Champions Trophy 2025: ಬಿಸಿಸಿಐ- ಪಿಸಿಬಿ ಸಭೆ; ಪಾಕಿಸ್ತಾನಕ್ಕೆ ಹೋಗುತ್ತಾ ಟೀಂ ಇಂಡಿಯಾ?

Champions Trophy 2025: ವರದಿಯ ಪ್ರಕಾರ, ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸುವಂತೆ ಬಿಸಿಸಿಐಗೆ ಮನವರಿಕೆ ಮಾಡಲು ಪಿಸಿಬಿ ಎಲ್ಲ ಪ್ರಯತ್ನಗಳನ್ನು ಮಾಡಿದೆ ಆದರೆ ಈ ನಿರ್ಧಾರವು ಸಂಪೂರ್ಣವಾಗಿ ಸರ್ಕಾರದ ಮೇಲೆ ಅವಲಂಬಿತವಾಗಿದೆ ಎಂದು ಬಿಸಿಸಿಐ ಹೇಳಿದೆ ಎಂದು ವರದಿಯಾಗಿದೆ.

Champions Trophy 2025: ಬಿಸಿಸಿಐ- ಪಿಸಿಬಿ ಸಭೆ; ಪಾಕಿಸ್ತಾನಕ್ಕೆ ಹೋಗುತ್ತಾ ಟೀಂ ಇಂಡಿಯಾ?
ಚಾಂಪಿಯನ್ಸ್ ಟ್ರೋಫಿ 2025
Follow us
ಪೃಥ್ವಿಶಂಕರ
|

Updated on:Jun 14, 2024 | 4:44 PM

2025 ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿಗೆ (Champions Trophy 2025) ಪಾಕಿಸ್ತಾನ ಆತಿಥ್ಯ ವಹಿಸುತ್ತಿದೆ. ಆದರೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನು ಗಮನಿಸಿದರೆ, ಈ ಐಸಿಸಿ (ICC) ಟೂರ್ನಿಯಲ್ಲಿ ಟೀಂ ಇಂಡಿಯಾ ಭಾಗವಹಿಸುವ ಬಗ್ಗೆ ಅನುಮಾನವಿದೆ. ಬಿಸಿಸಿಐ ಕೂಡ ಈ ಬಗ್ಗೆ ತನ್ನ ನಿಲುವನ್ನು ಇದುವರೆಗೆ ಸ್ಪಷ್ಟಪಡಿಸದಿದ್ದರೂ, ಟೀಂ ಇಂಡಿಯಾವನ್ನು (Team India) ಪಾಕಿಸ್ತಾನಕ್ಕೆ ಕಳುಹಿಸುವುದು, ಬಿಡುವುದು, ಭಾರತ ಸರ್ಕಾರಕ್ಕೆ ಬಿಟ್ಟಿದ್ದು ಎಂಬ ಸಂದೇಶವನ್ನು ಈಗಾಗಲೇ ನೀಡಿದೆ. ಮತ್ತೊಂದೆಡೆ, ಈ ಪಂದ್ಯಾವಳಿಗಾಗಿ ಭಾರತ ತಂಡವು ಪಾಕಿಸ್ತಾನಕ್ಕೆ ಪ್ರವಾಸ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಪಿಸಿಬಿ (PCB) ಇನ್ನಿಲ್ಲದ ಪ್ರಯತ್ನವನ್ನು ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಟಿ20 ವಿಶ್ವಕಪ್‌ (T20 World Cup 2024) ಪಂದ್ಯದ ನಡುವೆ ಎರಡೂ ಕ್ರಿಕೆಟ್ ಮಂಡಳಿಗಳು ಈ ವಿಷಯಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿವೆ ಎಂದು ವರದಿಯಾಗಿದೆ.

ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುತ್ತಾ?

ಬಿಸಿಸಿಐ ಮತ್ತು ಪಿಸಿಬಿ ಅಧಿಕಾರಿಗಳು ಒಟ್ಟಾಗಿ ಚಾಂಪಿಯನ್ಸ್ ಟ್ರೋಫಿ 2025 ರ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಿದ್ದಾರೆ ಎಂದು ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ. ವರದಿಯ ಪ್ರಕಾರ, ಎರಡೂ ಮಂಡಳಿಗಳು ಅಮೆರಿಕದಲ್ಲಿ ಸಭೆ ನಡೆಸಿದರೂ ಯಾವುದೇ ಫಲಿತಾಂಶ ಹೊರ ಬಂದಿಲ್ಲ ಎಂದು ಪಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ವರದಿಯ ಪ್ರಕಾರ, ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸುವಂತೆ ಬಿಸಿಸಿಐಗೆ ಮನವರಿಕೆ ಮಾಡಲು ಪಿಸಿಬಿ ಎಲ್ಲ ಪ್ರಯತ್ನಗಳನ್ನು ಮಾಡಿದೆ ಆದರೆ ಈ ನಿರ್ಧಾರವು ಸಂಪೂರ್ಣವಾಗಿ ಸರ್ಕಾರದ ಮೇಲೆ ಅವಲಂಬಿತವಾಗಿದೆ ಎಂದು ಬಿಸಿಸಿಐ ಹೇಳಿದೆ. ಚಾಂಪಿಯನ್ಸ್ ಟ್ರೋಫಿ ಆಡಲು ಟೀಂ ಇಂಡಿಯಾ, ಪಾಕಿಸ್ತಾನಕ್ಕೆ ಹೋಗಬೇಕೇ ಅಥವಾ ಬೇಡವೇ ಎಂಬ ಅಂತಿಮ ನಿರ್ಧಾರವನ್ನು ಭಾರತ ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಬಿಸಿಸಿಐ ಸಭೆಯಲ್ಲಿ ತಿಳಿಸಿದೆ ಎಂದು ವರದಿಯಾಗಿದೆ.

Champions Trophy 2025: ಪಾಕಿಸ್ತಾನದ ಈ 3 ಸ್ಥಳಗಳಲ್ಲಿ ನಡೆಯಲಿದೆ ಚಾಂಪಿಯನ್ಸ್ ಟ್ರೋಫಿ

ಬಿಸಿಸಿಐಗೆ ಪಿಸಿಬಿ ಮನವರಿಕೆ

ಸಭೆಯಲ್ಲಿ, ಭಾರತ ತಂಡದ ಭದ್ರತೆಯನ್ನು ಸಂಪೂರ್ಣವಾಗಿ ನೋಡಿಕೊಳ್ಳುವುದಾಗಿ ಪಿಸಿಬಿ ಹೇಳಿದೆ. ಇದಕ್ಕಾಗಿ ಟೀಂ ಇಂಡಿಯಾ ಲಾಹೋರ್‌ನಲ್ಲಿ ತಂಗಲು ವ್ಯವಸ್ಥೆ ಮಾಡುವುದಾಗಿಯೂ ಮಂಡಳಿ ತಿಳಿಸಿದೆ. ಇದಲ್ಲದೆ ಭಾರತೀಯ ಅಭಿಮಾನಿಗಳು ಕಡಿಮೆ ಪ್ರಮಾಣದಲ್ಲಿ ಪಾಕಿಸ್ತಾನಕ್ಕೆ ಪ್ರಯಾಣ ಮಾಡಬೇಕು. ಹಾಗೆಯೇ ವಾಘಾ ಬಾರ್ಡರ್ ಮೂಲಕವೂ ಪಾಕಿಸ್ತಾನವನ್ನು ಸುಲಭವಾಗಿ ಪ್ರವೇಶಿಸುವಂತೆ ವ್ಯವಸ್ಥೆ ಕಲ್ಪಿಸಿಕೊಡುವುದಾಗಿ ಪಿಸಿಬಿ, ಬಿಸಿಸಿಐಗೆ ಸಭೆಯಲ್ಲಿ ಮನವರಿಕೆ ಮಾಡಿಕೊಟ್ಟಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಇದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

ಅಗ್ರ 8 ತಂಡಗಳಿಗೆ ಆಧ್ಯತೆ

2025 ರಲ್ಲಿ ನಡೆಯಲ್ಲಿರವ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು 8 ತಂಡಗಳ ನಡುವೆ ಆಡಿಸಲಾಗುತ್ತಿದೆ. ಇನ್ನು ಈ ಟೂರ್ನಿಯಲ್ಲಿ ಆಡಲ್ಲಿರುವ 8 ತಂಡಗಳನ್ನು ಏಕದಿನ ವಿಶ್ವಕಪ್​ನಲ್ಲಿ ಆಯ್ಕೆ ಮಾಡಲಾಗಿದೆ. ವಿಶ್ವಕಪ್​ನ ಲೀಗ್ ಸುತ್ತಿನ ಬಳಿಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರ 8 ಸ್ಥಾನ ಪಡೆಯುವ ತಂಡಗಳು ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಲ್ಲಿವೆ ಎಂದು ಈ ಹಿಂದೆ ಐಸಿಸಿ ಹೇಳಿತ್ತು. ಅದರಂತೆ ಏಕದಿನ ವಿಶ್ವಕಪ್​ನ ಲೀಗ್ ಸುತ್ತು ಮುಗಿದ ಬಳಿಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರ 8 ಸ್ಥಾನ ಪಡೆದಿದ್ದ ತಂಡಗಳನ್ನು ಆಯ್ಕೆ ಮಾಡಲಾಗಿದೆ.

8 ತಂಡಗಳು ಇಂತಿವೆ

  • ಭಾರತ
  • ದಕ್ಷಿಣ ಆಫ್ರಿಕಾ
  • ಆಸ್ಟ್ರೇಲಿಯಾ
  • ನ್ಯೂಜಿಲೆಂಡ್
  • ಪಾಕಿಸ್ತಾನ
  • ಅಫ್ಘಾನಿಸ್ತಾನ
  • ಇಂಗ್ಲೆಂಡ್
  • ಬಾಂಗ್ಲಾದೇಶ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Fri, 14 June 24

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್