Piyush Chawla: ಐಪಿಎಲ್ನಿಂದ 52 ಕೋಟಿ: ಪಿಯೂಷ್ ಚಾವ್ಲಾ ನಿವ್ವಳ ಮೌಲ್ಯ ಎಷ್ಟು ಗೊತ್ತಾ?
Piyush Chawla net worth: ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಐಪಿಎಲ್‌ನಲ್ಲಿ ನಾಲ್ಕು ತಂಡಗಳ ಪರ ಆಡಿದ್ದಾರೆ. ಅವರು ಮೊದಲು ಕಿಂಗ್ಸ್ ಇಲೆವೆನ್ ಪಂಜಾಬ್‌ನೊಂದಿಗೆ ಈ ಲೀಗ್‌ನಲ್ಲಿ ಪಾದಾರ್ಪಣೆ ಮಾಡಿದರು. ಇದಾದ ನಂತರ, ಅವರು ಕೋಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಪರ ಆಡಿದ್ದರು.

ಬೆಂಗಳೂರು (ಜೂ. 07): ಟೀಮ್ ಇಂಡಿಯಾದ (Team India) ಮಾಜಿ ಸ್ಪಿನ್ನರ್ ಪಿಯೂಷ್ ಚಾವ್ಲಾ ಎಲ್ಲ ಮಾದರಿಯ ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರೆ. ಎರಡು ವಿಶ್ವಕಪ್ ಪ್ರಶಸ್ತಿಗಳನ್ನು ಗೆದ್ದ ತಂಡದ ಭಾಗವಾಗಿದ್ದ ಪಿಯೂಷ್ ಚಾವ್ಲಾ ಐಪಿಎಲ್ ನಲ್ಲೂ ಸಾಕಷ್ಟು ಸದ್ದು ಮಾಡಿದ್ದರು. 2008 ರಿಂದ 2024 ರವರೆಗೆ ಐಪಿಎಲ್ ನಲ್ಲಿ ಆಡಿದ್ದಾರೆ, ಈ ಅವಧಿಯಲ್ಲಿ ಅವರು ನಾಲ್ಕು ತಂಡಗಳ ಪರವಾಗಿ ಭಾಗವಹಿಸಿದ್ದಾರೆ. 2007 ರಲ್ಲಿ ಟಿ 20 ವಿಶ್ವಕಪ್ ಮತ್ತು 2011 ರಲ್ಲಿ ಏಕದಿನ ವಿಶ್ವಕಪ್ ಗೆದ್ದ ಎಂಎಸ್ ಧೋನಿ ನೇತೃತ್ವದ ಭಾರತ ತಂಡದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. 35 ವರ್ಷದ ಚಾವ್ಲಾ ಶುಕ್ರವಾರ ಇನ್‌ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ನಿವೃತ್ತು ಘೋಷಣೆ ಮಾಡಿದರು.
ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಐಪಿಎಲ್‌ನಲ್ಲಿ ನಾಲ್ಕು ತಂಡಗಳ ಪರ ಆಡಿದ್ದಾರೆ. ಅವರು ಮೊದಲು ಕಿಂಗ್ಸ್ ಇಲೆವೆನ್ ಪಂಜಾಬ್‌ನೊಂದಿಗೆ ಈ ಲೀಗ್‌ನಲ್ಲಿ ಪಾದಾರ್ಪಣೆ ಮಾಡಿದರು. ಇದಾದ ನಂತರ, ಅವರು ಕೋಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಪರ ಆಡಿದ್ದರು. ಚಾವ್ಲಾ ಕೋಲ್ಕತ್ತಾ ನೈಟ್ ರೈಡರ್ಸ್ ಪರ 2014 ರಿಂದ ಆಡಲು ಪ್ರಾರಂಭಿಸಿದರು. ಈ ಋತುವಿನಲ್ಲಿ ಕೋಲ್ಕತ್ತಾ ಚಾಂಪಿಯನ್ ಆಯಿತು. ಇದರಲ್ಲಿ ಪಿಯೂಷ್ 11 ಪಂದ್ಯಗಳಲ್ಲಿ ಒಟ್ಟು 14 ವಿಕೆಟ್‌ಗಳನ್ನು ಕಬಳಿಸಿದರು.
ಪಿಯೂಷ್ ಚಾವ್ಲಾ ಕೊನೆಯ ಬಾರಿಗೆ ಕಳೆದ ವರ್ಷ ಮುಂಬೈ ಇಂಡಿಯನ್ಸ್ ಪರ ಆಡಿದ್ದರು. ಈ ಬಾರಿ ಅವರಿಗೆ ಯಾವುದೇ ತಂಡದಲ್ಲಿ ಸ್ಥಾನ ಸಿಗಲಿಲ್ಲ. ಅವರು ಒಟ್ಟು 192 ಪಂದ್ಯಗಳಲ್ಲಿ 7.96 ಎಕಾನಮಿಯಲ್ಲಿ 192 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಟೀಮ್ ಇಂಡಿಯಾದ ಮಾಜಿ ಲೆಗ್ ಸ್ಪಿನ್ನರ್ ಐಪಿಎಲ್ ನಿಂದ ಒಟ್ಟು 52 ಕೋಟಿ 27 ಲಕ್ಷ ರೂ. ಗಳಿಸಿದ್ದಾರೆ. ಪ್ರಸ್ತುತ, ಅವರ ಒಟ್ಟು ನಿವ್ವಳ ಮೌಲ್ಯ ಸುಮಾರು 65 ರಿಂದ 70 ಕೋಟಿ ರೂ. ಆಗಿದೆ.
ಚಾವ್ಲಾ ಕ್ರಿಕೆಟ್‌ನಲ್ಲಿ ಹಲವು ಸಾಧನೆಗಳನ್ನು ಮಾಡಿದ್ದಾರೆ. ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಮೂರು ಪಂದ್ಯಗಳನ್ನು ಆಡಿದ್ದಾರೆ ಮತ್ತು ಏಳು ವಿಕೆಟ್‌ಗಳನ್ನು ಪಡೆದಿದ್ದಾರೆ. ಏಕದಿನ ಪಂದ್ಯಗಳಲ್ಲಿ, ಅವರು 25 ಪಂದ್ಯಗಳನ್ನು ಆಡಿದ್ದಾರೆ ಮತ್ತು 32 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರ ಅತ್ಯುತ್ತಮ ಪ್ರದರ್ಶನ 23ಕ್ಕೆ 4. ಅವರು ಭಾರತಕ್ಕಾಗಿ ಏಳು ಟಿ20ಐಗಳನ್ನು ಸಹ ಆಡಿದ್ದಾರೆ ಮತ್ತು ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರಲ್ಲಿ ಒಬ್ಬರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




