AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs PBKS: ಸುಲಭ ಕ್ಯಾಚ್​ಗಳನ್ನು ಕೈಚೆಲ್ಲಿ ಹ್ಯಾಟ್ರಿಕ್ ಸೋಲಿಗೆ ಕೊರಳೊಡ್ಡಿದ ಪಂಜಾಬ್

SRH vs PBKS: ಐಪಿಎಲ್ 2026ರ 49ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಪಂಜಾಬ್ ಕಿಂಗ್ಸ್ ಕಳಪೆ ಫಿಲ್ಡಿಂಗ್ ಮತ್ತು ಬ್ಯಾಟಿಂಗ್‌ನಿಂದಾಗಿ ಸತತ ಮೂರನೇ ಸೋಲು ಕಂಡಿತು. ಸನ್‌ರೈಸರ್ಸ್ 235 ರನ್ ಗಳಿಸಿದ ನಂತರ, ಪಂಜಾಬ್ ತಂಡ ಈ ಬೃಹತ್ ಗುರಿ ಬೆನ್ನಟ್ಟಲು ವಿಫಲವಾಗಿ, ಹ್ಯಾಟ್ರಿಕ್ ಸೋಲಿನ ಆಘಾತಕ್ಕೆ ಒಳಗಾಯಿತು. ಈ ಸೋಲು ಅವರ ಟೂರ್ನಿಯಲ್ಲಿನ ಪ್ರಮುಖ ದೌರ್ಬಲ್ಯಗಳನ್ನು ಎತ್ತಿ ತೋರಿಸುತ್ತದೆ.

SRH vs PBKS: ಸುಲಭ ಕ್ಯಾಚ್​ಗಳನ್ನು ಕೈಚೆಲ್ಲಿ ಹ್ಯಾಟ್ರಿಕ್ ಸೋಲಿಗೆ ಕೊರಳೊಡ್ಡಿದ ಪಂಜಾಬ್
Pbks
ಪೃಥ್ವಿಶಂಕರ
|

Updated on:May 06, 2026 | 11:24 PM

Share

ಐಪಿಎಲ್ 2026 (IPL 2026) ರ49ನೇ ಪಂದ್ಯ ಸನ್‌ರೈಸರ್ಸ್ ಹೈದರಾಬಾದ್‌ ಹಾಗೂ ಪಂಜಾಬ್ ಕಿಂಗ್ಸ್ (SRH vs PBKS) ನಡುವೆ ನಡೆಯಿತು. ಈ ಪಂದ್ಯದಲ್ಲಿ ಪಂಜಾಬ್ ತಂಡ ತನ್ನ ಕಳಪೆ ಫಿಲ್ಡಿಂಗ್ ಹಾಗೂ ಕಳಪೆ ಬ್ಯಾಟಿಂಗ್​ನಿಂದಾಗಿ ಟೂರ್ನಿಯಲ್ಲಿ ಸತತ ಮೂರನೇ ಸೋಲಿಗೆ ಕೊರಳೊಡ್ಡಬೇಕಾಯಿತು. ಇಡೀ ಆವೃತ್ತಿಯಲ್ಲಿ ಪಂಜಾಬ್ ತಂಡದ ಫಿಲ್ಡಿಂಗ್ ಅತ್ಯಂತ ಕಳಪೆಯಾಗಿದೆ. ಇದರ ನಡುವೆ ಬ್ಯಾಟ್ಸ್‌ಮನ್​ಗಳ ಅಬ್ಬರದಿಂದಾಗಿ ಪಂಜಾಬ್ ಪಂದ್ಯಗಳನ್ನು ಗೆಲ್ಲುತ್ತಿತ್ತು. ಆದರೆ ಸನ್‌ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ತಂಡದ ಈ ಎರಡು ವಿಭಾಗವೂ ವಿಫಲವಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ 235 ರನ್ ಕಲೆಹಾಕಿತು. ಈ ಬೃಹತ್ ಗುರಿ ಬೆನ್ನಟ್ಟಲಾಗದೆ ಪಂಜಾಬ್ ಹ್ಯಾಟ್ರಿಕ್ ಸೋಲಿನ ಆಘಾತಕ್ಕೆ ಒಳಗಾಯಿತು. ಈ ಗೆಲುವಿನೊಂದಿಗೆ ಸನ್‌ರೈಸರ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಪಂಜಾಬ್ ತಂಡ ಎರಡನೇ ಸ್ಥಾನಕ್ಕೆ ಕುಸಿದಿದೆ.

ಸುಲಭ ಕ್ಯಾಚ್​ಗಳ ಡ್ರಾಪ್

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 235 ರನ್‌ಗಳ ಬೃಹತ್ ಸ್ಕೋರ್ ಗಳಿಸಿತು. ಆರಂಭದಿಂದಲೇ ಪಂಜಾಬ್ ಬೌಲರ್‌ಗಳ ಮೇಲೆ ದಾಳಿ ನಡೆಸಿದ ಹೈದರಾಬಾದ್ ಬ್ಯಾಟ್ಸ್‌ಮನ್‌ಗಳು ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದರು. ಇದಕ್ಕೆ ಪೂರಕವೆಂಬಂತೆ ಪಂಜಾಬ್ ಫಿಲ್ಡರ್​ಗಳು 3 ಸುಲಭ ಕ್ಯಾಚ್​ಗಳನ್ನು ಕೈಚೆಲ್ಲುವ ಮೂಲಕ ಇಶಾನ್ ಕಿಶನ್ ಹಾಗೂ ಕ್ಲಾಸೆನ್​ಗೆ ಎರಡೆರಡು ಜೀವದಾನಗಳನ್ನು ನೀಡಿದರು. ಇದರ ಲಾಭ ಪಡೆದ ಇವರಿಬ್ಬರು ತಲಾ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಈ ಬೃಹತ್ ಮೊತ್ತಕ್ಕೆ ಕೊಂಡೊಯ್ದರು.

ಪಂಜಾಬ್​ಗೆ ಆರಂಭಿಕ ಆಘಾತ

236 ರನ್​ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ತಂಡವು ಮೊದಲ ಓವರ್​ನಲ್ಲೇ ಆಘಾತ ಎದುರಿಸಿತು. ಮೊದಲ ಓವರ್​ನಲ್ಲೇ ಪ್ಯಾಟ್ ಕಮ್ಮಿನ್ಸ್, ಪ್ರಿಯಾಂಶ್ ಆರ್ಯ ಅವರನ್ನು ಕೇವಲ 1 ರನ್​ಗೆ ಔಟ್ ಮಾಡಿದರು. ನಂತರ ನಿತೀಶ್ ರೆಡ್ಡಿ ಮುಂದಿನ ಓವರ್​ನಲ್ಲಿ ಪ್ರಭ್ಸಿಮ್ರನ್ ಅವರನ್ನು 3 ರನ್​ಗೆ ಔಟ್ ಮಾಡಿದರು. ನಾಯಕ ಶ್ರೇಯಸ್ ಅಯ್ಯರ್ ಕೂಡ 5 ರನ್ ಗಳಿಸಿ ಔಟಾದರು. ಸ್ಟೊಯಿನಿಸ್ 28 ಮತ್ತು ಸೂರ್ಯಾಂಶ್ ಶೆಡ್ಜ್ 25 ರನ್ ಗಳಿಗೆ ಸುಸ್ತಾದರು. ಆದರೆ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಕೂಪರ್ ಕೊನೊಲಿ ಶತಕದ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.

ಪಾಯಿಂಟ್ ಟೇಬಲ್‌ ಸ್ಥಿತಿ

ಹೈದರಾಬಾದ್ ತಂಡವು 11 ಪಂದ್ಯಗಳಿಂದ 14 ಅಂಕಗಳೊಂದಿಗೆ ಐಪಿಎಲ್ 2026 ಅಂಕಗಳ ಪಟ್ಟಿಯಲ್ಲಿ ಈಗ ಅಗ್ರಸ್ಥಾನದಲ್ಲಿದ್ದರೆ, ಸತತ ಮೂರನೇ ಸೋಲನ್ನು ಅನುಭವಿಸಿರುವ ಪಂಜಾಬ್, 13 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ. ಆರ್‌ಸಿಬಿ ಒಂಬತ್ತು ಪಂದ್ಯಗಳಿಂದ 12 ಅಂಕಗಳನ್ನು ಹೊಂದಿದ್ದು ಮೂರನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ ಕೂಡ 10 ಪಂದ್ಯಗಳಿಂದ 12 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:08 pm, Wed, 6 May 26

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ