AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ

Piyush Chawla Retires: ಭಾರತದ ಮಾಜಿ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಅವರು ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಈ ವಿಷಯವನ್ನು ತಿಳಿಸಿದ್ದು, ಎರಡು ದಶಕಗಳ ಕಾಲ ಮೈದಾನದಲ್ಲಿ ಕಳೆದ ನಂತರ, ಈ ಸುಂದರ ಆಟಕ್ಕೆ ವಿದಾಯ ಹೇಳುವ ಸಮಯ ಬಂದಿದೆ ಎಂದು ಚಾವ್ಲಾ ಬರೆದುಕೊಂಡಿದ್ದಾರೆ.

ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ
Piyush Chawla
ಪೃಥ್ವಿಶಂಕರ
|

Updated on:Jun 06, 2025 | 3:44 PM

Share

ವಿಶ್ವ ಕ್ರಿಕೆಟ್‌ನಲ್ಲಿ ನಿವೃತ್ತಿ ಪ್ರವೃತ್ತಿ ಮುಂದುವರೆದಿದೆ. ಕೆಲವು ದಿನಗಳ ಹಿಂದೆ ಟೀಂ ಇಂಡಿಯಾದ ಇಬ್ಬರು ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ (Virat Kohli) ಮತ್ತು ರೋಹಿತ್ ಶರ್ಮಾ (Rohit Sharma) ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದರು. ಇವರಿಬ್ಬರ ಬಳಿಕ ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಹೇಳಿದರೆ, ದಕ್ಷಿಣ ಆಫ್ರಿಕಾದ ಸ್ಫೋಟಕ ದಾಂಟಿಗ ಹೆನ್ರಿಕ್ ಕ್ಲಾಸೆನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇವರುಗಳ ಜೊತೆಗೆ ಇದೀಗ ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ (Piyush Chawla) ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.

37 ವರ್ಷದ ಪಿಯೂಷ್ ಚಾವ್ಲಾ ಇಂದು ಅಂದರೆ ಜೂನ್ 6, ಶುಕ್ರವಾರದಂದು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹೇಳಿಕೆ ಬಿಡುಗಡೆ ಮಾಡಿ ಅಭಿಮಾನಿಗಳಿಗೆ ತಮ್ಮ ನಿವೃತ್ತಿಯ ಬಗ್ಗೆ ತಿಳಿಸಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೊಸ್ಟ್ ಹಂಚಿಕೊಂಡಿರುವ ಚಾವ್ಲಾ, ಕ್ರಿಕೆಟ್​ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಹೊಂದಲು ನಿರ್ಧರಿಸಿರುವುದಾಗಿ ತಳಿಸಿದ್ದಾರೆ. ‘ಎರಡು ದಶಕಗಳ ಕಾಲ ಮೈದಾನದಲ್ಲಿ ಕಳೆದ ನಂತರ, ಈ ಸುಂದರ ಆಟಕ್ಕೆ ವಿದಾಯ ಹೇಳುವ ಸಮಯ ಬಂದಿದೆ’ ಎಂದು ಚಾವ್ಲಾ ಬರೆದುಕೊಂಡಿದ್ದಾರೆ.

ಎರಡು ವಿಶ್ವಕಪ್ ಗೆದ್ದ ತಂಡದ ಭಾಗ

ಪಿಯೂಷ್ ಚಾವ್ಲಾ ಭಾರತ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. 2007 ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ ಟಿ 20 ವಿಶ್ವಕಪ್ ಗೆದ್ದಾಗ, ಚಾವ್ಲಾ ತಂಡದ ಭಾಗವಾಗಿದ್ದರು. ಆ ಸಮಯದಲ್ಲಿ ಅವರಿಗೆ ಕೇವಲ 19 ವರ್ಷ ವಯಸ್ಸಾಗಿತ್ತು. ಆದಾಗ್ಯೂ, ಆಗ ಅವರಿಗೆ ಒಂದೇ ಒಂದು ಪಂದ್ಯ ಆಡಲು ಅವಕಾಶ ಸಿಗಲಿಲ್ಲ. ಆ ನಂತರ 2010 ರಲ್ಲಿ ಚೊಚ್ಚಲ ಟಿ20 ಪಂದ್ಯವನ್ನಾಡಿದ ಚಾವ್ಲಾ,  2011 ರಲ್ಲಿ ಏಕದಿನ ವಿಶ್ವಕಪ್ ಗೆದ್ದ ತಂಡದಲ್ಲಿಯೂ ಇದ್ದರು. ತಂಡದ ಪರ 3 ಪಂದ್ಯಗಳನ್ನು ಆಡಿದ್ದ ಚಾವ್ಲಾ 4 ವಿಕೆಟ್‌ಗಳನ್ನು ಪಡೆದರಾದರೂ  ಅವರಿಗೆ ಫೈನಲ್‌ನಲ್ಲಿ ಅವಕಾಶ ಸಿಗಲಿಲ್ಲ.

ಐಪಿಎಲ್‌ನ ಅತ್ಯಂತ ಯಶಸ್ವಿ ಬೌಲರ್‌

ಪಿಯೂಷ್ ಚಾವ್ಲಾ ಅವರ ಅಂತರರಾಷ್ಟ್ರೀಯ ವೃತ್ತಿಜೀವನವು ಹೆಚ್ಚು ಕಾಲ ಇರಲಿಲ್ಲವಾದರೂ ಅವರು ಐಪಿಎಲ್‌ನಲ್ಲಿ ಮೊದಲ ಸೀಸನ್‌ನಿಂದಲೇ ಈ ಲೀಗ್‌ನ ಭಾಗವಾಗಿದ್ದರು. ಪಂಜಾಬ್ ಕಿಂಗ್ಸ್‌ನೊಂದಿಗೆ ತಮ್ಮ ಐಪಿಎಲ್ ಪ್ರಯಾಣವನ್ನು ಪ್ರಾರಂಭಿಸಿದ ಚಾವ್ಲಾ, ಆ ನಂತರ ಕೋಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್‌ ತಂಡಗಳ ಪರವಾಗಿ ಕಣಕ್ಕಿಳಿದಿದ್ದರು. 2014 ರ ಐಪಿಎಲ್​ನಲ್ಲಿ ಕೋಲ್ಕತ್ತಾ ತಂಡವವನ್ನು ಚಾಂಪಿಯನ್ ಮಾಡುವಲ್ಲಿ ಚಾವ್ಲಾ ಅವರ ಪಾತ್ರ ಪ್ರಮುಖವಾಗಿತ್ತು. ಚಾವ್ಲಾ ಐಪಿಎಲ್‌ನ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ ಒಬ್ಬರಾಗಿದ್ದು ಆಡಿದ 192 ಪಂದ್ಯಗಳಲ್ಲಿ 192 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

IND vs ENG: ಗೆಲುವು ಖಚಿತವಿಲ್ಲ..! ಇಂಗ್ಲೆಂಡ್‌ ಪ್ರವಾಸಕ್ಕೂ ಮುನ್ನ ಗೌತಮ್ ‘ಗಂಭೀರ’ ಮಾತು

ಅಂತಾರಾಷ್ಟ್ರೀಯ ವೃತ್ತಿಜೀವನ

ಟೀಂ ಇಂಡಿಯಾದ ಮಟ್ಟಿಗೆ ಹೇಳುವುದಾದರೆ,  15 ನೇ ವಯಸ್ಸಿನಲ್ಲಿ ವೃತ್ತಿಜೀವನ ಪ್ರಾರಂಭಿಸಿದ ಚಾವ್ಲಾ ಅಂಡರ್ -19 ವಿಶ್ವಕಪ್‌ನಲ್ಲಿ ಭಾಗವಹಿಸಿದರು. ಅಲ್ಲದೆ ಎರಡು ಬಾರಿ ಅಂಡರ್ -19 ವಿಶ್ವಕಪ್ ಕೂಡ ಆಡಿದರು. ಚಾವ್ಲಾ ಒಟ್ಟು 35 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಅವರು 43 ವಿಕೆಟ್‌ಗಳನ್ನು ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:11 pm, Fri, 6 June 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ