AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPLಗೆ ಎಂಟ್ರಿ ಬೆನ್ನಲ್ಲೇ PSL​ನಿಂದ ಬ್ಯಾನ್!

Blessing Muzarabani: ಐಪಿಎಲ್ 2025 ರಲ್ಲಿ ಆರ್​ಸಿಬಿ ತಂಡಕ್ಕೆ ತಾತ್ಕಾಲಿಕ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದ ಬ್ಲೆಸ್ಸಿಂಗ್ ಮುಝರಬಾನಿ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು. 6 ಪಂದ್ಯಗಳಲ್ಲಿ ಮಾರಕ ದಾಳಿ ಸಂಘಟಿಸಿದ್ದ ಬ್ಲೆಸ್ಸಿಂಗ್ ಮುಝರಬಾನಿ ಒಟ್ಟು 13 ವಿಕೆಟ್ ಕಬಳಿಸಿದ್ದರು. ಹೀಗಾಗಿ ಮುಸ್ತಫಿಝುರ್ ರೆಹಮಾನ್ ಬದಲಿಯಾಗಿ ಬ್ಲೆಸ್ಸಿಂಗ್ ಮುಝರಬಾನಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

IPLಗೆ ಎಂಟ್ರಿ ಬೆನ್ನಲ್ಲೇ PSL​ನಿಂದ ಬ್ಯಾನ್!
Blessing Muzarabani
ಝಾಹಿರ್ ಯೂಸುಫ್
|

Updated on: Mar 14, 2026 | 2:08 PM

Share

ಝಿಂಬಾಬ್ವೆ ತಂಡದ ವೇಗದ ಬೌಲರ್ ಬ್ಲೆಸ್ಸಿಂಗ್ ಮುಝರಬಾನಿ (Blessing Muzarabani) ಅವರು ಪಾಕಿಸ್ತಾನ್ ಸೂಪರ್ ಲೀಗ್ (PSL) ಒಪ್ಪಂದವನ್ನು ಉಲ್ಲಂಘಿಸಿರುವ ಕಾರಣ, ಪಾಕ್ ಕ್ರಿಕೆಟ್ ಮಂಡಳಿ (PCB) ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ. ಮುಝರಬಾನಿ ಮುಂಬರುವ PSL 2026 ಸೀಸನ್‌ಗಾಗಿ ಇಸ್ಲಾಮಾಬಾದ್ ಯುನೈಟೆಡ್ ತಂಡದೊಂದಿಗೆ ಸುಮಾರು 1.1 ಕೋಟಿ ರೂಪಾಯಿ (PKR) ಮೊತ್ತಕ್ಕೆ ಒಪ್ಪಂದ ಮಾಡಿಕೊಂಡಿದ್ದರು.

ಆದರೆ ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚಾನ್ಸ್ ಸಿಗುತ್ತಿದ್ದಂತೆ ಮುಝರಬಾನಿ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಟ್ಟಿದ್ದಾರೆ. ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್  ಬದಲಿಯಾಗಿ ಬ್ಲೆಸ್ಸಿಂಗ್ ಮುಝರಬಾನಿ ಅನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ.

ಪಿಸಿಬಿ ಕಾನೂನು ಕ್ರಮ:

ಬ್ಲೆಸ್ಸಿಂಗ್ ಮುಝರಬಾನಿ ಈಗಾಗಲೇ ಸಹಿ ಮಾಡಿದ ಒಪ್ಪಂದವನ್ನು ಅರ್ಧದಲ್ಲೇ ಕೈಬಿಟ್ಟಿರುವುದು ನಿಯಮ ಬಾಹಿರ ಎಂದು ಪರಿಗಣಿಸಿರುವ PCB, ಅವರ ವಿರುದ್ಧ ಮೊಕದ್ದಮೆ ಹೂಡಲು ಮತ್ತು ಭವಿಷ್ಯದ PSL ಪಂದ್ಯಗಳಿಂದ ಅವರನ್ನು ನಿಷೇಧಿಸಲು ಯೋಜಿಸುತ್ತಿದೆ.

ಕಳೆದ ವರ್ಷ ಸೌತ್ ಆಫ್ರಿಕಾದ ಕಾರ್ಬಿನ್ ಬಾಷ್ ಕೂಡ ಇದೇ ರೀತಿ ಪೆಶಾವರ್ ಝಲ್ಮಿ ತಂಡವನ್ನು ಬಿಟ್ಟು ಮುಂಬೈ ಇಂಡಿಯನ್ಸ್ ಸೇರಿದ್ದರು. ಆಗ PCB ಅವರಿಗೆ ಒಂದು ವರ್ಷದ ನಿಷೇಧ ಹೇರಿತ್ತು.

ಇದೀಗ ಬ್ಲೆಸ್ಸಿಂಗ್ ಮುಝರಬಾನಿ ಕೂಡ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅವಕಾಶ ಸಿಗುತ್ತಿದ್ದಂತೆ ಪಾಕಿಸ್ತಾನ್ ಸೂಪರ್ ಲೀಗ್​ಗೆ ಕೈ ಕೊಟ್ಟಿದ್ದಾರೆ. ಹೀಗಾಗಿ ಝಿಂಬಾಬ್ವೆ ವೇಗಿಯನ್ನು ಸಹ ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಒಂದು ವರ್ಷ ನಿಷೇಧಿಸಲಿದ್ದಾರೆ.

ಅತ್ಯುತ್ತಮ ಬೌಲಿಂಗ್:

ಐಪಿಎಲ್ 2025 ರಲ್ಲಿ ಆರ್​ಸಿಬಿ ತಂಡಕ್ಕೆ ತಾತ್ಕಾಲಿಕ ಬದಲಿ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದ ಬ್ಲೆಸ್ಸಿಂಗ್ ಮುಝರಬಾನಿ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು.

ಇದನ್ನೂ ಓದಿ: ಸಂಜು ಸ್ಯಾಮ್ಸನ್ ಫೋಟೋ ಎಡಿಟ್ ಮಾಡಿ ಹಂಚಿಕೊಂಡ್ರಾ ಗಿಲ್: ಇಲ್ಲಿದೆ ನಿಜಾಂಶ

6 ಪಂದ್ಯಗಳಲ್ಲಿ ಮಾರಕ ದಾಳಿ ಸಂಘಟಿಸಿದ್ದ ಬ್ಲೆಸ್ಸಿಂಗ್ ಮುಝರಬಾನಿ ಒಟ್ಟು 13 ವಿಕೆಟ್ ಕಬಳಿಸಿದ್ದರು. ಹೀಗಾಗಿ ಮುಸ್ತಫಿಝುರ್ ರೆಹಮಾನ್ ಬದಲಿಯಾಗಿ ಬ್ಲೆಸ್ಸಿಂಗ್ ಮುಝರಬಾನಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅದರಂತೆ ಮಾರ್ಚ್ 17 ರಂದು ಝಿಂಬಾಬ್ವೆ ವೇಗಿ ಕೆಕೆಆರ್ ತಂಡವನ್ನು ಕೂಡಿಕೊಳ್ಳಲಿದ್ದಾರೆ.

Follow Us
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್