PBKS vs RCB Playing XI: ಆರ್​​ಸಿಬಿಗೆ ಆಘಾತ; ಪಂಜಾಬ್ ವಿರುದ್ಧ ಆಡಲ್ಲ ರಜತ್ ಪಾಟಿದರ್

IPL Punjab Kings vs Royal Challengers Bengaluru in Kannada Playing XI: ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಈ ಪಂದ್ಯದಲ್ಲಿ ಜಿತೇಶ್ ಶರ್ಮಾ ಆರ್‌ಸಿಬಿ ತಂಡದ ನಾಯಕರಾಗಿದ್ದಾರೆ. ಏಕೆಂದರೆ ತಂಡದ ಖಾಯಂ ನಾಯಕ ರಜತ್ ಪಾಟಿದಾರ್ ಈ ಪಂದ್ಯವನ್ನು ಆಡುತ್ತಿಲ್ಲ.

PBKS vs RCB Playing XI: ಆರ್​​ಸಿಬಿಗೆ ಆಘಾತ; ಪಂಜಾಬ್ ವಿರುದ್ಧ ಆಡಲ್ಲ ರಜತ್ ಪಾಟಿದರ್
Pbks Vs Rcb Toss

Updated on: May 17, 2026 | 3:25 PM

ಐಪಿಎಲ್ 2026 ರ (IPL 2026) ನಿರ್ಣಾಯಕ ಪಂದ್ಯ ಧರ್ಮಶಾಲಾ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯವು ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆಲುವು ಪಂಜಾಬ್ ಕಿಂಗ್ಸ್‌ನ (PBKS) ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸುತ್ತದೆ. ಇತ್ತ ಆರ್​ಸಿಬಿಗೆ (RCB) ಈ ಪಂದ್ಯದ ಗೆಲುವು ಪ್ಲೇಆಫ್ ಸ್ಥಾನವನ್ನು ಖಚಿತಪಡಿಸುತ್ತದೆ. ಪ್ರಸ್ತುತ ಆರ್​​ಸಿಬಿ ಐಪಿಎಲ್ 2026 ಅಂಕಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಆಡಿರುವ 12 ಪಂದ್ಯಗಳಲ್ಲಿ 16 ಅಂಕಗಳನ್ನು ಹೊಂದಿದ್ದು, ಅದರ ನೆಟ್ ರನ್​ರೇಟ್ 1.053 ಆಗಿದೆ. ಇತ್ತ ಪಂಜಾಬ್ ಕಿಂಗ್ಸ್ ತಂಡವು ಕಳೆದ ಐದು ಪಂದ್ಯಗಳಲ್ಲಿ ಸೋತಿದ್ದು, 12 ಪಂದ್ಯಗಳ ನಂತರ ಕೇವಲ 13 ಅಂಕಗಳನ್ನು ಹೊಂದಿದೆ. ಅದಕ್ಕಾಗಿಯೇ ಈ ಪಂದ್ಯವನ್ನು ಗೆಲ್ಲುವುದು ಆರ್‌ಸಿಬಿಗಿಂತ ಪಂಜಾಬ್ ಕಿಂಗ್ಸ್‌ಗೆ ಹೆಚ್ಚು ಮುಖ್ಯವಾಗಿದೆ. ಏಕೆಂದರೆ ಯಾವುದೇ ಬೆಲೆ ತೆತ್ತಾದರೂ ಪಂಜಾಬ್ ಉಳಿದಿರುವ ಎರಡೂ ಪಂದ್ಯಗಳನ್ನು ಗೆಲ್ಲಲೇಬೇಕು.

ಟಾಸ್ ಗೆದ್ದ ಪಂಜಾಬ್

ಈ ಮಧ್ಯಾಹ್ನದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್​ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಈ ಪಂದ್ಯದಲ್ಲಿ ಜಿತೇಶ್ ಶರ್ಮಾ ಆರ್‌ಸಿಬಿ ತಂಡದ ನಾಯಕರಾಗಿದ್ದಾರೆ. ಏಕೆಂದರೆ ತಂಡದ ಖಾಯಂ ನಾಯಕ ರಜತ್ ಪಾಟಿದಾರ್ ಈ ಪಂದ್ಯವನ್ನು ಆಡುತ್ತಿಲ್ಲ. ಟಾಸ್ ಬಳಿಕ ಮಾತನಾಡಿದ ಜಿತೇಶ್, ರಜತ್ ಪಾಟಿದರ್ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಆಡಲಿದ್ದಾರೆ ಎಂಬುದನ್ನು ಖಚಿತಪಡಿಸಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್ 11

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI – ಪ್ರಭ್ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ (ನಾಯಕ), ಕೂಪರ್ ಕಾನೊಲಿ, ಸೂರ್ಯಾಂಶ್ ಶೆಡ್ಜ್, ಶಶಾಂಕ್ ಸಿಂಗ್, ಅಜ್ಮತುಲ್ಲಾ ಒಮರ್ಜೈ, ಹರ್ಪ್ರೀತ್ ಬ್ರಾರ್ (ಮಾರ್ಕೊ ಯಾನ್ಸೆನ್ ಬದಲಿಗೆ), ಲಾಕಿ ಫರ್ಗುಸನ್ (ಕ್ಸೇವಿಯರ್ ಬಾರ್ಟ್ಲೆಟ್ ಬದಲಿಗೆ), ಅರ್ಶ್ದೀಪ್ ಸಿಂಗ್ ಮತ್ತು ಯುಜ್ವೇಂದ್ರ ಚಾಹಲ್.

ಇಂಪ್ಯಾಕ್ಟ್ ಪ್ಲೇಯರ್ಸ್​: ಮಾರ್ಕಸ್ ಸ್ಟೊಯಿನಿಸ್, ಕ್ಸೇವಿಯರ್ ಬಾರ್ಟ್ಲೆಟ್, ವಿಷ್ಣು ವಿನೋದ್, ಮುಶೀರ್ ಖಾನ್ ಮತ್ತು ಪ್ರವೀಣ್ ದುಬೆ.

ಆರ್​​ಸಿಬಿ ಪ್ಲೇಯಿಂಗ್ XI – ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ವೆಂಕಟೇಶ್ ಅಯ್ಯರ್, ಜಿತೇಶ್ ಶರ್ಮಾ (ನಾಯಕ), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್ (ಜಾಕೋಬ್ ಡಫಿ ಬದಲಿಗೆ), ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ (ರಜತ್ ಪಾಟಿದಾರ್ ಬದಲಿಗೆ) ಮತ್ತು ಜೋಶ್ ಹ್ಯಾಜಲ್‌ವುಡ್.

ಇಂಪ್ಯಾಕ್ಟ್ ಪ್ಲೇಯರ್ಸ್​: ರಾಸಿಖ್ ಸಲಾಂ, ಜೋರ್ಡಾನ್ ಕಾಕ್ಸ್, ಅಭಿನಂದನ್ ಸಿಂಗ್, ಸ್ವಪ್ನಿಲ್ ಸಿಂಗ್ ಮತ್ತು ಕನಿಷ್ಕ್ ಚೌಹಾಣ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Sun, 17 May 26

Follow Us