VIDEO: ಹೃದಯಾಘಾತದಿಂದ ಮೈದಾನದಲ್ಲೇ ಮೃತಪಟ್ಟ ಕ್ರಿಕೆಟಿಗ
ನೋಯ್ಡಾದ ಥಾನಾ ಎಕ್ಸ್ಪ್ರೇಸ್ವೇ ಸೆಕ್ಟರ್-135 ಪ್ರದೇಶದಲ್ಲಿ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಉತ್ತರಾಖಂಡ ಮೂಲದ ವಿಕಾಸ್ ನೇಗಿ ಕಣಕ್ಕಿಳಿದಿದ್ದರು. ಪಂದ್ಯದ ನಡುವೆಯೇ ದಿಢೀರ್ ಕುಸಿತಕ್ಕೊಳಗಾದ ವಿಕಾಸ್ ಪಿಚ್ ಮೇಲೆ ಬಿದ್ದಿದ್ದಾರೆ.
ದೇಶದಲ್ಲಿ ಹೃದಯಾಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲೂ ಸಂಪೂರ್ಣ ಫಿಟ್ನೆಸ್ ಹೊಂದಿದ್ದರೂ ಕೆಲವರು ಹೃದಯಾಘಾತ ಹಾಗೂ ಹೃದಯ ಸ್ತಂಭನದಿಂದ ಸಾವನ್ನಪ್ಪುತ್ತಿರುವ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿದೆ. ಇದೀಗ ಕ್ರಿಕೆಟ್ (Cricket) ಪಂದ್ಯಾಟ ನಡುವೆಯೇ 36 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.
ನೋಯ್ಡಾದ ಥಾನಾ ಎಕ್ಸ್ಪ್ರೇಸ್ವೇ ಸೆಕ್ಟರ್-135 ಪ್ರದೇಶದಲ್ಲಿ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಉತ್ತರಾಖಂಡ ಮೂಲದ ವಿಕಾಸ್ ನೇಗಿ ಕಣಕ್ಕಿಳಿದಿದ್ದರು.
ಅದರಂತೆ ಬ್ಯಾಟಿಂಗ್ ಮಾಡುತ್ತಿದ್ದಾಗ ವಿಕಾಸ್ ನೇಗಿ ರನ್ ಓಡಿದ್ದರು. ಆದರೆ ಚೆಂಡು ಬೌಂಡರಿ ಲೈನ್ ದಾಟಿತ್ತು. ಹೀಗಾಗಿ ಕ್ರೀಸ್ನ ಮಧ್ಯ ಭಾಗದಿಂದ ಮತ್ತೆ ನಾನ್ ಸ್ಟ್ರೈಕ್ನತ್ತ ಮರಳಲು ಮುಂದಾಗಿದ್ದರು. ಆದರೆ ದಿಢೀರ್ ಕುಸಿತಕ್ಕೊಳಗಾದ ವಿಕಾಸ ನೇಗಿ ಪಿಚ್ ಮೇಲೆ ಬಿದ್ದಿದ್ದಾರೆ.
ಇದನ್ನೂ ಓದಿ: ಶ್ರೀರಾಮನ ಹಾಡು ಕೇಳುವುದೇ ಖುಷಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ
ತಕ್ಷಣವೇ ಎದುರಾಳಿ ತಂಡದ ವಿಕೆಟ್ ಕೀಪರ್ ಹಾಗೂ ಸಹ ಆಟಗಾರ ವಿಕಾಸ್ ನೇಗಿ ಬಳಿ ಓಡಿ ಬಂದಿದ್ದಾರೆ. ಆ ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲ್ಲೇ ವಿಕಾಸ್ ನೇಗಿ ಮೃತಪಟ್ಟಿದ್ದಾರೆ ವೈದ್ಯರು ತಿಳಿಸಿದ್ದಾರೆ.
Shocking Video: Cricketer Collapses On The Pitch And Dies Of Heart Attack.
Vikas Negi, with the tragic incident occurring in NOIDA in the match between Mavericks XI and Blazing Bulls. Players had tried to perform CPR, but he was pronounced dead.#HeartAttack #NOIDA #ViralVideo pic.twitter.com/dMQrdma52F
— AH Siddiqui (@anwar0262) January 9, 2024
ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದಿದ್ದು, ಈ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆ ವಿಕಾಸ್ ನೇಗಿ ಕೋವಿಡ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿದ್ದರು. ಇದಾಗ್ಯೂ ಅವರು ಸಂಪೂರ್ಣ ಆರೋಗ್ಯವಂತರಾಗಿದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ.