‘ಸಾಧ್ಯವೇ ಇಲ್ಲ’; ಪಾಕ್ ತಂಡದ ಸ್ಟಾರ್ ಆಟಗಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಂಡ ಪಿಸಿಬಿ

PCB: ಪಿಸಿಬಿ ಗ್ಲೋಬಲ್ ಟಿ 20 ಲೀಗ್‌ನಲ್ಲಿ ಆಡಲು ಬಾಬರ್ ಆಝಂ, ಮೊಹಮ್ಮದ್ ರಿಜ್ವಾನ್ ಮತ್ತು ಶಾಹೀನ್ ಅಫ್ರಿದಿ ಅವರಿಂದ ಎನ್‌ಒಸಿ ವಿನಂತಿಗಳನ್ನು ಸ್ವೀಕರಿಸಿದೆ. ಆಗಸ್ಟ್ 2024 ರಿಂದ ಮಾರ್ಚ್ 2025 ರವರೆಗೆ ಪಾಕಿಸ್ತಾನದ ಕಾರ್ಯನಿರತ ಕ್ರಿಕೆಟ್ ಕ್ಯಾಲೆಂಡರ್ ಅನ್ನು ಗಮನದಲ್ಲಿಟ್ಟುಕೊಂಡು ಮತ್ತು ಮೂವರು ಆಟಗಾರರು ಮತ್ತು ರಾಷ್ಟ್ರೀಯ ಆಯ್ಕೆ ಸಮಿತಿಯೊಂದಿಗೆ ಸಮಾಲೋಚಿಸಿದ ನಂತರ, ಅವರ ವಿನಂತಿಯನ್ನು ತಿರಸ್ಕರಿಸಲು ನಿರ್ಧರಿಸಲಾಗಿದೆ ಎಂದು ಹೇಳಿಕೆ ಬಿಡುಗಡೆ ಮಾಡಿದೆ.

‘ಸಾಧ್ಯವೇ ಇಲ್ಲ’; ಪಾಕ್ ತಂಡದ ಸ್ಟಾರ್ ಆಟಗಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಂಡ ಪಿಸಿಬಿ
ಅಫ್ರಿದಿ, ಬಾಬರ್, ರಿಜ್ವಾನ್
Follow us
ಪೃಥ್ವಿಶಂಕರ
|

Updated on:Jul 20, 2024 | 8:06 PM

ಏಕದಿನ ವಿಶ್ವಕಪ್​ನಲ್ಲಿ ಹೀನಾಯ ಪ್ರದರ್ಶನದ ನಂತರ ಶುರುವಾದ ಪಾಕಿಸ್ತಾನ ಕ್ರಿಕೆಟ್ ತಂಡದೊಳಗಿನ ಹಗ್ಗಜಗ್ಗಾಟಗಳು ಇಂದಿಗೂ ಮುಂದುವರೆದಿವೆ. ಪ್ರತಿ ಸರಣಿಯಲ್ಲೂ, ಐಸಿಸಿ ಟೂರ್ನಿಯಲ್ಲೂ ಪಾಕ್ ತಂಡ ಕಳಪೆ ಪ್ರದರ್ಶನ ನೀಡದಾಗಲೆಲ್ಲ ತಂಡದಲ್ಲಿ ಸಾಕಷ್ಟು ಬದಲಾವಣೆಗಳನ್ನು ತರುವ ಕೆಲಸವನ್ನು ಪಿಸಿಬಿ ಮಾಡುತ್ತಿದೆ. ಅದಾಗ್ಯೂ ತಂಡದ ಪ್ರದರ್ಶನದಲ್ಲಿ ಸುಧಾರಣೆ ಕಾಣುತ್ತಿಲ್ಲ. ಏಕದಿನ ವಿಶ್ವಕಪ್ ಬಳಿಕ ನಾಯಕತ್ವ ಕಳೆದುಕೊಂಡಿದ್ದ ಬಾಬರ್, ಟಿ20 ವಿಶ್ವಕಪ್​ಗೂ ಮುನ್ನ ಮತ್ತೆ ನಾಯಕನಾಗಿ ಆಯ್ಕೆಯಾದರು. ಇದೀಗ ಟಿ20 ವಿಶ್ವಕಪ್​ನಲ್ಲಿ ತಂಡ ಕಳಪೆ ಪ್ರದರ್ಶನ ನೀಡಿದ ಬಳಿಕ ಇದೀಗ ಬಾಬರ್ ನೆತ್ತಿ ಮೇಲೆ ತೂಗುಗತ್ತಿ ನೇತಾಡುತ್ತಿದೆ. ಇದರ ಜೊತೆಗೆ ತಂಡದ ಸಾಕಷ್ಟು ಒಡಕುಗಳಿವೆ ಎಂಬುದು ನೂತನ ಕೋಚ್ ಗ್ಯಾರಿ ಕರ್ಸ್ಟನ್ ಆರೋಪವಾಗಿದೆ. ಇದೆಲ್ಲವನ್ನು ಪರಿಗಣನೆಗೆ ತೆಗೆದುಕೊಂಡಿರುವ ಪಿಸಿಬಿ ಮತ್ತೊಂದು ಕಟ್ಟುನಿಟ್ಟಿನ ಹೆಜ್ಜೆ ಇಟ್ಟಿದೆ. ಅದೆನೆಂದರೆ ಗ್ಲೋಬಲ್ ಟಿ20 ಲೀಗ್ ಆಡಲು ಮುಂದಾಗಿದ್ದ ಹಿರಿಯ ಆಟಗಾರರಾದ ಬಾಬರ್ ಆಝಂ, ಶಾಹೀನ್ ಶಾ ಆಫ್ರಿದಿ ಮತ್ತು ಮೊಹಮ್ಮದ್ ರಿಜ್ವಾನ್​ಗೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನೀಡಲು ಮಂಡಳಿ ತಿರಸ್ಕರಿಸಿದೆ.

ಎನ್‌ಒಸಿ ನೀಡದ ಪಿಸಿಬಿ

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಬೋರ್ಡ್, ‘ಪಿಸಿಬಿ ಗ್ಲೋಬಲ್ ಟಿ20 ಲೀಗ್‌ನಲ್ಲಿ ಆಡಲು ಬಾಬರ್ ಆಝಂ, ಮೊಹಮ್ಮದ್ ರಿಜ್ವಾನ್ ಮತ್ತು ಶಾಹೀನ್ ಅಫ್ರಿದಿ ಅವರಿಂದ ಎನ್‌ಒಸಿ ವಿನಂತಿಗಳನ್ನು ಸ್ವೀಕರಿಸಿದೆ. ಆಗಸ್ಟ್ 2024 ರಿಂದ ಮಾರ್ಚ್ 2025 ರವರೆಗೆ ಪಾಕಿಸ್ತಾನದ ಕಾರ್ಯನಿರತ ಕ್ರಿಕೆಟ್ ಕ್ಯಾಲೆಂಡರ್ ಅನ್ನು ಗಮನದಲ್ಲಿಟ್ಟುಕೊಂಡು ಮತ್ತು ಮೂವರು ಆಟಗಾರರು ಮತ್ತು ರಾಷ್ಟ್ರೀಯ ಆಯ್ಕೆ ಸಮಿತಿಯೊಂದಿಗೆ ಸಮಾಲೋಚಿಸಿದ ನಂತರ, ಅವರ ವಿನಂತಿಯನ್ನು ತಿರಸ್ಕರಿಸಲು ನಿರ್ಧರಿಸಲಾಗಿದೆ. ಈ ಅವಧಿಯಲ್ಲಿ ಪಾಕಿಸ್ತಾನ ಮುಂದಿನ ವರ್ಷ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಒಂಬತ್ತು ಪಂದ್ಯಗಳನ್ನು ಆಡಬೇಕಿದೆ.

ಇದಲ್ಲದೆ ಪ್ರಸ್ತುತ ಈ ಮೂವರು ಆಟಗಾರರು ಪಾಕ್ ತಂಡದ ಪರ ಎಲ್ಲಾ ಸ್ವರೂಪಗಳಲ್ಲಿ ಆಡುತ್ತಿದ್ದಾರೆ. ಹೀಗಾಗಿ ಮುಂಬರುವ ಎಂಟು ತಿಂಗಳಲ್ಲಿ ಪಾಕಿಸ್ತಾನ ತಂಡ ಒಂಬತ್ತು ಟೆಸ್ಟ್, 14 ಏಕದಿನ ಮತ್ತು ಒಂಬತ್ತು ಟಿ20 ಪಂದ್ಯಗಳನ್ನು ಆಡಲಿದೆ. ಈ ಎಲ್ಲಾ ಪಂದ್ಯಗಳಲ್ಲಿ ಈ ಮೂವರ ಲಭ್ಯತೆ ಅವಶ್ಯಕವಿದೆ ಹೀಗಾಗಿ ಈ ಮೂವರಿಗೆ ಎನ್‌ಒಸಿ ನೀಡಲು ಸಾಧ್ಯವಿಲ್ಲ ಎಂದಿದೆ.

ಆಟಗಾರರು ಪಿಸಿಬಿ ನಡುವೆ ಹಗ್ಗಾಜಗ್ಗಾಟ

ಪಿಸಿಬಿಯ ಈ ನಿರ್ಧಾರ ಮುಂದೆ ಯಾವ ಪರಿಣಾಮವನ್ನು ಬೀರುತ್ತದೆ ಎಂಬುದನ್ನು ಮುಂದೆ ತಿಳಿಯಲಿದೆ. ಏಕೆಂದರೆ ಎನ್​ಒಸಿಯ ಷರತ್ತುಗಳನ್ನು ವಿರೋದಿಸಿರುವ ಪಾಕಿಸ್ತಾನದ ಆಟಗಾರರು ಏಕದಿನ ವಿಶ್ವಕಪ್ 2023 ರ ಮೊದಲು ಪಿಸಿಬಿಯ ಕೇಂದ್ರ ಒಪ್ಪಂದಕ್ಕೆ ಸಹಿ ಹಾಕಲು ನಿರಾಕರಿಸಿದ್ದರು. ಅಲ್ಲದೆ ವಿಶ್ವದಾದ್ಯಂತ ನಡೆಯಲ್ಲಿರುವ ಟಿ20 ಲೀಗ್‌ಗಳಲ್ಲಿ ಆಡಲು ಅನುಮತಿ ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ ಪಿಸಿಬಿ ಇದಕ್ಕೆ ಸಮ್ಮತಿ ಸೂಚಿಸಿರಲಿಲ್ಲ. ಆದಾಗ್ಯೂ, ಸಾಕಷ್ಟು ವಿವಾದಗಳ ನಂತರ ಪರಸ್ಪರರು ಒಂದು ತೀರ್ಮಾನಕ್ಕೆ ಬಂದಿದ್ದರು. ಈಗ ಪಿಸಿಬಿ ಎನ್‌ಒಸಿ ರದ್ದುಗೊಳಿಸಿದ್ದರಿಂದ ಆಟಗಾರರು ಅಸಮಾಧಾನಗೊಳ್ಳುವ ಸಾಧ್ಯತೆಗಳಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:03 pm, Sat, 20 July 24

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?