ಸ್ಪೋಟಕ ಸೆಂಚುರಿ ಸಿಡಿಸಿ ವಿಂಡೀಸ್ ಬೌಲರ್ಗಳ ಬೆವರಿಳಿಸಿದ ಸಾಲ್ಟ್
Phil Salt Century: ವೆಸ್ಟ್ ಇಂಡೀಸ್ ವಿರುದ್ಧದ ಈ ಪಂದ್ಯದಲ್ಲಿ 56 ಎಸೆತಗಳನ್ನು ಎದುರಿಸಿ 9 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಸಿಡಿಲಬ್ಬರದ ಶತಕ ಸಿಡಿಸಿದ್ದ ಇಂಗ್ಲೆಂಡ್ ಆರಂಭಿಕ ಆಟಗಾರ ಫಿಲ್ ಸಾಲ್ಟ್ (109) ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಗ್ರೇನಾಡದ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಪಂದ್ಯದಲ್ಲಿ ಇಂಗ್ಲೆಂಡ್ ಆರಂಭಿಕ ಫಿಲ್ ಸಾಲ್ಟ್ ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಜೋಸ್ ಬಟ್ಲರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರರಾದ ಕೈಲ್ ಮೇಯರ್ಸ್ (0) ಹಾಗೂ ಬ್ರಾಂಡನ್ ಕಿಂಗ್ (8) ಬಂದ ವೇಗದಲ್ಲೇ ಹಿಂತಿರುಗಿದ್ದರು. ಈ ಹಂತದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಎಡಗೈ ದಾಂಡಿಗ ನಿಕೋಲಸ್ ಪೂರನ್ 45 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 82 ರನ್ ಚಚ್ಚಿದರು.
ಇನ್ನು ಅಂತಿಮ ಓವರ್ಗಳ ವೇಳೆ ಅಬ್ಬರಿಸಿದ ಶೆರ್ಫಾನ್ ರುದರ್ಫೋರ್ಡ್ 17 ಎಸೆತಗಳಲ್ಲಿ 29 ರನ್ ಬಾರಿಸಿದರು. ಈ ಮೂಲಕ ವೆಸ್ಟ್ ಇಂಡೀಸ್ ತಂಡ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 222 ರನ್ ಕಲೆಹಾಕಿತು.
223 ರನ್ಗಳ ಕಠಿಣ ಗುರಿ ಪಡೆದ ಇಂಗ್ಲೆಂಡ್ ತಂಡಕ್ಕೆ ಆರಂಭಿಕರಾದ ಫಿಲ್ ಸಾಲ್ಟ್ ಹಾಗೂ ಜೋಸ್ ಬಟ್ಲರ್ ಸ್ಪೋಟಕ ಆರಂಭ ಒದಗಿಸಿದ್ದರು. 11.2 ಓವರ್ಗಳಲ್ಲಿ ಮೊದಲ ವಿಕೆಟ್ಗೆ 115 ರನ್ ಪೇರಿಸಿದ ಜೋಸ್ ಬಟ್ಲರ್ (51) ವಿಕೆಟ್ ಒಪ್ಪಿಸಿದರು.
ಮತ್ತೊಂದೆಡೆ ಫಿಲ್ ಸಾಲ್ಟ್ ಸಿಡಿಲಬ್ಬರ ಮಾತ್ರ ಮುಂದುವರೆಯಿತು. ವೆಸ್ಟ್ ಇಂಡೀಸ್ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ಸಾಲ್ಟ್ ಕೇವಲ 51 ಎಸೆತಗಳಲ್ಲಿ ಶತಕ ಪೂರೈಸಿದರು. ಪರಿಣಾಮ ಕೊನೆಯ 12 ಎಸೆತಗಳಲ್ಲಿ ಇಂಗ್ಲೆಂಡ್ಗೆ ಗೆಲ್ಲಲು 31 ರನ್ಗಳ ಅವಶ್ಯಕತೆಯಿತ್ತು.
19ನೇ ಓವರ್ನಲ್ಲಿ ಬ್ರೂಕ್-ಸಾಲ್ಟ್ ಜೊತೆಗೂಡಿ ಕೇವಲ 10 ರನ್ಗಳಿಸಲಷ್ಟೇ ಯಶಸ್ವಿಯಾಗಿದ್ದರು. ಇದರಿಂದ ಕೊನೆಯ 6 ಎಸೆತಗಳಲ್ಲಿ 21 ರನ್ಗಳಿಸಬೇಕಿತ್ತು.
ಆ್ಯಂಡ್ರೆ ರಸೆಲ್ ಎಸೆದ ಕೊನೆಯ ಓವರ್ನ ಮೊದಲ ಎಸೆತದಲ್ಲೇ ಹ್ಯಾರಿ ಬ್ರೂಕ್ ಫೋರ್ ಬಾರಿಸಿದರು. 2ನೇ ಮತ್ತು 3ನೇ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿದರು. 4ನೇ ಎಸೆತದಲ್ಲಿ 2 ರನ್ ಕಲೆಹಾಕಿದ ಹ್ಯಾರಿ ಬ್ರೂಕ್ 5ನೇ ಎಸೆತದಲ್ಲಿ ಮತ್ತೊಂದು ಭರ್ಜರಿ ಸಿಕ್ಸ್ ಸಿಡಿಸಿ ಇಂಗ್ಲೆಂಡ್ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.
HARRY BROOK, THE FINISHER. 🫡
England needed 21 runs in the final over then he smashed 4, 6, 6, 2 & 6 to win the must match.
One of the most crazy finishes ever in T20I history. pic.twitter.com/rE494JqBUQ
— Johns. (@CricCrazyJohns) December 17, 2023
ಈ ಪಂದ್ಯದಲ್ಲಿ 56 ಎಸೆತಗಳನ್ನು ಎದುರಿಸಿ 9 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಅಜೇಯ 109 ರನ್ ಬಾರಿಸಿದ್ದ ಫಿಲ್ ಸಾಲ್ಟ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಶಾಯ್ ಹೋಪ್, ಶೆರ್ಫಾನ್ ರುದರ್ಫೋರ್ಡ್, ರೋವ್ಮನ್ ಪೊವೆಲ್ (ನಾಯಕ), ಆ್ಯಂಡ್ರೆ ರಸೆಲ್, ಅಲ್ಜಾರಿ ಜೋಸೆಫ್, ಅಕೇಲ್ ಹೋಸೇನ್, ಗುಡಾಕೇಶ್ ಮೋಟಿ, ಜೇಸನ್ ಹೋಲ್ಡರ್.
ಇದನ್ನೂ ಓದಿ: Rohit Sharma: ರೋಹಿತ್ ಶರ್ಮಾಗೆ ಬಿಗ್ ಆಫರ್ ನೀಡಿದ್ದ ಡೆಲ್ಲಿ ಕ್ಯಾಪಿಟಲ್ಸ್
ಇಂಗ್ಲೆಂಡ್ ಪ್ಲೇಯಿಂಗ್ 11: ಫಿಲಿಪ್ ಸಾಲ್ಟ್, ಜೋಸ್ ಬಟ್ಲರ್ (ನಾಯಕ), ವಿಲ್ ಜಾಕ್ಸ್, ಹ್ಯಾರಿ ಬ್ರೂಕ್, ಮೊಯೀನ್ ಅಲಿ, ರೀಸ್ ಟಾಪ್ಲಿ, ಟೈಮಲ್ ಮಿಲ್ಸ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್.
Published On - 9:36 am, Sun, 17 December 23