Pink Ball Test: ಪಿಂಕ್ ಬಾಲ್ ಟೆಸ್ಟ್​ನಲ್ಲಿ ಮೊದಲ ಗೆಲುವು, ಶತಕ ದಾಖಲಾಗಿದ್ದು ಯಾವಾಗ? ಇಲ್ಲಿದೆ ಕುತೂಹಲಕಾರಿ ಸಂಗತಿ

Pink Ball Test: ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಗರಿಷ್ಠ ಸ್ಕೋರ್ ಸಿಡಿಸಿದ ತಂಡವಾಗಿದೆ. ಪಾಕಿಸ್ತಾನದ ವಿರುದ್ಧ ಆಸ್ಟ್ರೇಲಿಯಾ 3 ವಿಕೆಟ್‌ಗೆ 589 ರನ್‌ಗಳ ದಾಖಲೆಯನ್ನು ಹೊಂದಿದೆ. ಈ ಪಂದ್ಯದಲ್ಲಿ ಡೇವಿಡ್ ವಾರ್ನರ್ ಅಜೇಯ 335 ರನ್ ಗಳಿಸಿದ್ದರು.

Pink Ball Test: ಪಿಂಕ್ ಬಾಲ್ ಟೆಸ್ಟ್​ನಲ್ಲಿ ಮೊದಲ ಗೆಲುವು, ಶತಕ ದಾಖಲಾಗಿದ್ದು ಯಾವಾಗ? ಇಲ್ಲಿದೆ ಕುತೂಹಲಕಾರಿ ಸಂಗತಿ
ಪಿಂಕ್ ಬಾಲ್ ಟೆಸ್ಟ್
Follow us
TV9 Web
| Updated By: ಪೃಥ್ವಿಶಂಕರ

Updated on: Mar 11, 2022 | 9:29 PM

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಟೆಸ್ಟ್‌ಗಳ ಸರಣಿಯ ಎರಡನೇ ಮತ್ತು ಅಂತಿಮ ಪಂದ್ಯ (IND vs SL 2nd Test) ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ (M. Chinnaswamy Stadium)ದಲ್ಲಿ ನಡೆಯಲಿದೆ. ಇದು ಹಗಲು-ರಾತ್ರಿ ಟೆಸ್ಟ್ ಆಗಿದ್ದು ಇದರಲ್ಲಿ ಕೆಂಪು ಬಣ್ಣದ ಬದಲಿಗೆ ಗುಲಾಬಿ ಬಣ್ಣದ ಚೆಂಡಿನೊಂದಿಗೆ ಆಡಲಾಗುತ್ತದೆ. ಭಾರತವು ತನ್ನ ನಾಲ್ಕನೇ ಹಗಲು-ರಾತ್ರಿ ಪಂದ್ಯವನ್ನು ಶನಿವಾರ, ಮಾರ್ಚ್ 12 ರಂದು ಶ್ರೀಲಂಕಾ ವಿರುದ್ಧ ಆಡಲಿದೆ. ಭಾರತ ತಂಡವು ಫೆಬ್ರವರಿ 2021 ರಲ್ಲಿ ಇಂಗ್ಲೆಂಡ್ ವಿರುದ್ಧ ತನ್ನ ಕೊನೆಯ ಹಗಲು-ರಾತ್ರಿ ಟೆಸ್ಟ್ ಅನ್ನು ಆಡಿತು. ಪಿಂಕ್ ಬಾಲ್ ಟೆಸ್ಟ್ (Pink Ball Test) ಎಂದೂ ಕರೆಯಲ್ಪಡುವ ಡೇ-ನೈಟ್ ಟೆಸ್ಟ್ ಇತರ ಟೆಸ್ಟ್​ಗಳಿಗಿಂತ ಭಿನ್ನವಾಗಿದೆ. ಈ ಪಿಂಕ್ ಬಾಲ್ ಟೆಸ್ಟ್​ನ ಕುತೂಹಲಕಾರಿ ವಿಚಾರಗಳು ಇಲ್ಲಿವೆ.

ಮೊದಲ ಪಿಂಕ್ ಟೆಸ್ಟ್ ಪಂದ್ಯ ಯಾವಾಗ ನಡೆಯಿತು? ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯ 2015 ರಲ್ಲಿ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ನಡೆದಿತ್ತು. ಈ ಪಂದ್ಯವನ್ನು ಆಸ್ಟ್ರೇಲಿಯಾ 3 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಈ ಮೂಲಕ ಆಸ್ಟ್ರೇಲಿಯಾ ಮೊದಲ ಪಿಂಕ್ ಬಾಲ್ ಟೆಸ್ಟ್ ಗೆದ್ದ ಮೊದಲ ತಂಡವಾಯಿತು.

ಬೌಲರ್‌ಗಳಿಗೆ ಕೇರಾಫ್ ಅಡ್ರೆಸ್ ಪಿಂಕ್ ಬಾಲ್ ಟೆಸ್ಟ್ .. ಈ ಪಿಂಕ್ ಬಾಲ್ ಲೈಟ್‌ಗಳಲ್ಲಿ ಹೆಚ್ಚು ಸ್ವಿಂಗ್ ಆಗುತ್ತದೆ. ಆದ್ದರಿಂದ ಪಿಂಕ್ ಚೆಂಡನ್ನು ಟೆಸ್ಟ್ ಬೌಲರ್‌ಗಳಿಗೆ ಸಹಾಯಕವೆಂದು ಪರಿಗಣಿಸಲಾಗಿದೆ. ಆಸ್ಟ್ರೇಲಿಯಾದ ಜೈಶ್ ಹೇಜಲ್‌ವುಡ್ ಪಿಂಕ್ ಬಾಲ್ ಟೆಸ್ಟ್‌ನಲ್ಲಿ 5 ವಿಕೆಟ್ ಪಡೆದ ಮೊದಲ ಬೌಲರ್ ಎನಿಸಿಕೊಂಡರು. ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ. ಆಸ್ಟ್ರೇಲಿಯಾ 10 ಪಂದ್ಯಗಳನ್ನು ಆಡಿದೆ ಮತ್ತು ಪ್ರತಿ ಪಂದ್ಯವನ್ನು ಗೆದ್ದಿದೆ. ಉಸ್ಮಾನ್ ಖವಾಜಾ ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಪಿಂಕ್ ಬಾಲ್ ಟೆಸ್ಟ್ ಪಂದ್ಯದ ದಾಖಲೆಗಳು .. ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಗರಿಷ್ಠ ಸ್ಕೋರ್ ಸಿಡಿಸಿದ ತಂಡವಾಗಿದೆ. ಪಾಕಿಸ್ತಾನದ ವಿರುದ್ಧ ಆಸ್ಟ್ರೇಲಿಯಾ 3 ವಿಕೆಟ್‌ಗೆ 589 ರನ್‌ಗಳ ದಾಖಲೆಯನ್ನು ಹೊಂದಿದೆ. ಈ ಪಂದ್ಯದಲ್ಲಿ ಡೇವಿಡ್ ವಾರ್ನರ್ ಅಜೇಯ 335 ರನ್ ಗಳಿಸಿದ್ದರು. ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಆಟಗಾರನೊಬ್ಬ ಆಡಿದ ಅತ್ಯುತ್ತಮ ಇನ್ನಿಂಗ್ಸ್ ಇದಾಗಿದೆ.

ಕಡಿಮೆ ಸ್ಕೋರ್ ಬಗ್ಗೆ ಹೇಳುವುದಾದರೆ, ಈ ವಿಚಾರದಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ. ಓವಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 9 ವಿಕೆಟ್ ನಷ್ಟಕ್ಕೆ 36 ರನ್ ಗಳಿಸಿತ್ತು. ಪಾಕಿಸ್ತಾನದ ವಿರುದ್ಧ 49 ರನ್ ನೀಡಿ 8 ವಿಕೆಟ್ ಪಡೆದಿದ್ದ ದೇವೇಂದ್ರ ವಿಶು ಬೌಲರ್​ಗಳ ವಿಚಾರದಲ್ಲಿ ನಂಬರ್ ಒನ್ ಆಗಿದ್ದಾರೆ.

ಇದನ್ನೂ ಓದಿ:IND vs SL: ತವರು ನೆಲದಲ್ಲಿ ಭಾರತವೇ ಬೆಸ್ಟ್! ಪಿಂಕ್ ಬಾಲ್ ಟೆಸ್ಟ್​ನಲ್ಲಿ ಟೀಂ ಇಂಡಿಯಾಕ್ಕಿಲ್ಲ ಸರಿಸಾಟಿ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ