T20 World Cup: ಟಿ20 ವಿಶ್ವಕಪ್‌ಗೂ ಮುನ್ನ ಪಾಕ್ ತಂಡದಲ್ಲಿ ಬದಲಾವಣೆ..! ಇದು ಚೀಫ್​ಸೆಲೆಕ್ಟರ್ ಹೇಳಿಕೆ

T20 World Cup: ಜಿಯೋ ನ್ಯೂಸ್‌ನ ವರದಿಯ ಪ್ರಕಾರ, ತಂಡವನ್ನು ಬದಲಾಯಿಸುವ ಯಾವುದೇ ಯೋಜನೆ ಇಲ್ಲದಿದ್ದರೂ, ಅಗತ್ಯವಿದ್ದರೆ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಮುಖ್ಯ ಆಯ್ಕೆದಾರರು ಹೇಳಿದ್ದಾರೆ.

T20 World Cup: ಟಿ20 ವಿಶ್ವಕಪ್‌ಗೂ ಮುನ್ನ ಪಾಕ್ ತಂಡದಲ್ಲಿ ಬದಲಾವಣೆ..! ಇದು ಚೀಫ್​ಸೆಲೆಕ್ಟರ್ ಹೇಳಿಕೆ
Pakistan Cricket Team
Follow us
TV9 Web
| Updated By: ಪೃಥ್ವಿಶಂಕರ

Updated on: Sep 23, 2022 | 7:11 AM

ಟಿ20 ವಿಶ್ವಕಪ್‌ಗೆ (T20 World Cup) ಸುಮಾರು ಒಂದು ತಿಂಗಳು ಬಾಕಿ ಉಳಿದಿದ್ದು, ಈ ಟೂರ್ನಿಗೆ ಎಲ್ಲಾ ತಂಡಗಳು ತಮ್ಮ ಆಟಗಾರರ ಹೆಸರನ್ನು ಪ್ರಕಟಿಸಿವೆ. ಆದರೆ ಮಿನಿ ಸಮರಕ್ಕೆ ತಂಡ ಪ್ರಕಟಿಸಿದ ಬಳಿಕ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿರುವ ಪಾಕಿಸ್ತಾನಿ ತಂಡ (Pakistan Cricket Team) ಸೇರಿದಂತೆ ಕೆಲವು ತಂಡಗಳಲ್ಲಿ ಆಯ್ಕೆಯಾದ ಆಟಗಾರರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅಲ್ಲದೆ ಈ ಟೀಕೆಗಳಿಕೆ ಪೂರಕವೆಂಬಂತೆ, ಟಿ20 ವಿಶ್ವಕಪ್​ಗೂ ಮುನ್ನ ಇತರೆ ಸರಣಿಗಳಲ್ಲಿ ನಿರತರಾಗಿರುವ ತಂಡದ ಪ್ರದರ್ಶನವು ಈ ಟೀಕೆಗಳಿಗೆ ಮತ್ತಷ್ಟು ಪುಷ್ಠಿ ನೀಡಿದೆ. ಹೀಗಾಗಿ ತಂಡದ ಆಯ್ಕೆಯ ಬಗ್ಗೆ ಸಾಕಷ್ಟು ತಲೆ ಕೆಡಿಸಿಕೊಂಡಿರುವ ಪಾಕ್ ಮಂಡಳಿ ಈಗ ತಂಡದಲ್ಲಿ ಬದಲಾವಣೆ ಮಾಡುವ ಮಾತುಗಳನ್ನಾಡುತ್ತಿದೆ. ತಂಡದ ಬ್ಯಾಟಿಂಗ್‌ ವಿಭಾಗದಲ್ಲಿ ಸಮಸ್ಯೆಗಳಿರುವುದನ್ನು ಒಪ್ಪಿಕೊಂಡಿರುವ ಪಾಕಿಸ್ತಾನದ ಮುಖ್ಯ ಆಯ್ಕೆದಾರರು, ಅಗತ್ಯವಿದ್ದರೆ ವಿಶ್ವಕಪ್ ತಂಡದಲ್ಲಿಯೂ ಬದಲಾವಣೆಗಳನ್ನು ಮಾಡಬಹುದು ಎಂದಿದ್ದಾರೆ.

ಏಷ್ಯಾಕಪ್‌ನ ಫೈನಲ್‌ನಲ್ಲಿ ಸೋಲಿನ ನಂತರ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಟಿ20 ವಿಶ್ವಕಪ್‌ಗೆ ತಂಡವನ್ನು ಪ್ರಕಟಿಸಿತು. ಈಗಾಗಲೇ ಮಂಡಳಿಯ ದುರ್ನಡತೆಯಿಂದ ನಿರಾಶೆಗೊಂಡಿದ್ದ ಲಕ್ಷಾಂತರ ಅಭಿಮಾನಿಗಳನ್ನು ಇನ್ನಷ್ಟು ಕೆರಳಿಸಿತ್ತು. ಹೀಗಾಗಿ ಅಭಿಮಾನಿಗಳು ಮಾತ್ರವಲ್ಲದೆ, ಹಲವು ಮಾಜಿ ಕ್ರಿಕೆಟಿಗರು ಕೂಡ ಮುಖ್ಯ ಆಯ್ಕೆಗಾರ ಮೊಹಮ್ಮದ್ ವಾಸಿಂ ವಿರುದ್ಧ ತಮ್ಮ ಕೋಪವನ್ನು ಹೊರಹಾಕಿದ್ದರು. ಆದರೆ, ತಂಡ ಘೋಷಣೆಯಾಗುವ ವೇಳೆಗೆ ಆಟಗಾರರ ಆಯ್ಕೆಗೆ ಕಾರಣಗಳನ್ನು ನೀಡಿದ್ದ ವಾಸಿಂ, ಈಗ ತಂಡದ ಸ್ಥಿತಿಗತಿ ನೋಡಿ ಬೇಕಾದರೆ ಬದಲಾವಣೆಯನ್ನೂ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.

ತಂಡದಲ್ಲಿ ಬದಲಾವಣೆ ಆಗುತ್ತದೆಯೇ?

ಜಿಯೋ ನ್ಯೂಸ್‌ನ ವರದಿಯ ಪ್ರಕಾರ, ತಂಡವನ್ನು ಬದಲಾಯಿಸುವ ಯಾವುದೇ ಯೋಜನೆ ಇಲ್ಲದಿದ್ದರೂ, ಅಗತ್ಯವಿದ್ದರೆ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಮುಖ್ಯ ಆಯ್ಕೆದಾರರು ಹೇಳಿದ್ದಾರೆ. ಆದರೆ, ಆಯ್ಕೆಯಾದ ಆಟಗಾರರು ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿರುವ ವಾಸಿಂ, ತಂಡದಲ್ಲಿ ಯಾವ ಬದಲಾವಣೆಗಳನ್ನು ಮಾಡಬಹುದು ಎಂದು ನಾನು ಸಂಪೂರ್ಣವಾಗಿ ಹೇಳಲಾರೆ. ಪಂದ್ಯಾವಳಿಗೆ ಆಯ್ಕೆಯಾಗಿರುವ ಆಟಗಾರರು (ಪಾಕಿಸ್ತಾನ-ಇಂಗ್ಲೆಂಡ್ ಸರಣಿಯಲ್ಲಿ) ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಬ್ಯಾಟಿಂಗ್‌ನಲ್ಲಿ ಸಮಸ್ಯೆಗಳು

ಅಂದಹಾಗೆ, ಪಾಕಿಸ್ತಾನಿ ತಂಡದ ದೊಡ್ಡ ಸಮಸ್ಯೆ ಎಂದರೆ ಅದರ ಬ್ಯಾಟಿಂಗ್‌ ವಿಭಾಗ ಎಂದು ಒಪ್ಪಿಕೊಂಡ ವಾಸೀಮ್, ಪಾಕಿಸ್ತಾನ ತಂಡ ಬ್ಯಾಟಿಂಗ್ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ. ಟೀಮ್ ಮ್ಯಾನೇಜ್‌ಮೆಂಟ್ ಕೂಡ ಪ್ರಸಕ್ತ ಸರಣಿಯಲ್ಲಿ ವಿಭಿನ್ನ ಸಂಯೋಜನೆಗಳನ್ನು ಪ್ರಯತ್ನಿಸುತ್ತಿದೆ ಮತ್ತು ಬೆಂಚ್ ಬಲಕ್ಕೆ ಸಹ ಅವಕಾಶಗಳನ್ನು ನೀಡುತ್ತಿದೆ. ವಿಶ್ವಕಪ್ ಹತ್ತಿರದಲ್ಲಿದೆ ಆದರೆ ಸತತ ಎರಡು ಸೋಲಿನ ಬಗ್ಗೆ ನಾವು ಹೆಚ್ಚು ಚಿಂತಿಸುವುದಿಲ್ಲ ಎಂದಿದ್ದಾರೆ.

ವಿಶ್ವಕಪ್‌ಗೆ ಪಾಕಿಸ್ತಾನದಿಂದ ಆಯ್ಕೆಯಾಗಿರುವ ಹೆಚ್ಚಿನ ಆಟಗಾರರು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡುತ್ತಿದ್ದಾರೆ. ಆದರೆ ತಂಡವು ಮೊದಲ ಪಂದ್ಯದಲ್ಲಿ ಸೋಲು ಎದುರಿಸಬೇಕಾಯಿತು. ಇಲ್ಲಿಯೂ ಉತ್ತಮ ಆರಂಭವಿದ್ದರೂ ದೊಡ್ಡ ಮೊತ್ತ ಗಳಿಸಲು ಸಾಧ್ಯವಾಗದ ತಂಡದ ಬ್ಯಾಟಿಂಗ್ ಸಮಸ್ಯೆಗೆ ಕಾರಣವಾಗಿತ್ತು.

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್