AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶುಭ್​​ಮನ್ ಗಿಲ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಗುಜರಾತ್ ಟೈಟಾನ್ಸ್​

Punjab Kings vs Gujarat Titans: ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​​ಗಳಲ್ಲಿ 162 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 19.1 ಓವರ್​​ಗಳಲ್ಲಿ 165 ರನ್ ಬಾರಿಸಿ 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

ಶುಭ್​​ಮನ್ ಗಿಲ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಗುಜರಾತ್ ಟೈಟಾನ್ಸ್​
Shubman Gill
ಝಾಹಿರ್ ಯೂಸುಫ್
|

Updated on: Apr 01, 2026 | 7:36 AM

Share

ಐಪಿಎಲ್ 2026ರ ಸೀಸನ್‌ನ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಗುಜರಾತ್ ಟೈಟಾನ್ಸ್ (GT)  ಮೂರು ವಿಕೆಟ್‌ಗಳ ಸೋಲನ್ನು ಅನುಭವಿಸಿತು. ಆದರೆ, ಈ ಸೋಲಿಗಿಂತ ಹೆಚ್ಚಾಗಿ ಚರ್ಚೆಯಾಗುತ್ತಿರುವುದು ನಾಯಕ ಶುಭ್​ಮನ್ ಗಿಲ್ ಅವರ ಒಂದು ವಿಚಿತ್ರ ನಿರ್ಧಾರ. ಅದುವೇ ತಂಡದ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್ ಅವರಿಗೆ ಪೂರ್ಣ ಓವರ್‌ಗಳನ್ನು ನೀಡದೇ ಇರುವುದು!

ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 162 ರನ್‌ಗಳ ಸಾಧಾರಣ ಮೊತ್ತವನ್ನು ಕಲೆಹಾಕಿತು. ಈ ಮೊತ್ತವನ್ನು ರಕ್ಷಿಸುವ ಜವಾಬ್ದಾರಿ ಬೌಲರ್‌ಗಳ ಮೇಲಿತ್ತು. ಪವರ್‌ಪ್ಲೇನಲ್ಲಿ ಮೊಹಮ್ಮದ್ ಸಿರಾಜ್ ಅತ್ಯುತ್ತಮ ಲಯದಲ್ಲಿದ್ದಂತೆ ಕಂಡು ಬಂದರು. ಅಲ್ಲದೆ ಈ ವೇಳೆ ಎಸೆದ 2 ಓವರ್‌ಗಳಲ್ಲಿ ಸಿರಾಜ್​ ನೀಡಿದ್ದು ಕೇವಲ 15 ರನ್​​ಗಳು ಮಾತ್ರ.

ಅಂದರೆ ಪವರ್​ಪ್ಲೇನಲ್ಲೇ ಮೊಹಮ್ಮದ್ ಸಿರಾಜ್ ಪಂಜಾಬ್ ಕಿಂಗ್ಸ್ ಬ್ಯಾಟರ್​​ಗಳ ರನ್ ವೇಗಕ್ಕೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಅಚ್ಚರಿಯ ವಿಷಯವೆಂದರೆ ಆ 2 ಓವರ್‌ಗಳ ನಂತರ ಶುಭ್​​ಮನ್ ಗಿಲ್, ಸಿರಾಜ್‌ಗೆ ಮತ್ತೆ ಚೆಂಡನ್ನೇ ನೀಡಲಿಲ್ಲ!

ಇತ್ತ 13ನೇ ಓವರ್​ ವೇಳೆ ದಾಳಿಗಿಳಿದ ಪ್ರಸಿದ್ಧ್ ಕೃಷ್ಣ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸುವ ಮೂಲಕ ಪಂಜಾಬ್ ಕಿಂಗ್ಸ್ ತಂಡಕ್ಕೆ ಆಘಾತ ನೀಡಿದ್ದರು. 2 ಓವರ್​​ಗಳಲ್ಲಿ 3 ವಿಕೆಟ್ ಉರುಳಿಸಿದ ಪ್ರಸಿದ್ಧ್ ಗುಜರಾತ್ ಟೈಟಾನ್ಸ್ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿದ್ದರು. ಆದರೆ ಈ ಹಂತದಲ್ಲೂ ಶುಭ್​​ಮನ್ ಗಿಲ್ ಮೊಹಮ್ಮದ್ ಸಿರಾಜ್ ಅವರನ್ನು ದಾಳಿಗೆ ಇಳಿಸಿರಲಿಲ್ಲ ಎಂಬುದೇ ಅಚ್ಚರಿ.

  • ಶುಭ್​​ಮನ್ ಗಿಲ್ ಮೊದಲ 2 ಓವರ್​​​ಗಳಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್​ಗೆ ಮತ್ತೆ ಓವರ್ ನೀಡಲೇ ಇಲ್ಲ.
  • ಸಿರಾಜ್​ ಅವರ ಬಳಿಕ ಪ್ರಸಿದ್ಧ್ ಕೃಷ್ಣಗೂ ಓವರ್​ ನೀಡಿರಲಿಲ್ಲ. ಅಂದರೆ ಪ್ರಸಿದ್ಧ್ ದಾಳಿಗೆ ಇಳಿದದ್ದು 13ನೇ ಓವರ್​ನಲ್ಲಿ.
  • ಉತ್ತಮ ಲಯದಲ್ಲಿದ್ದರೂ ಸಿರಾಜ್ ಅವರನ್ನು ಸರಿಯಾಗಿ ಬಳಸಿಕೊಂಡಿಲ್ಲ. ಅತ್ತ ಅನುಭವಿ ಪ್ರಸಿದ್ಧ್ ಕೃಷ್ಣ ಅವರನ್ನು ಸಹ ಮೊದಲೇ ದಾಳಿಗಿಳಿಸಿರಲಿಲ್ಲ.

ಪಂಜಾಬ್ ಕಿಂಗ್ಸ್ ತಂಡವು ಸತತ ವಿಕೆಟ್ ಕಳೆದುಕೊಂಡ ಒತ್ತಡಕ್ಕೊಳಗಾಗಿದ್ದರೂ ಶುಭ್​​ಮನ್ ಗಿಲ್ ಅನಾನುಭವಿ ಅಶೋಕ್ ಶರ್ಮಾ ಮತ್ತು ವಾಷಿಂಗ್ಟನ್ ಸುಂದರ್ ಅವರಂತಹ ಬೌಲರ್‌ಗಳನ್ನು ದೀರ್ಘಕಾಲ ಬಳಸಿಕೊಂಡರು.

ಒಂದು ಹಂತದಲ್ಲಿ 118 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡಿದ್ದ ಪಂಜಾಬ್ ಕಿಂಗ್ಸ್ ಸೋಲಿನ ಸುಳಿಗೆ ಸಿಲುಕಿತ್ತು. ಒಂದು ವೇಳೆ ಈ ಹಂತದಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಬಳಸಿಕೊಂಡಿದ್ದರೆ, ಅಥವಾ 7 ವಿಕೆಟ್ ಕಳೆದುಕೊಂಡ ಬಳಿಕ ಸಿರಾಜ್ ಕೈಗೆ ಚೆಂಡು ನೀಡಿದ್ದರೆ ವಿಕೆಟ್ ಪಡೆಯುವ ಅಥವಾ ರನ್ ನಿಯಂತ್ರಿಸುವ ಸಾಧ್ಯತೆ ಹೆಚ್ಚಿತ್ತು.

ಏಕೆಂದರೆ ಪವರ್​ಪ್ಲೇನಲ್ಲಿ ಪ್ರಭ್​ಸಿಮ್ರಾನ್ ಸಿಂಗ್ ಹಾಗೂ ಕೂಪರ್ ಕೊನೊಲಿ ಅಬ್ಬರಿಸಿದರೂ ಮೊಹಮ್ಮದ್ ಸಿರಾಜ್ 12 ಎಸೆತಗಳಲ್ಲಿ ನೀಡಿದ್ದು ಕೇವಲ 15 ರನ್​​ಗಳು ಮಾತ್ರವಾಗಿತ್ತು. ಹೀಗಾಗಿ ನಿರ್ಣಾಯಕ ಹಂತದಲ್ಲಿ ಸಿರಾಜ್ ಅವರ ಅನುಭವವನ್ನು ಬಳಸಿಕೊಂಡು ಪಂಜಾಬ್ ಕಿಂಗ್ಸ್ ಮೇಲೆ ಒತ್ತಡ ಹೇರುವ ಅವಕಾಶ ಶುಭ್​​ಮನ್ ಗಿಲ್ ಮುಂದಿತ್ತು.

ಇದಾಗ್ಯೂ ಶುಭ್​​ಮನ್ ಗಿಲ್  ಅವರ ರಕ್ಷಣಾತ್ಮಕ ನಾಯಕತ್ವದಿಂದಾಗಿ ಪಂಜಾಬ್‌ನ ಯುವ ಆಟಗಾರ ಕೂಪರ್ ಕೊನೊಲಿ (72)* ಅಬ್ಬರಿಸಲು ಅವಕಾಶ ಸಿಕ್ಕಿತು. ಅಂತಿಮವಾಗಿ ಪಂಜಾಬ್ 19.1 ಓವರ್‌ಗಳಲ್ಲಿ ಗುರಿ ತಲುಪುವ ಮೂಲಕ 3 ವಿಕೆಟ್​​ಗಳ ರೋಚಕ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಮುಗಿಯದ ಓವರ್… ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

ಈ ಸೋಲಿನ ಬೆನ್ನಲ್ಲೇ ಶುಭ್​​ಮನ್ ಗಿಲ್ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳೆದ್ದಿವೆ. ಅದರಲ್ಲೂ ಗಿಲ್​  ನಾಯಕನಾಗಿ ಒತ್ತಡದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ ಎಂಬ ಟೀಕೆ ಕೇಳಿಬರುತ್ತಿದೆ. ಈ ಟೀಕೆಗಳ ನಡುವೆ ಮುಂದಿನ ಪಂದ್ಯಗಳಲ್ಲಿ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ಅವರಂತಹ ಹಿರಿಯ ಬೌಲರ್‌ಗಳನ್ನು ಗಿಲ್ ಹೇಗೆ ಬಳಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Follow Us
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!