Champions Trophy 2025: ಪಾಕಿಸ್ತಾನದಲ್ಲಿ ಆಡಿ, ಭಾರತಕ್ಕೆ ಹಿಂತಿರುಗಿ: ಇದು ಪಿಸಿಬಿ ಪ್ಲ್ಯಾನ್

ICC Champions Trophy 2025: 2008 ರಿಂದ ಭಾರತ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸಿಲ್ಲ. ಕಳೆದ 12 ವರ್ಷಗಳಲ್ಲಿ ಉಭಯ ತಂಡಗಳು ಯಾವುದೇ ದ್ವಿಪಕ್ಷೀಯ ಸರಣಿಯನ್ನು ಸಹ ಆಡಿಲ್ಲ. ಇದೀಗ ಐಸಿಸಿ ಟೂರ್ನಿಗೆ ಪಾಕಿಸ್ತಾನ್ ಆತಿಥ್ಯವಹಿಸಲು ಸಜ್ಜಾಗಿದೆ. ಆದರೆ ಪಾಕ್​ನಲ್ಲಿ ಟೂರ್ನಿ ನಡೆದರೆ ಭಾರತ ತಂಡ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ.

Champions Trophy 2025: ಪಾಕಿಸ್ತಾನದಲ್ಲಿ ಆಡಿ, ಭಾರತಕ್ಕೆ ಹಿಂತಿರುಗಿ: ಇದು ಪಿಸಿಬಿ ಪ್ಲ್ಯಾನ್
IND vs PAK
Follow us
ಝಾಹಿರ್ ಯೂಸುಫ್
|

Updated on: Oct 19, 2024 | 11:53 AM

2025ರ ಚಾಂಪಿಯನ್ಸ್ ಟ್ರೋಫಿ ಆತಿಥ್ಯಕ್ಕೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಸಿದ್ಧತೆಗಳನ್ನು ಆರಂಭಿಸಿದೆ. ಆದರೆ ಈ ಟೂರ್ನಿಯಲ್ಲಿ ಭಾರತ ತಂಡ ಪಾಲ್ಗೊಳ್ಳಲಿದೆಯಾ ಎಂಬುದೇ ಪ್ರಶ್ನೆ. ಏಕೆಂದರೆ ಪಾಕ್​ನಲ್ಲಿ ಟೂರ್ನಿ ನಡೆದರೆ ಟೀಮ್ ಇಂಡಿಯಾ ಹಿಂದೆ ಸರಿಯುವ ಸಾಧ್ಯತೆಯಿದೆ. ಅಲ್ಲದೆ ತಟಸ್ಥ ಸ್ಥಳದಲ್ಲಿ ಟೂರ್ನಿ ಆಯೋಜಿಸಲು ಅಥವಾ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ ನಡೆಸಲು ಬಿಸಿಸಿಐ ಮನವಿ ಮಾಡುವ ಸಾಧ್ಯತೆ ಹೆಚ್ಚಿದೆ.

ಆದರೆ ಹೈಬ್ರಿಡ್ ಮಾದರಿಯಲ್ಲಿ ಅಥವಾ ತಟಸ್ಥ ಸ್ಥಳಗಳಲ್ಲಿ ಟೂರ್ನಿ ನಡೆದರೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯ ಆದಾಯಕ್ಕೆ ಹೊಡೆತ ಬೀಳಲಿದೆ. ಹೀಗಾಗಿಯೇ ಇದೀಗ ಪಿಸಿಬಿ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕರೆತರಲು ಹೊಸ ಪ್ಲ್ಯಾನ್ ರೂಪಿಸಿದೆ.

ಪಾಕಿಸ್ತಾನಕ್ಕೆ ಬನ್ನಿ, ಭಾರತಕ್ಕೆ ಹಿಂತಿರುಗಿ:

ಭಾರತ ತಂಡವು ಪಾಕಿಸ್ತಾನಕ್ಕೆ ತೆರಳದಿರಲು ಮುಖ್ಯ ಕಾರಣ ಭದ್ರತಾ ಕಾಳಜಿ. ಅದರಲ್ಲೂ ಪಾಕ್​ನಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ಸಂಪೂರ್ಣ ಸುರಕ್ಷತೆ ಸಿಗುವ ಬಗ್ಗೆ ಖಾತ್ರಿಯಿಲ್ಲ. ಹೀಗಾಗಿ ಭಾರತ ತಂಡವು ಪಾಕ್​ಗೆ ತೆರಳುವ ಸಾಧ್ಯತೆ ತುಂಬಾ ಕಡಿಮೆ. ಆದರೆ ಈ ಸಮಸ್ಯೆಯನ್ನು ಪರಿಹಾರ ಕಾಣಲು ಪಾಕ್ ಕ್ರಿಕೆಟ್ ಮಂಡಳಿ ಹೊಸ ಪ್ಲ್ಯಾನ್ ರೂಪಿಸಿದೆ. ಈ ಪ್ಲ್ಯಾನ್ ಬಗ್ಗೆ ಬಿಸಿಸಿಐಗೆ ಪತ್ರ ಬರೆದಿದೆ ಎಂದು ವರದಿಯಾಗಿದೆ.

ಈ ಪತ್ರದಲ್ಲಿ ಭಾರತ ತಂಡವು ಪಾಕಿಸ್ತಾನದಲ್ಲಿ ಉಳಿದುಕೊಳ್ಳುವ ಅವಶ್ಯಕತೆಯಿಲ್ಲ ಎಂದು ತಿಳಿಸಲಾಗಿದೆ. ಅಂದರೆ ಪ್ರತಿ ಪಂದ್ಯಕ್ಕೆ ಪಾಕಿಸ್ತಾನಕ್ಕೆ ತೆರಳಿ, ಮ್ಯಾಚ್ ಮುಗಿದ ಬಳಿಕ ಭಾರತಕ್ಕೆ ಹಿಂತಿರುಗಬಹುದು. ಇದಕ್ಕಾಗಿ ಭಾರತ ತಂಡದ ಪಂದ್ಯಗಳನ್ನು ಲಾಹೋರ್​ನಲ್ಲಿ ಆಯೋಜಿಸುವುದಾಗಿಯೂ ಪಾಕ್ ಕ್ರಿಕೆಟ್ ಮಂಡಳಿ ತಿಳಿಸಿದೆ.

ಏಕೆಂದರೆ ಲಾಹೋರ್​ ನಗರವು ಭಾರತದ ಗಡಿಗೆ ಹತ್ತಿರದಲ್ಲಿದೆ. ಅದರಲ್ಲೂ ಪಂಜಾಬ್​ನ ಚಂಡೀಗಢ ಹಾಗೂ ಲಾಹೋರ್ ನಡುವಣ ದೂರ ಕೇವಲ 246 ಕಿಲೋ ಮೀಟರ್​ಗಳು ಮಾತ್ರ. ಅಲ್ಲದೆ ಲಾಹೋರ್​ ಹಾಗೂ ಚಂಡೀಗಢ ನಗರಗಳಲ್ಲಿ ವಿಮಾನ ನಿಲ್ದಾಣಗಳಿವೆ.

ಹೀಗಾಗಿ ಭಾರತದ ಪಂದ್ಯಗಳನ್ನು ಲಾಹೋರ್​ನಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಮುಂದಾಗಿದೆ. ಅದರಂತೆ ಭಾರತ ತಂಡವು ತನ್ನ ಪಂದ್ಯಗಳಿಗೆ ನೇರವಾಗಿ ಲಾಹೋರ್​ಗೆ ಆಗಮಿಸಿ, ಮ್ಯಾಚ್ ಮುಗಿದ ಬಳಿಕ ಚಂಡೀಗಢ ಅಥವಾ ದೆಹಲಿಗೆ ತೆರಳಬಹುದು ಎಂದು ಪಿಸಿಬಿ ತಿಳಿಸಿದೆ.

ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಸಲ್ಲಿಸಿರುವ ಈ ಪ್ರಸ್ತಾವನೆಯನ್ನು ಬಿಸಿಸಿಐ ಒಪ್ಪಲಿದೆಯಾ ಎಂಬುದೇ ಈಗ ಕುತೂಹಲ. ಏಕೆಂದರೆ ಈ ಹಿಂದೆ ಬಿಸಿಸಿಐ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಬೇಕೆಂಬ ಬೇಡಿಕೆಯಿಟ್ಟಿದೆ ಎಂದು ವರದಿಯಾಗಿತ್ತು.

ಏನಿದು ಹೈಬ್ರಿಡ್ ಮಾದರಿ?

ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ನಡೆದರೆ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲೇ ನಡೆಯಲಿದೆ. ಆದರೆ ಭಾರತದ ಪಂದ್ಯಗಳನ್ನು ಬೇರೆ ದೇಶಗಳಲ್ಲಿ ಆಯೋಜಿಸಲಾಗುತ್ತದೆ. ಇಲ್ಲಿ ಟೀಮ್ ಇಂಡಿಯಾದ ಪಂದ್ಯಗಳು ಶ್ರೀಲಂಕಾ ಅಥವಾ ಯುಎಇ ನಲ್ಲಿ ಆಯೋಜನೆಗೊಳ್ಳಬಹುದು. ಹೀಗೆ ಒಂದು ಟೂರ್ನಿಯನ್ನು ಎರಡು ದೇಶಗಳಲ್ಲಿ ಆಯೋಜಿಸುವುದನ್ನು ಹೈಬ್ರಿಡ್ ಮಾದರಿ ಎನ್ನಲಾಗುತ್ತದೆ.

ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಬೇಕಿದ್ದರೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಡಿಮ್ಯಾಂಡ್ ಮಾಡಬಹುದು. ಏಕೆಂದರೆ 2023 ಏಷ್ಯಾಕಪ್ ಆಯೋಜನೆಯ ಹಕ್ಕು ಪಾಕ್ ಕ್ರಿಕೆಟ್ ಮಂಡಳಿ ಬಳಿಯಿತ್ತು. ಆದರೆ ಭಾರತ ತಂಡವು ಪಾಕ್​ಗೆ ತೆರಳಲು ಹಿಂದೇಟು ಹಾಕಿದ್ದರಿಂದ ಟೂರ್ನಿಯನ್ನು ಹೈಬ್ರೀಡ್ ಮಾದರಿಯಲ್ಲಿ ಆಯೋಜಿಸಲಾಗಿತ್ತು.

ಅದರಂತೆ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ಏಷ್ಯಾಕಪ್​ನ್ನು ಆಯೋಜಿಸಲಾಗಿತ್ತು. ಇಲ್ಲಿ ಭಾರತ ತಂಡವು ಫೈನಲ್ ಸೇರಿದಂತೆ ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿದ್ದರು. ಇದೀಗ ಚಾಂಪಿಯನ್ಸ್ ಟ್ರೋಫಿಯನ್ನೂ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಬಿಸಿಸಿಐ ಬೇಡಿಕೆ ಮುಂದಿಡುವ ಸಾಧ್ಯತೆಯಿದೆ.

ಇದನ್ನೂ ಓದಿ: ಶೂನ್ಯದೊಂದಿಗೆ ಶತಕ… ವಿಶೇಷ ದಾಖಲೆ ಬರೆದ ಸರ್ಫರಾಝ್ ಖಾನ್

ಇದೇ ಕಾರಣದಿಂದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಪಾಕ್​ಗೆ ಬಂದು ಪಂದ್ಯ ಆಡಿ ಹೋಗಿ ಎಂಬ ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಈ ಪ್ರಸ್ತಾವನೆಯನ್ನು ಬಿಸಿಸಿಐ ಒಪ್ಪಲಿದೆಯಾ ಕಾದು ನೋಡಬೇಕಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ ತಂಡಗಳು:

  • ಪಾಕಿಸ್ತಾನ್ (ಆತಿಥೇಯ ರಾಷ್ಟ್ರ)
  • ಭಾರತ
  • ಸೌತ್ ಆಫ್ರಿಕಾ
  • ಆಸ್ಟ್ರೇಲಿಯಾ
  • ನ್ಯೂಝಿಲ್ಯಾಂಡ್
  • ಅಫ್ಘಾನಿಸ್ತಾನ್
  • ಇಂಗ್ಲೆಂಡ್
  • ಬಾಂಗ್ಲಾದೇಶ್
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್