Cricket Records: ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿ ಇಲ್ಲಿದೆ

| Updated By: ಝಾಹಿರ್ ಯೂಸುಫ್

Updated on: Jul 20, 2023 | 9:38 PM

Virat Kohli Records: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ಭಾರತದ ಪರ 500 ಪಂದ್ಯಗಳನ್ನಾಡಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

Cricket Records: ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿ ಇಲ್ಲಿದೆ
Virat Kohli-Sangakara-Sachin
Follow us on

ಪೋರ್ಟ್​ ಆಫ್ ಸ್ಪೇನ್​ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್​ ವಿರುದ್ಧದ 2ನೇ ಟೆಸ್ಟ್​ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ 500 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ವಿಶ್ವದ 10ನೇ ಆಟಗಾರ ಎನಿಸಿಕೊಂಡಿದ್ದಾರೆ. ಅದರಂತೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

  1. ಸಚಿನ್ ತೆಂಡೂಲ್ಕರ್: ಮಾಸ್ಟರ್ ಬ್ಲಾಸ್ಟರ್ ಖ್ಯಾತಿಯ ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ದಾಖಲೆ ಹೊಂದಿದ್ದಾರೆ. ಸಚಿನ್ ಒಟ್ಟು 664 ಪಂದ್ಯಗಳನ್ನಾಡಿದ ಈ ದಾಖಲೆ ನಿರ್ಮಿಸಿದ್ದಾರೆ.
  2. ಮಹೇಲ ಜಯವರ್ಧನೆ: ಶ್ರೀಲಂಕಾ ತಂಡದ ಮಾಜಿ ನಾಯಕ ಮಹೇಲ ಜಯವರ್ಧನೆ ಒಟ್ಟು 652 ಪಂದ್ಯಗಳನ್ನಾಡಿ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.
  3. ಕುಮಾರ್ ಸಂಗಾಕ್ಕರ: ಶ್ರೀಲಂಕಾ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕುಮಾರ್ ಸಂಗಾಕ್ಕರ ಒಟ್ಟು 594 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.
  4. ಸನತ್ ಜಯಸೂರ್ಯ: ಶ್ರೀಲಂಕಾ ತಂಡದ ಮಾಜಿ ಆರಂಭಿಕ ಆಟಗಾರ ಸನತ್ ಜಯಸೂರ್ಯ ಒಟ್ಟು 586 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು.
  5.  ರಿಕಿ ಪಾಂಟಿಂಗ್: ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಒಟ್ಟು 560 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು.
  6.  ಮಹೇಂದ್ರ ಸಿಂಗ್ ಧೋನಿ: ಟೀಮ್ ಇಂಡಿಯಾದ ಮಾಜಿ ನಾಯಕ ಧೋನಿ 538 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು.
  7. ಶಾಹಿದ್ ಅಫ್ರಿದಿ: ಪಾಕಿಸ್ತಾನ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಒಟ್ಟು 524 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದರು.
  8.  ಜಾಕ್ ಕಾಲಿಸ್: ಸೌತ್ ಆಫ್ರಿಕಾದ ಮಾಜಿ ಆಲ್​ರೌಂಡರ್ ಜಾಕ್ ಕಾಲಿಸ್ 519 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದರು.
  9. ರಾಹುಲ್ ದ್ರಾವಿಡ್: ದಿ ಗ್ರೇಟ್ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ 509 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು.
  10. ವಿರಾಟ್ ಕೊಹ್ಲಿ: ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ ಇದೀಗ 500ನೇ ಪಂದ್ಯವಾಡುವ ಮೂಲಕ ಈ ಸಾಧನೆ ಮಾಡಿದ ವಿಶ್ವದ 4ನೇ ಆಟಗಾರ ಎನಿಸಿಕೊಂಡಿದ್ದಾರೆ.