PBKS vs RR Playing XI: ಬಲಿಷ್ಠ ಪಡೆಗಳನ್ನೇ ಕಣಕ್ಕಿಳಿಸಿದ ಕಿಂಗ್ಸ್ ಮತ್ತು ರಾಯಲ್ಸ್

IPL Punjab Kings vs Rajasthan Royals Playing XI: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ​ (ಐಪಿಎಲ್​) ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು 30 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ 17 ಬಾರಿ ಗೆದ್ದರೆ, ಪಂಜಾಬ್ ಕಿಂಗ್ಸ್ ತಂಡವು 13 ಪಂದ್ಯಗಳಲ್ಲಿ ಜಯ ಸಾಧಿಸಿದೆ.

PBKS vs RR Playing XI: ಬಲಿಷ್ಠ ಪಡೆಗಳನ್ನೇ ಕಣಕ್ಕಿಳಿಸಿದ ಕಿಂಗ್ಸ್ ಮತ್ತು ರಾಯಲ್ಸ್
PBKS vs RR

Updated on: Apr 28, 2026 | 7:11 PM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 40ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಿವೆ. ಮುಲ್ಲನ್​ಪುರ್​ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ತಂಡವು ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳಲ್ಲಿ ಕೆಲ ಬದಲಾವಣೆ ಮಾಡಲಾಗಿದೆ.

ಈ ಪಂದ್ಯದಲ್ಲಿ ಶಿಮ್ರಾನ್ ಹೆಟ್ಮೆಯರ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ಪರ ದಸುನ್ ಶಾನಕ ಕಣಕ್ಕಿಳಿದಿದ್ದಾರೆ. ಹಾಗೆಯೇ ರವಿ ಬಿಷ್ಣೋಯ್ ಬದಲಿಗೆ ಯಶ್ ರಾಜ್ ಪೂಂಜಾ ಆಡುತ್ತಿದ್ದಾರೆ. ಇನ್ನು ಪಂಜಾಬ್ ಕಿಂಗ್ಸ್ ಪರ ಸುರ್ಯಾಂಶ್ ಶೆಡ್ಗೆ ಹಾಗೂ ಲಾಕಿ ಫರ್ಗುಸನ್ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್  ಈ ಕೆಳಗಿನಂತಿದೆ…

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ದಸುನ್ ಶಾನಕ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ಬ್ರಿಜೇಶ್ ಶರ್ಮಾ, ಯಶ್ ರಾಜ್ ಪೂಂಜಾ.

ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್ (ನಾಯಕ), ಕೂಪರ್ ಕೊನೊಲಿ, ಸೂರ್ಯಾಂಶ್ ಶೆಡ್ಗೆ, ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಯಾನ್ಸೆನ್, ಲಾಕಿ ಫರ್ಗುಸನ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್.

ಹೆಡ್ ಟು ಹೆಡ್​:

ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ 2008 ರಿಂದ ಐಪಿಎಲ್​ನಲ್ಲಿ ಕಣಕ್ಕಿಳಿಯುತ್ತಿರುವ ತಂಡಗಳು. ಈ ತಂಡಗಳು ಈವರೆಗೆ 30 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಅತ್ಯಧಿಕ ಪಂದ್ಯಗಳನ್ನು ಗೆದ್ದಿರುವುದು ರಾಜಸ್ಥಾನ್ ರಾಯಲ್ಸ್. ಆರ್​ಆರ್​ ಒಟ್ಟು 17 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೆ, ಪಂಜಾಬ್ ಕಿಂಗ್ಸ್ ಕೇವಲ 13 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ.

ಇದಾಗ್ಯೂ ಕಳೆದ ಸೀಸನ್​ನಲ್ಲಿನ ಮುಖಾಮುಖಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಮ್ಯಾಚ್​ನಲ್ಲಿ ಜಯ ಸಾಧಿಸಿತ್ತು. ಅಲ್ಲದೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ಪಂಜಾಬ್ ಕಿಂಗ್ಸ್ ಅಗ್ರಸ್ಥಾನದಲ್ಲಿದ್ದರೆ, ರಾಜಸ್ಥಾನ್ ರಾಯಲ್ಸ್ ನಾಲ್ಕನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ರಾಜಸ್ಥಾನ್ ರಾಯಲ್ಸ್ ತಂಡ: ರಿಯಾನ್ ಪರಾಗ್ (ನಾಯಕ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಶುಭಂ ದುಬೆ, ವೈಭವ್ ಸೂರ್ಯವಂಶಿ, ಲುವಾನ್-ಡ್ರೆ ಪ್ರಿಟೋರಿಯಸ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ ಜುರೆಲ್, ಯುಧ್ವೀರ್ ಸಿಂಗ್ ಚರಕ್, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಕ್ವೇನಾ ಮಫಾಕ, ನಾಂಡ್ರೆ ಬರ್ಗರ್, ರವಿ ಬಿಷ್ಣೋಯ್, ಸುಶಾಂತ್ ಮಿಶ್ರಾ, ಯಶ್ ರಾಜ್ ಪುಂಜಾ, ವಿಘ್ನೇಶ್ ಪುತ್ತೂರ್, ರವಿ ಸಿಂಗ್, ಅಮನ್ ರಾವ್, ಬ್ರಿಜೇಶ್ ಶರ್ಮಾ, ಆಡಮ್ ಮಿಲ್ನ್​, ಕುಲದೀಪ್ ಸೇನ್.

ಇದನ್ನೂ ಓದಿ: ಸೋಲಿನ ನಡುವೆಯೂ RCBಯ ಕಾಲೆಳೆದ ಡೆಲ್ಲಿ ಕ್ಯಾಪಿಟಲ್ಸ್ ಫ್ಯಾನ್ಸ್​!

ಪಂಜಾಬ್ ಕಿಂಗ್ಸ್ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಪ್ರಭ್​ಸಿಮ್ರಾನ್ ಸಿಂಗ್, ಪ್ರಿಯಾಂಶ್ ಆರ್ಯ, ಶಶಾಂಕ್ ಸಿಂಗ್, ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಅಝ್ಮತುಲ್ಲಾ ಒಮರ್​ಝಾಹಿ, ಮಾರ್ಕೊ ಯಾನ್ಸೆನ್, ಹರ್ಪ್ರೀತ್ ಬ್ರಾರ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಶೀರ್ ಖಾನ್, ಪ್ಯಾಲಾ ಅವಿನಾಶ್, ಹರ್ನೂರ್ ಪನ್ನು, ಸೂರ್ಯಾಂಶ್ ಶೆಡ್ಗೆ, ಮಿಚೆಲ್ ಓವನ್, ಕ್ಸೇವಿಯರ್ ಬಾರ್ಟ್ಲೆಟ್, ಲಾಕಿ ಫರ್ಗುಸನ್, ವೈಶಾಕ್ ವಿಜಯ್‌ಕುಮಾರ್, ಯಶ್ ಠಾಕೂರ್, ವಿಷ್ಣು ವಿನೋದ್, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ಪ್ರವೀಣ್ ದುಬೆ, ವಿಶಾಲ್ ನಿಶಾದ್.

 

Follow Us