Cricket Records: ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿ ಇಲ್ಲಿದೆ
Virat Kohli Records: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ಭಾರತದ ಪರ 500 ಪಂದ್ಯಗಳನ್ನಾಡಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.
ಪೋರ್ಟ್ ಆಫ್ ಸ್ಪೇನ್ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ 500 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ವಿಶ್ವದ 10ನೇ ಆಟಗಾರ ಎನಿಸಿಕೊಂಡಿದ್ದಾರೆ. ಅದರಂತೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…
- ಸಚಿನ್ ತೆಂಡೂಲ್ಕರ್: ಮಾಸ್ಟರ್ ಬ್ಲಾಸ್ಟರ್ ಖ್ಯಾತಿಯ ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ದಾಖಲೆ ಹೊಂದಿದ್ದಾರೆ. ಸಚಿನ್ ಒಟ್ಟು 664 ಪಂದ್ಯಗಳನ್ನಾಡಿದ ಈ ದಾಖಲೆ ನಿರ್ಮಿಸಿದ್ದಾರೆ.
- ಮಹೇಲ ಜಯವರ್ಧನೆ: ಶ್ರೀಲಂಕಾ ತಂಡದ ಮಾಜಿ ನಾಯಕ ಮಹೇಲ ಜಯವರ್ಧನೆ ಒಟ್ಟು 652 ಪಂದ್ಯಗಳನ್ನಾಡಿ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.
- ಕುಮಾರ್ ಸಂಗಾಕ್ಕರ: ಶ್ರೀಲಂಕಾ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕುಮಾರ್ ಸಂಗಾಕ್ಕರ ಒಟ್ಟು 594 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.
- ಸನತ್ ಜಯಸೂರ್ಯ: ಶ್ರೀಲಂಕಾ ತಂಡದ ಮಾಜಿ ಆರಂಭಿಕ ಆಟಗಾರ ಸನತ್ ಜಯಸೂರ್ಯ ಒಟ್ಟು 586 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು.
- ರಿಕಿ ಪಾಂಟಿಂಗ್: ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಒಟ್ಟು 560 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು.
- ಮಹೇಂದ್ರ ಸಿಂಗ್ ಧೋನಿ: ಟೀಮ್ ಇಂಡಿಯಾದ ಮಾಜಿ ನಾಯಕ ಧೋನಿ 538 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು.
- ಶಾಹಿದ್ ಅಫ್ರಿದಿ: ಪಾಕಿಸ್ತಾನ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಒಟ್ಟು 524 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು.
- ಜಾಕ್ ಕಾಲಿಸ್: ಸೌತ್ ಆಫ್ರಿಕಾದ ಮಾಜಿ ಆಲ್ರೌಂಡರ್ ಜಾಕ್ ಕಾಲಿಸ್ 519 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದರು.
- ರಾಹುಲ್ ದ್ರಾವಿಡ್: ದಿ ಗ್ರೇಟ್ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ 509 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು.
- ವಿರಾಟ್ ಕೊಹ್ಲಿ: ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಇದೀಗ 500ನೇ ಪಂದ್ಯವಾಡುವ ಮೂಲಕ ಈ ಸಾಧನೆ ಮಾಡಿದ ವಿಶ್ವದ 4ನೇ ಆಟಗಾರ ಎನಿಸಿಕೊಂಡಿದ್ದಾರೆ.