PBKS vs SRH Playing XI IPL 2022: ಗೆಲುವಿನ ಲಯದಲ್ಲಿ ಉಭಯ ತಂಡಗಳು: ಹೀಗಿರಲಿದೆ ಪ್ಲೇಯಿಂಗ್ 11

PBKS vs SRH Playing XI: ಮುಂಬೈ ಇಂಡಿಯನ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ, ತಂಡದ ನಾಯಕ ಮಯಾಂಕ್ ಅಗರ್ವಾಲ್ ಮತ್ತು ಶಿಖರ್ ಧವನ್ ಜೋಡಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದರು.

PBKS vs SRH Playing XI IPL 2022: ಗೆಲುವಿನ ಲಯದಲ್ಲಿ ಉಭಯ ತಂಡಗಳು: ಹೀಗಿರಲಿದೆ ಪ್ಲೇಯಿಂಗ್ 11
PBKS vs SRH
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 16, 2022 | 8:02 PM

ಇಂಡಿಯನ್ ಪ್ರೀಮಿಯರ್ ಲೀಗ್​ನ 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಗೆಲುವಿನ ಲಯದಲ್ಲಿದ್ದು, ಹೀಗಾಗಿ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ಎದುರು ನೋಡಬಹುದು. ಏಕೆಂದರೆ ಸನ್​ರೈಸರ್ಸ್​ ಹೈದರಾಬಾದ್ ತಂಡವು ಮೊದಲೆರಡು ಪಂದ್ಯಗಳಲ್ಲಿನ ಸೋಲಿನ ನಂತರ ಪ್ರಚಂಡ ಪುನರಾಗಮನ ಮಾಡಿದೆ. ಆ ಬಳಿಕ ಸತತ 3 ಪಂದ್ಯಗಳನ್ನು ಗೆದ್ದು ಎಲ್ಲರನ್ನು ಅಚ್ಚರಿಗೊಳಿಸಿದೆ. ಅದೇ ಫಾರ್ಮ್ ಅನ್ನು ಕಾಯ್ದುಕೊಳ್ಳುವ ಗುರಿಯೊಂದಿಗೆ, ಹೈದರಾಬಾದ್ ತಂಡವು ಭಾನುವಾರ ಮೈದಾನಕ್ಕೆ ಇಳಿಯಲಿದೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್​ ತಂಡವು 3 ಪಂದ್ಯಗಳನ್ನು ಗೆದ್ದಿದ್ದರೆ, 2 ರಲ್ಲಿ ಸೋತಿದೆ. ಹೈದರಾಬಾದ್ ಎರಡು ಸೋಲಿನ ನಂತರ ಮೂರು ಗೆಲುವು ದಾಖಲಿಸಿದೆ. ಹೀಗಾಗಿ ಈ ಪಂದ್ಯದ ಫಲಿತಾಂಶ ಉಭಯ ತಂಡಗಳ ಪಾಯಿಂಟ್​ ಟೇಬಲ್​ನಲ್ಲಿನ ಸ್ಥಾನವನ್ನು ಬದಲಿಸಲಿದೆ. ಹಾಗಾಗಿ ಎರಡೂ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ.

ಬೈರ್‌ಸ್ಟೋ ಸ್ಥಾನಕ್ಕೆ ರಾಜಪಕ್ಸೆ? ಮುಂಬೈ ಇಂಡಿಯನ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ, ತಂಡದ ನಾಯಕ ಮಯಾಂಕ್ ಅಗರ್ವಾಲ್ ಮತ್ತು ಶಿಖರ್ ಧವನ್ ಜೋಡಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದರು. ಅಲ್ಲದೆ ನಂತರ ಬಂದ ಇತರ ಬ್ಯಾಟ್ಸ್‌ಮನ್‌ಗಳು ಕೆಳ ಕ್ರಮಾಂಕದಲ್ಲಿ ಕೊಡುಗೆ ನೀಡಿದರು. ಇದಾಗ್ಯೂ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜಾನಿ ಬೈರ್‌ಸ್ಟೋವ್ ಸತತವಾಗಿ ವಿಫಲರಾಗುತ್ತಿದ್ದಾರೆ. ಹೀಗಾಗಿ ಮೊದಲ ಮೂರು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಭಾನುಕಾ ರಾಜಪಕ್ಸೆ ಅವರಿಗೆ ಚಾನ್ಸ್ ನೀಡುವ ಸಾಧ್ಯತೆಯಿದೆ.

ಮತ್ತೊಂದೆಡೆ ಎಸ್​ಆರ್​ಹೆಚ್​ ತಂಡದ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಗಾಯಗೊಂಡಿದ್ದರಿಂದ ಕಳೆದ ಪಂದ್ಯದಲ್ಲಿ ಒಂದೇ ಒಂದು ಬದಲಾವಣೆ ಮಾಡಿ ಜಗದೀಶ ಸುಚಿತ್ ಗೆ ಅವಕಾಶ ನೀಡಿತ್ತು. ಈ ಪಂದ್ಯಕ್ಕೂ ಅವರು ಫಿಟ್ ಆಗುವುದು ಅನುಮಾನ. ಹೀಗಾಗಿ ಸುಚಿತ್ ಅವರನ್ನು ಉಳಿಸಿಕೊಳ್ಳಬಹುದು. ಹಾಗಾಗಿ ಎಸ್​ಆರ್​ಹೆಚ್​​ ತಂಡದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ ಎನ್ನಬಹುದು. ಅದರಂತೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ.

ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟನ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಓಡಿಯನ್ ಸ್ಮಿತ್, ಕಗಿಸೊ ರಬಾಡ, ಅರ್ಶ್‌ದೀಪ್ ಸಿಂಗ್, ರಾಹುಲ್ ಚಹರ್, ವೈಭವ್ ಅರೋರಾ

ಸನ್‌ರೈಸರ್ಸ್ ಹೈದರಾಬಾದ್ : ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ಜಗದೀಶ ಸುಚಿತ್, ಭುವನೇಶ್ವರ್ ಕುಮಾರ್, ಮಾರ್ಕೊ ಯಾನ್ಸನ್, ಉಮ್ರಾನ್ ಮಲಿಕ್ ಮತ್ತು ಟಿ ನಟರಾಜನ್

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ