನ್ ಪೂರೈಸಿ ಈ ಸಾಧನೆ ಮಾಡಿದ 2ನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.
9 ಸಾವಿರ ರನ್ ಸಾಧನೆ:
ಈ ಪಂದ್ಯದಲ್ಲಿ ಶಿಖರ್ ಧವನ್ ಟಿ20 ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲೂ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಹೆಸರಿನಲ್ಲಿ 10392 ರನ್‌ಗಳಿವೆ. ಹಾಗೆಯೇ 10048 ರನ್ ಗಳಿಸಿದ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಇದೀಗ ಶಿಖರ್ ಧವನ್ 9000 ರನ್ ಪೂರೈಸಿ ಮೂರನೇ ಸ್ಥಾನಕ್ಕೇರಿದ್ದಾರೆ.
200 ಪಂದ್ಯಗಳ ಸಾಧನೆ:
ಸಿಎಸ್ಕೆ ವಿರುದ್ದ ಧವನ್ ಕಣಕ್ಕಿಳಿಯುವ ಮೂಲಕ 200 ಐಪಿಎಲ್ ಪಂದ್ಯಗಳನ್ನು ಆಡಿದ 8ನೇ ಆಟಗಾರ ಎನಿಸಿಕೊಂಡರು. 228 ಐಪಿಎಲ್ ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ದಿನೇಶ್ ಕಾರ್ತಿಕ್ ಮತ್ತು ರೋಹಿತ್ ಶರ್ಮಾ 221-221 ಪಂದ್ಯಗಳನ್ನು ಆಡಿದ್ದಾರೆ.
ಕಳೆದ ಸೀಸನ್ವರೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿದ್ದ 36 ವರ್ಷದ ಶಿಖರ್ ಧವನ್ ಈ ಸೀಸನ್ನಲ್ಲಿ ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡದಿರಬಹುದು. ಆದರೆ ಮುಂಬೈ ಇಂಡಿಯನ್ಸ್ ವಿರುದ್ಧ 70 ರನ್‌ಗಳ ಅದ್ಭುತ ಇನ್ನಿಂಗ್ಸ್‌ಗಳನ್ನು ಆಡಿದ್ದರು. ಇದೀಗ ಸಿಎಸ್ಕೆ ವಿರುದ್ದ ಕೂಡ 88 ರನ್ ಬಾರಿಸುವ ಮೂಲಕ ಪಂಜಾಬ್ ಕಿಂಗ್ಸ್ ತಂಡದ ಗೆಲುವಿನ ರುವಾರಿ ಎನಿಸಿಕೊಂಡಿದ್ದಾರೆ.
ಶಿಖರ್ ಧವನ್ ಐಪಿಎಲ್‌ನಲ್ಲಿ ಇದುವರೆಗೆ 5 ವಿವಿಧ ತಂಡಗಳ ಪರ ಆಡಿದ್ದಾರೆ. ಡೆಲ್ಲಿ ಡೇರ್ ಡೆವಿಲ್ಸ್ (ಈಗ ಡೆಲ್ಲಿ ಕ್ಯಾಪಿಟಲ್ಸ್) ಮೂಲಕ ಐಪಿಎಲ್ ಇನಿಂಗ್ಸ್ ಆರಂಭಿಸಿದ್ದ ಧವನ್ ಆ ಬಳಿಕ ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಡೆಕ್ಕನ್ ಚಾರ್ಜರ್ಸ್ ತಂಡದ ಭಾಗವಾಗಿದ್ದಾರೆ. ಇದೀಗ ಪಂಜಾಬ್ ಕಿಂಗ್ಸ್‌ನ ಜೆರ್ಸಿಯಲ್ಲಿ ಕಾಣಿಸಿಕೊಳ್ಳುತ್ತಿರುವ ಧವನ್ ಐಪಿಎಲ್‌ನಲ್ಲಿ ಇದುವರೆಗೆ 46 ಅರ್ಧಶತಕ ಮತ್ತು 2 ಶತಕಗಳನ್ನು ಬಾರಿಸಿದ್ದಾರೆ.
ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್
ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ