AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PCB: ಸುಪ್ರೀಂ ಕೋರ್ಟ್ ವಕೀಲನಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಪಟ್ಟ

PCB chairman: ಝಾಕಾ ಅಶ್ರಫ್ ರಾಜೀನಾಮೆಯಿಂದ ತೆರವಾಗಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೂತನ ಅಧ್ಯಕ್ಷರ ಹೆಸರನ್ನು ಪ್ರಕಟಿಸಲಾಗಿದೆ. ಅಚ್ಚರಿಯ ವಿಷಯವೆಂದರೆ ಈ ಬಾರಿ ಪಾಕಿಸ್ತಾನ ಸುಪ್ರೀಂ ಕೋರ್ಟ್‌ನ ವಕೀಲರನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

PCB: ಸುಪ್ರೀಂ ಕೋರ್ಟ್ ವಕೀಲನಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಪಟ್ಟ
ಶಾ ಖಾವರ್
ಪೃಥ್ವಿಶಂಕರ
|

Updated on: Jan 24, 2024 | 6:18 PM

Share

ಕಳೆದ ಒಂದು ವರ್ಷದಿಂದ ಒಂದಿಲ್ಲೊಂದು ವಿವಾದಗಳಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (Pakistan Cricket Board) ಸದಾ ಚರ್ಚೆಯಲ್ಲಿದೆ. ಕಳೆದ ವರ್ಷ ಪಿಸಿಬಿ ಅಧ್ಯಕ್ಷ ಸ್ಥಾನಕ್ಕೆ ರಮೀಜ್ ರಾಜಾ ರಾಜೀನಾಮೆ ನೀಡಿದ ನಂತರ, ಯಾರೂ ಈ ಹುದ್ದೆಯಲ್ಲಿ ಹೆಚ್ಚು ದಿನ ಉಳಿಯುತ್ತಿಲ್ಲ. ಮೊದಲಿಗೆ ನಜಮ್ ಸೇಥಿ ಅವರಿಗೆ ಪಿಸಿಬಿಯ ನಿರ್ವಹಣಾ ಸಮಿತಿಯ ಉಸ್ತುವಾರಿ ನೀಡಲಾಗಿತ್ತು. ಆ ನಂತರ ಈ ಹುದ್ದೆಗೆ ಝಾಕಾ ಅಶ್ರಫ್ (Zaka Ashraf) ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ತಂಡದ ಕಳಪೆ ಪ್ರದರ್ಶನದಿಂದ ಬೇಸತ್ತ ಅಶ್ರಫ್ ಕೂಡ ಕೆಲವು ದಿನಗಳ ಹಿಂದೆ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಉಸ್ತುವಾರಿ ಸಿಎಂ ಮೊಹ್ಸಿನ್ ನಖ್ವಿ ಅವರಿಗೆ ಉಸ್ತುವಾರಿ ವಹಿಸುವ ಬಗ್ಗೆ ಚರ್ಚೆ ನಡೆದಿತ್ತು. ಇದನ್ನು ಸ್ವತಃ ನಖ್ವಿ ಕೂಡ ಖಚಿತಪಡಿಸಿದ್ದರು. ಆದರೀಗ ನಖ್ವಿ ಬದಲಿಗೆ ಶಾ ಖಾವರ್‌ಗೆ (Shah Khawar) ಪಿಸಿಬಿ ಅಧ್ಯಕ್ಷ ಹುದ್ದೆಯನ್ನು ನೀಡಲಾಗಿದೆ.

ಶಾ ಖಾವರ್‌ ಸುಪ್ರೀಂ ಕೋರ್ಟ್ ವಕೀಲ

ಪ್ರಸ್ತುತ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷರ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಶಾ ಖಾವರ್‌, ಪಾಕಿಸ್ತಾನದ ಸುಪ್ರೀಂ ಕೋರ್ಟ್ ವಕೀಲರಾಗಿದ್ದಾರೆ. ಹಾಗೆಯೇ ಪಿಸಿಬಿಯ ಚುನಾವಣಾ ಆಯುಕ್ತರೂ ಆಗಿದ್ದಾರೆ. ಈ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ ಮಾತನಾಡಿದ ಅವರು, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷರ ಚುನಾವಣೆಯನ್ನು ಆದಷ್ಟು ಬೇಗ ನಡೆಸುವುದು ತಮ್ಮ ಆದ್ಯತೆಯಾಗಿದೆ. ಈ ಜವಾಬ್ದಾರಿಯನ್ನು ನನಗೆ ನೀಡಿದಕ್ಕಾಗಿ ಪಾಕಿಸ್ತಾನದ ಪ್ರಧಾನಿ ಅನ್ವರ್-ಉಲ್-ಹಕ್ ಕಕ್ಕರ್ ಅವರಿಗೆ ಧನ್ಯವಾದಗಳು ಎಂದಿದ್ದಾರೆ.

ಪಾಕ್ ಕ್ರಿಕೆಟ್ ಮಂಡಳಿಯಲ್ಲಿ ಅಲ್ಲೋಲ ಕಲ್ಲೋಲ; ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಝಾಕಾ ಅಶ್ರಫ್..!

ಈ ಬಗ್ಗೆ ತನ್ನ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ, ಅಂತರ-ಪ್ರಾಂತೀಯ ಸಮನ್ವಯ (IPC) ಸಚಿವಾಲಯವು ಜನವರಿ 23, 2024 ರಂದು ಹೊರಡಿಸಿದ ಅಧಿಸೂಚನೆ ಮತ್ತು PCB ಸಂವಿಧಾನದ 7 (2) ನೇ ವಿಧಿಯ ಪ್ರಕಾರ, ಚುನಾವಣಾ ಆಯುಕ್ತರನ್ನು PCB ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ತಿಳಿಸಿದೆ.

14 ತಿಂಗಳಲ್ಲಿ 5 ಅಧ್ಯಕ್ಷರು

ಕಳೆದ 14 ತಿಂಗಳಲ್ಲಿ ಪಿಸಿಬಿ ಅಧ್ಯಕ್ಷರಾದ 5ನೇ ವ್ಯಕ್ತಿ ಪಾಕಿಸ್ತಾನದ ಸುಪ್ರೀಂ ಕೋರ್ಟ್ ವಕೀಲ ಶಾ ಖಾವರ್. ಶಾ ಖಾವರ್‌ಗಿಂತ ಮೊದಲು, ರಮೀಜ್ ರಾಜಾ, ನಜಮ್ ಸೇಥಿ, ಅಹ್ಮದ್ ಶಹಜಾದ್ ಫಾರೂಕ್ ರಾಣಾ ಮತ್ತು ಝಕಾ ಅಶ್ರಫ್ ಈ ಹುದ್ದೆಯಲ್ಲಿದ್ದರು.

ಶಾ ಖಾವರ್ ಹೇಳಿದ್ದೇನು?

ಈ ಜವಾಬ್ದಾರಿಯನ್ನು ಸ್ವೀಕರಿಸಿದ ಬಳಿಕ ಹೇಳಿಕೆ ನೀಡಿದ ಖಾವರ್ ಅವರು, ‘ನನ್ನ ಮೇಲೆ ವಿಶ್ವಾಸವಿಟ್ಟಿದ್ದಕ್ಕಾಗಿ ಪಿಸಿಬಿಯ ಪೋಷಕ ಮತ್ತು ಪಾಕಿಸ್ತಾನದ ಪ್ರಧಾನಿ ಶ್ರೀ ಅನ್ವರ್-ಉಲ್-ಹಕ್ ಕಕ್ಕರ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಪಿಸಿಬಿ ಅಧ್ಯಕ್ಷ ಸ್ಥಾನಕ್ಕಾಗಿ ಆದಷ್ಟು ಬೇಗ ನ್ಯಾಯಸಮ್ಮತ ಚುನಾವಣೆಯನ್ನು ಆಯೋಜಿಸುವುದು ನನ್ನ ಮೊದಲ ಜವಾಬ್ದಾರಿಯಾಗಿದೆ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಟಿವಿ9 ವರದಿಯ ಪರಿಣಾಮ: ತೆಕ್ಕಲಕೋಟೆ ಆಸ್ಪತ್ರೆ ವಾರ್ಡ್‌ಗೆ ಹೊಸ UPS ಅಳವಡಿಕೆ
ಟಿವಿ9 ವರದಿಯ ಪರಿಣಾಮ: ತೆಕ್ಕಲಕೋಟೆ ಆಸ್ಪತ್ರೆ ವಾರ್ಡ್‌ಗೆ ಹೊಸ UPS ಅಳವಡಿಕೆ
ಪೊಲೀಸರ ಜೀಪನ್ನೇ ಅಲುಗಾಡಿಸಿ ವಿದ್ಯಾರ್ಥಿನಿಯರ ಆಕ್ರೋಶ
ಪೊಲೀಸರ ಜೀಪನ್ನೇ ಅಲುಗಾಡಿಸಿ ವಿದ್ಯಾರ್ಥಿನಿಯರ ಆಕ್ರೋಶ
ಪ್ರಜ್ವಲ್ ರೇವಣ್ಣ ಜೈಲು ಸ್ಥಳಾಂತರ ರದ್ದಾಗಲು ಪ್ರಭಾವಿ ವ್ಯಕ್ತಿ ಕರೆಯೇ ಕಾರಣ
ಪ್ರಜ್ವಲ್ ರೇವಣ್ಣ ಜೈಲು ಸ್ಥಳಾಂತರ ರದ್ದಾಗಲು ಪ್ರಭಾವಿ ವ್ಯಕ್ತಿ ಕರೆಯೇ ಕಾರಣ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ