PBKS vs RCB Playing XI IPL 2022: ಆರ್ಸಿಬಿ ತಂಡದ ಇಬ್ಬರು ಅಲಭ್ಯ: ಹೇಗಿರಲಿದೆ ಪ್ಲೇಯಿಂಗ್ 11
PBKS vs RCB Playing XI IPL 2022: ಪಂಜಾಬ್ ಕಿಂಗ್ಸ್ ತಂಡ ಕೂಡ ಬಲಿಷ್ಠ ಆಟಗಾರರನ್ನು ಹೊಂದಿದೆ. ಇದಾಗ್ಯೂ ಜಾನಿ ಬೈರ್ಸ್ಟೋವ್ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದು, ಹೀಗಾಗಿ ಪ್ಲೇಯಿಂಗ್ 11 ನಲ್ಲಿ ಬದಲಾವಣೆ ಕಂಡು ಬರಲಿದೆ.
RCB vs PBKS Playing XI: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಭಾನುವಾರ ಡಬಲ್ ಹೆಡರ್ ಪಂದ್ಯಗಳು ನಡೆಯಲಿದೆ. ಸಂಜೆ 3.30 ಕ್ಕೆ ಶುರುವಾಗಲಿರುವ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮೂಖಾಮುಖಿಯಾಗಲಿದೆ. ಇನ್ನು ರಾತ್ರಿ 7.30 ಕ್ಕೆ ಆರಂಭವಾಗಲಿರುವ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಆಡಲಿದೆ. ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ನಡುವಣ ಪಂದ್ಯದ ವಿಶೇಷ ಎಂದರೆ ಉಭಯ ತಂಡಗಳೂ ಕೂಡ ಹೊಸ ನಾಯಕನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸುತ್ತಿದೆ. ಪಂಜಾಬ್ ಕಿಂಗ್ಸ್ ಪರ ಮಯಾಂಕ್ ಅಗರ್ವಾಲ್ ನಾಯಕನಾಗಿ ಹೊಸ ಇನಿಂಗ್ಸ್ ಆರಂಭಿಸುತ್ತಿದ್ದರೆ, ಆರ್ಸಿಬಿಗೆ ಫಾಫ್ ಡುಪ್ಲೆಸಿಸ್ ಸಾರಥ್ಯವಹಿಸುತ್ತಿದ್ದಾರೆ. ಹೀಗಾಗಿಯೇ ಮೊದಲ ಪಂದ್ಯದಲ್ಲಿ ಯಾವ ನಾಯಕನಿಗೆ ಗೆಲುವಿನ ಸಿಹಿ ದೊರೆಯಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ.
ಇನ್ನು ಉಭಯ ತಂಡಗಳ ಈ ಹಿಂದಿನ ಅಂಕಿ ಅಂಶಗಳನ್ನು ನೋಡುವುದಾದರೆ, ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದುವರೆಗೆ 28 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಆರ್ಸಿಬಿ 13 ಬಾರಿ ಮಾತ್ರ ಗೆದ್ದಿದೆ. ಅಂದರೆ 15 ಗೆಲುವು ದಾಖಲಿಸಿ ಪಂಜಾಬ್ ಕಿಂಗ್ಸ್ ಮೇಲುಗೈ ಹೊಂದಿದೆ. ಹೀಗಾಗಿ ಈ ಬಾರಿ ಆರ್ಸಿಬಿ ಗೆಲುವಿನ ಸಂಖ್ಯೆಯನ್ನು ಹೆಚ್ಚಿಸುವ ಇರಾದೆಯಲ್ಲಿದೆ.
ಅದರಂತೆ ಆರ್ಸಿಬಿ ತಂಡವು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ. ಆದರೆ ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ಜೋಶ್ ಹ್ಯಾಝಲ್ವುಡ್ ಅನುಪಸ್ಥಿತಿಯಲ್ಲಿ ಆರ್ಸಿಬಿ ತಂಡದಲ್ಲಿ ಯುವ ಆಟಗಾರರಿಗೆ ಅವಕಾಶ ದೊರೆಯಬಹುದು. ಅದರಲ್ಲೂ ಆರಂಭಿಕನಾಗಿ ಅನೂಜ್ ರಾವತ್ ಆಡುವುದು ಬಹುತೇಕ ಖಚಿತ ಎನ್ನಬಹುದು. ಹಾಗೆಯೇ ಮಧ್ಯಮ ಕ್ರಮಾಂಕದಲ್ಲಿ ಶೆರ್ಫಾನ್ ರುದರ್‌ಫೋರ್ಡ್ ಕಾಣಿಸಿಕೊಳ್ಳಬಹುದು.
ಮತ್ತೊಂದೆಡೆ ಪಂಜಾಬ್ ಕಿಂಗ್ಸ್ ತಂಡ ಕೂಡ ಬಲಿಷ್ಠ ಆಟಗಾರರನ್ನು ಹೊಂದಿದೆ. ಇದಾಗ್ಯೂ ಜಾನಿ ಬೈರ್ಸ್ಟೋವ್ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದು, ಹೀಗಾಗಿ ಪ್ಲೇಯಿಂಗ್ 11 ನಲ್ಲಿ ಬದಲಾವಣೆ ಕಂಡು ಬರಲಿದೆ. ಹಾಗೆಯೇ ಕಗಿಸೊ ರಬಾಡ ಅವರ ಕ್ವಾರಂಟೈನ್ ಮುಗಿದರೆ ಮಾತ್ರ ತಂಡದಲ್ಲಿ ಅವಕಾಶ ಪಡೆಯಲಿದ್ದಾರೆ. ಹಾಗಿದ್ರೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ನೋಡೋಣ…
ಪಂಜಾಬ್ ಕಿಂಗ್ಸ್ ಸಂಭಾವ್ಯ ಪ್ಲೇಯಿಂಗ್ 11: ಶಿಖರ್ ಧವನ್, ಮಯಾಂಕ್ ಅಗರ್ವಾಲ್ (ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ಭಾನುಕಾ ರಾಜಪಕ್ಸೆ, ಶಾರುಖ್ ಖಾನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಓಡಿಯನ್ ಸ್ಮಿತ್, ಸಂದೀಪ್ ಶರ್ಮಾ, ಕಗಿಸೊ ರಬಾಡ, ರಾಹುಲ್ ಚಹರ್ ಮತ್ತು ಅರ್ಷದೀಪ್ ಸಿಂಗ್
ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11: ಫಾಫ್ ಡು ಪ್ಲೆಸಿಸ್ (ನಾಯಕ), ಅನೂಜ್ ರಾವತ್, ವಿರಾಟ್ ಕೊಹ್ಲಿ, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಶಹಬಾಜ್ ಅಹ್ಮದ್ ಮತ್ತು ಮೊಹಮ್ಮದ್ ಸಿರಾಜ್
ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
ಇದನ್ನೂ ಓದಿ: IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು
ಇದನ್ನೂ ಓದಿ: IPL 2022: ಐಪಿಎಲ್ನ ಆರಂಭಿಕ ಪಂದ್ಯಗಳಿಗೆ 23 ಸ್ಟಾರ್ ಆಟಗಾರರು ಅಲಭ್ಯ