
ಮೇ 31 ರಂದು 2026 ರ ಐಪಿಎಲ್ನ (IPL 2026) ಫೈನಲ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಲಿದೆ. ಅದೇ ದಿನ ಐಸಿಸಿಯ (ICC) ವಾರ್ಷಿಕ ಮಂಡಳಿ ಸಭೆಯೂ ಅಹಮದಾಬಾದ್‌ನಲ್ಲಿ ನಡೆಯಲಿದೆ. ಹೀಗಾಗಿ ಈ ಎರಡು ಕಾರ್ಯಕ್ರಮಗಳಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ (Mohsin Naqvi) ಆಹ್ವಾನ ಬಂದಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ್ದವು. ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಬಳಿಕ ನಖ್ವಿಗೆ ಆಹ್ವಾನ ನೀಡಿರುವುದಕ್ಕೆ ಭಾರತೀಯರು ಆಕ್ರೋಶ ಹೊರಹಾಕಿದ್ದರು. ಆದರೀಗ ಈ ಬಗ್ಗೆ ಆಪ್ತ ಮೂಲಗಳಿಂದ ಮಾಹಿತಿ ಹೊರಬಿದ್ದಿದ್ದು, ಮೊಹ್ಸಿನ್ ನಖ್ವಿಗೆ ಯಾವುದೇ ರೀತಿಯ ಆಹ್ವಾನ ನೀಡಲಾಗಿಲ್ಲ ಎಂಬುದು ತಿಳಿದುಬಂದಿದೆ. ಅಲ್ಲದೆ ನಖ್ವಿ ವಿಡಿಯೋ ಕಾನ್ಫರೆನ್ಸ್ ಮೂಲಕ ಐಸಿಸಿ ನಿರ್ದೇಶಕರ ಮಂಡಳಿಯ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.
ಪಿಟಿಐ ವರದಿಯ ಪ್ರಕಾರ, ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರನ್ನು ಅಹಮದಾಬಾದ್‌ನಲ್ಲಿ ನಡೆಯುವ ಐಪಿಎಲ್ 2026 ರ ಫೈನಲ್‌ಗೆ ಆಹ್ವಾನಿಸಲಾಗಿಲ್ಲ. ಅಲ್ಲದೆ ನಖ್ವಿ ಮೇ 31 ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಐಸಿಸಿ ಮಂಡಳಿಯ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯು ಮೂಲತಃ ಕಳೆದ ತಿಂಗಳು ದೋಹಾದಲ್ಲಿ ನಡೆಯಬೇಕಿತ್ತು, ಆದರೆ ಪಶ್ಚಿಮ ಏಷ್ಯಾದಲ್ಲಿನ ಪ್ರಸ್ತುತ ಬಿಕ್ಕಟ್ಟಿನಿಂದಾಗಿ ಮುಂದೂಡಲ್ಪಟ್ಟಿತು. ಇದೀಗ ಆ ಸಭೆ ಭಾರತದಲ್ಲಿ ನಡೆಯಲಿದೆ.
ವಾಸ್ತವವಾಗಿ ಪ್ರಯಾಣಿಸಲು ಸಾಧ್ಯವಾಗದ ಸದಸ್ಯ ಪ್ರತಿನಿಧಿಗಳಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ಅದರಂತೆ ನಖ್ವಿ ಸೇರಿದಂತೆ ಇನ್ನು ಇಬ್ಬರು ಪ್ರತಿನಿಧಿಗಳಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಇನ್ನು ಈ ಸಭೆಯಲ್ಲಿ ಐಸಿಸಿ ಮುಖ್ಯ ಕಾರ್ಯನಿರ್ವಾಹಕ ಸಮಿತಿ (ಸಿಇಸಿ) ಮತ್ತು ಮಂಡಳಿ ಸೇರಿದಂತೆ ಹಲವಾರು ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ನ ಭವಿಷ್ಯದ ರಚನೆ ಮತ್ತು ನಿರ್ದೇಶನದ ಬಗ್ಗೆಯೂ ಚರ್ಚಿಸುವ ನಿರೀಕ್ಷೆಯಿದೆ.
ಪಾಕ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ತನ್ನ ದೇಶದ ಪ್ರಧಾನಿ ಹೆಸರೇ ಗೊತ್ತಿಲ್ಲ
ಐಪಿಎಲ್ 2026 ರ ಫೈನಲ್ ಪಂದ್ಯವನ್ನು ಹಾಲಿ ಚಾಂಪಿಯನ್ ಆರ್‌ಸಿಬಿಯ ತವರು ಮೈದಾನ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಆದಾಗ್ಯೂ, ಟಿಕೆಟ್ ವಿವಾದದಿಂದಾಗಿ, ಬಿಸಿಸಿಐ ಫೈನಲ್ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಿತು. ಪ್ಲೇಆಫ್ ಪಂದ್ಯಗಳು ಮೇ 26 ರಂದು ಪ್ರಾರಂಭವಾಗಲಿವೆ. ಮೊದಲ ಕ್ವಾಲಿಫೈಯರ್ ಪಂದ್ಯವು ಮೇ 26 ರಂದು ಧರ್ಮಶಾಲಾದಲ್ಲಿ ನಡೆಯಲಿದೆ. ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ 2 ಕ್ರಮವಾಗಿ ಮೇ 27 ಮತ್ತು 29 ರಂದು ನ್ಯೂ ಚಂಡೀಗಢದಲ್ಲಿ ನಡೆಯಲಿವೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ