AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್​ನಲ್ಲಿ ಹೀನಾಯ ಸೋಲು; ಪಾಕ್ ತಂಡದ ಹೆಡ್ ಕೋಚ್ ತಲೆದಂಡ

Pakistan Coach Sacked: ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನದ ಕಳಪೆ ಪ್ರದರ್ಶನದಿಂದಾಗಿ ಮುಖ್ಯ ಕೋಚ್ ಸರ್ಫರಾಜ್ ಅಹ್ಮದ್ ಅವರನ್ನು ವಜಾಗೊಳಿಸಲಾಗಿದೆ. ಸರಣಿಯಲ್ಲಿ ಪಾಕ್ ತಂಡ ಎರಡು ಪಂದ್ಯಗಳನ್ನು ಹೀನಾಯವಾಗಿ ಸೋತಿದ್ದು, ಭಾರಿ ಟೀಕೆಗೆ ಗುರಿಯಾಗಿತ್ತು. ಈಗ ವೈಟ್‌ಬಾಲ್ ಕೋಚ್ ಮೈಕ್ ಹೆಸ್ಸನ್ ಅವರಿಗೆ ಟೆಸ್ಟ್ ತಂಡದ ಜವಾಬ್ದಾರಿ ವಹಿಸಲಾಗಿದೆ. ಹೆಸ್ಸನ್ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಇಂಗ್ಲೆಂಡ್​ನಲ್ಲಿ ಹೀನಾಯ ಸೋಲು; ಪಾಕ್ ತಂಡದ ಹೆಡ್ ಕೋಚ್ ತಲೆದಂಡ
Sarfaraz Ahmed
ಪೃಥ್ವಿಶಂಕರ
|

Updated on:Aug 31, 2026 | 8:04 PM

Share

ಇಂಗ್ಲೆಂಡ್ ಪ್ರವಾಸದಲ್ಲಿ ಪಾಕಿಸ್ತಾನ (England vs Pakistan) ತಂಡದ ಪ್ರದರ್ಶನ ಅತ್ಯಂತ ನಿರಾಶಾದಾಯಕವಾಗಿದೆ. ಮೂರು ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಪಾಕ್ ತಂಡ ಹೀನಾಯ ಸೋಲನ್ನು ಅನುಭವಿಸಿದೆ. ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ತಂಡವನ್ನು ಇನ್ನಿಂಗ್ಸ್‌ನಿಂದ ಮತ್ತು ಲಾರ್ಡ್ಸ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು 194 ರನ್‌ಗಳಿಂದ ಸೋತಿರುವ ಪಾಕ್ ತಂಡದ ಮೇಲೆ ಟೀಕೆಗಳ ಮಳೆಯೇ ಸುರಿಯುತ್ತಿದೆ. ಆಟಗಾರರಿಂದ ಹಿಡಿದು ತಂಡದ ಕೋಚಿಂಗ್ ಸಿಬ್ಬಂದಿಗಳ ಮೇಲೆ ಮಾಜಿ ಆಟಗಾರು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಇದರ ಪರಿಣಾಮವಾಗಿ ಪಾಕಿಸ್ತಾನ ಟೆಸ್ಟ್ ತಂಡದ ಮುಖ್ಯ ಕೋಚ್ ತಲೆದಂಡವಾಗಿದೆ ಎಂದು ವರದಿಯಾಗಿದೆ.

ಸರ್ಫರಾಜ್ ಬದಲಿಗೆ ಮೈಕ್ ಹೆಸ್ಸನ್

ಸರಣಿ ಸೋಲುಗಳ ಹಿನ್ನೆಲೆಯಲ್ಲಿ ಪಿಸಿಬಿ ಟೆಸ್ಟ್ ತಂಡದ ಮುಖ್ಯ ಕೋಚ್ ಸರ್ಫರಾಜ್ ಅಹ್ಮದ್ ಅವರ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ ಪ್ರಸ್ತುತ ವೈಟ್-ಬಾಲ್ ಸ್ವರೂಪದ ಕೋಚ್ ಆಗಿರುವ ಮೈಕ್ ಹೆಸನ್ ಅವರನ್ನು ಟೆಸ್ಟ್ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಪಿಸಿಬಿ ಕೇಳಿಕೊಂಡಿದೆ ಎಂದು ವರದಿಯಾಗಿದೆ. ಪ್ರಸ್ತುತ ಲಂಡನ್‌ನಲ್ಲಿರುವ ಮೈಕ್ ಹೆಸನ್, ಅಕಿಬ್ ಜಾವೇದ್ ಅವರೊಂದಿಗೆ ಪ್ರಿನ್ಸ್ ಚಾರ್ಲ್ಸ್ ಆಯೋಜಿಸಿದ್ದ ಭೋಜನಕೂಟದಲ್ಲಿ ಭಾಗವಹಿಸಲು ಬಂದಿದ್ದರು. ಈ ಭೇಟಿಯ ಸಮಯದಲ್ಲಿ ಅವರಿಗೆ ಟೆಸ್ಟ್ ತಂಡದ ಜವಾಬ್ದಾರಿಗಳನ್ನು ಹಸ್ತಾಂತರಿಸುವ ಕೆಲಸ ನಡೆದಿದೆ ಎಂದು ವರದಿಯಾಗಿದೆ.

ಮೂರನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 9 ರಿಂದ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಆರಂಭವಾಗಲಿದೆ. ಈ ಪಂದ್ಯ ಆರಂಭವಾಗುವ ಮೊದಲು ಮೈಕ್ ಹೆಸ್ಸನ್ ಪಾಕಿಸ್ತಾನ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಸರ್ಫರಾಜ್ ಅಹ್ಮದ್ ಅವರ ಅಧಿಕಾರಾವಧಿ ಇಲ್ಲಿಗೆ ಅಂತ್ಯವಾಗಿದೆ ಎಂಬುದು ಕ್ರೀಡಾ ವಿಶ್ಲೇಷಕರ ಅಭಿಪ್ರಾಯವಾಗಿದೆ. ಎಲ್ಲವೂ ಯೋಜಿಸಿದಂತೆ ನಡೆದರೆ, ಮೈಕ್ ಹೆಸ್ಸನ್ ಮೂರು ಸ್ವರೂಪಗಳಲ್ಲಿ ಮುಖ್ಯ ಕೋಚ್ ಜವಾಬ್ದಾರಿ ಹೋರುವ ಸಾಧ್ಯತೆಯಿದೆ.

ಆಂಗ್ಲರ ವೇಗಕ್ಕೆ ಹೆದರಿ ಗಾಯದ ನಾಟಕವಾಡಿದ್ದ ಇಮಾಮ್ ವಿರುದ್ಧ ತನಿಖೆಗಿಳಿದ ಪಿಸಿಬಿ

ಟೆಸ್ಟ್‌ನಲ್ಲಿ ಸರ್ಫರಾಜ್ ಟ್ರ್ಯಾಕ್ ರೆಕಾರ್ಡ್

ಈ ವರ್ಷದ ಏಪ್ರಿಲ್ 18 ರಂದು ಬಾಂಗ್ಲಾದೇಶ ವಿರುದ್ಧದ ಸರಣಿಗೆ ಮುಂಚಿತವಾಗಿ ಸರ್ಫರಾಜ್ ಅಹ್ಮದ್ ಅವರನ್ನು ಟೆಸ್ಟ್ ತಂಡದ ಮುಖ್ಯ ಕೋಚ್ ಆಗಿ ನೇಮಿಸಲಾಯಿತು. ಆದಾಗ್ಯೂ, ಅವರ ಉಸ್ತುವಾರಿಯಲ್ಲಿ ಪಾಕಿಸ್ತಾನದ ಪ್ರದರ್ಶನವು ತುಂಬಾ ಕಳಪೆಯಾಗಿದೆ. ಮೊದಲ ಸರಣಿಯಲ್ಲೇ ಬಾಂಗ್ಲಾದೇಶ ತಂಡವು ಪಾಕ್ ತಂಡವನ್ನು ಅವರ ಸ್ವಂತ ನೆಲದಲ್ಲಿಯೇ ವೈಟ್‌ವಾಶ್ ಮಾಡಿತ್ತು. ನಂತರ ವೆಸ್ಟ್ ಇಂಡೀಸ್ ಪ್ರವಾಸದ ಸಮಯದಲ್ಲಿ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-1 ರಿಂದ ಡ್ರಾ ಮಾಡಿಕೊಂಡಿತು. ಇದೀಗ, ಇಂಗ್ಲೆಂಡ್ ಪ್ರವಾಸದಲ್ಲಿ ಮತ್ತೊಂದು ವೈಟ್‌ವಾಶ್‌ ಆತಂಕದಲ್ಲಿ ತಂಡವಿದೆ. ಹೀಗಾಗಿ ಪಿಸಿಬಿ ಸರ್ಫರಾಜ್ ಅಹ್ಮದ್ ಅವರನ್ನು ವಜಾಗೊಳಿಸಬೇಕು ಎಂಬ ತೀರ್ಮಾನಕ್ಕೆ ಬಂದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:03 pm, Mon, 31 August 26

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು