ಟೀಂ ಇಂಡಿಯಾ ಆಟಗಾರರನ್ನು ಭೇಟಿಯಾಗಿ ನೈತಿಕ ಸ್ಥೈರ್ಯ ತುಂಬಿದ ಪ್ರಧಾನಿ ಮೋದಿ

ICC World Cup 2023: ತಂಡದ ಪ್ರದರ್ಶನವನ್ನು ಪ್ರಶಂಸಿದ ಪ್ರಧಾನಿ ನರೇಂದ್ರ ಮೋದಿ, ಫೈನಲ್ ಪಂದ್ಯವನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಬಂದಿದಲ್ಲದೆ, ಪಂದ್ಯದ ಬಳಿಕ ಟೀಂ ಇಂಡಿಯಾ ಆಟಗಾರ ಡ್ರೆಸ್ಸಿಂಗ್ ಕೋಣೆಗೆ ತೆರಳಿ, ಆಟಗಾರರ ಹುರಿದುಂಬಿಸುವ ಕೆಲಸವನ್ನೂ ಮಾಡಿದರು.

ಟೀಂ ಇಂಡಿಯಾ ಆಟಗಾರರನ್ನು ಭೇಟಿಯಾಗಿ ನೈತಿಕ ಸ್ಥೈರ್ಯ ತುಂಬಿದ ಪ್ರಧಾನಿ ಮೋದಿ
ಟೀಂ ಇಂಡಿಯಾ ಆಟಗಾರರೊಂದಿಗೆ ಮೋದಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Nov 20, 2023 | 4:07 PM

2023ರ ವಿಶ್ವಕಪ್‌ನ (ICC World Cup 2023) ಫೈನಲ್‌ನಲ್ಲಿ ಭಾರತವನ್ನು 6 ವಿಕೆಟ್‌ಗಳಿಂದ ಸೋಲಿಸಿದ ಆಸ್ಟ್ರೇಲಿಯಾ (India Vs Australia) ತಂಡ 6ನೇ ಬಾರಿಗೆ ಏಕದಿನ ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಅಲ್ಲಿಗೆ ಭಾರತದ ವಿಶ್ವಕಪ್​ ಕನಸು ಕಮರಿದೆ. ನಿನ್ನೆ ನಿಮ್ಮೊಂದಿಗೆ ನಾವು ಇದ್ದೇವೆ ಎಂದು ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಪಂದ್ಯದ ಬಳಿಕ ಟೀಂ ಇಂಡಿಯಾ ಆಟಗಾರರ ಡ್ರೆಸ್ಸಿಂಗ್ ಕೋಣೆಗೆ ತೆರಳಿ, ಆಟಗಾರರನ್ನು ಹುರಿದುಂಬಿಸುವ ಕೆಲಸವನ್ನು ಸಹ ಮಾಡಿದ್ದಾರೆ.

ಆಟಗಾರರನ್ನು ಭೇಟಿಯಾದ ಮೋದಿ

ಫೈನಲ್‌ ಪಂದ್ಯ ಮುಗಿದ ಬಳಿಕ ಭಾರತೀಯ ಆಟಗಾರರ ಡ್ರೆಸ್ಸಿಂಗ್ ಕೋಣೆಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮೂಲದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಸೇರಿದಂತೆ ತಂಡದ ಇತರ ಆಟಗಾರರನ್ನು ಭೇಟಿ ಮಾಡಿದರು. ಹಾಗೆಯೇ ಟೂರ್ನಿಯಲ್ಲಿ ತಂಡದ ಪ್ರದರ್ಶನವನ್ನು ಶ್ಲಾಘಿಸಿದರು. ಆಟಗಾರರನ್ನು ಮೋದಿ ಭೇಟಿ ಮಾಡಿರುವ ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿರುವ ಜಡೇಜಾ, ನಾವು ವಿಶ್ವಕಪ್​ನಲ್ಲಿ ಅದ್ಭುತ ಜರ್ನಿ ಹೊಂದಿದ್ದೇವು. ಆದರೆ ನಿನ್ನೆಯ ದಿನ ನಮ್ಮದಾಗಿರಲಿಲ್ಲ. ಸೋಲಿನ ಹತಾಶೆಯಲ್ಲಿದ್ದ ನಮಗೆ ಮೋದಿ ಅವರ ಭೇಟಿ ಹೆಚ್ಚಿನ ಉತ್ಸಾಹ ತುಂಬಿದೆ ಎಂದು ಬರೆದುಕೊಂಡಿದ್ದಾರೆ.

ಮೈದಾನದಲ್ಲಿ ಮೋದಿ ಉಪಸ್ಥಿತಿ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನೆರೆದಿದ್ದ ಲಕ್ಷಾಂತರ ಪ್ರೇಕ್ಷಕರ ಜಯಘೋಷಗಳ ನಡುವೆ ಪ್ರಧಾನಿ ಮೋದಿ ಪಂದ್ಯದ ಮಧ್ಯದಲ್ಲಿ ನರೇಂದ್ರ ಮೋದಿ ಸ್ಟೇಡಿಯಂಗೆ ಆಗಮಿಸಿದರು. ಆಸ್ಟ್ರೇಲಿಯಾ 240 ರನ್ ಚೇಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರವಿಶ್ವಕಪ್ ಟ್ರೋಫಿಯನ್ನು ಪ್ಯಾಟ್ ಕಮಿನ್ಸ್‌ಗೆ ಹಸ್ತಾಂತರಿಸಿದರು. ಆ ಬಳಿಕ ಟೀಂ ಇಂಡಿಯಾ ಆಟಗಾರರನ್ನು ಭೇಟಿಯಾದ ಮೋದಿ, ಸ್ವಲ್ಪ ಸಮಯ ಅವರೊಂದಿಗೆ ಕಳೆದು ಆ ಬಳಿಕ ತೆರಳಿದರು. ಹಾಗೆಯೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಆಟಗಾರರ ಪ್ರದರ್ಶನವನ್ನು ಕೊಂಡಾಡಿದರು.

ವಿಶ್ವಕಪ್‌ನಲ್ಲಿ ಭಾರತಕ್ಕೆ ವಿರೋಚಿತ ಸೋಲು: ನಿಮ್ಮೊಂದಿಗೆ ನಾವಿದ್ದೇವೆ ಎಂದ ಪ್ರಧಾನಿ ಮೋದಿ

ಡ್ರೆಸ್ಸಿಂಗ್ ಕೋಣೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ ಬಳಿಕ ಭಾರತ ತಂಡದ ಆಟಗಾರ ಮೊಹಮ್ಮದ್ ಶಮಿ ಕೂಡ ಟ್ವೀಟ್ ಮಾಡಿದ್ದು, ದುರದೃಷ್ಟವಶಾತ್ ನಿನ್ನೆ ನಮ್ಮ ದಿನವಾಗಿರಲಿಲ್ಲ. ಪಂದ್ಯದುದ್ದಕ್ಕೂ ನಮ್ಮ ತಂಡ ಮತ್ತು ನನ್ನನ್ನು ಬೆಂಬಲಿಸಿದ್ದಕ್ಕಾಗಿ ನಾನು ಎಲ್ಲಾ ಭಾರತೀಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಡ್ರೆಸ್ಸಿಂಗ್ ಕೋಣೆಗೆ ಬಂದು ನಮ್ಮ ಉತ್ಸಾಹವನ್ನು ಹೆಚ್ಚಿಸುವುದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ವಿಶೇಷ ಧನ್ಯವಾಗಳು. ನಾನು ಮತ್ತೆ ಪುಟಿದೇಳುತ್ತೇವೆ ಎಂದು ಬರೆದುಕೊಂಡಿದ್ದಾರೆ.

ಮೊಹಮ್ಮದ್ ಶಮಿ ಟ್ವೀಟ್​

ಎಕ್ಸ್ ಖಾತೆಯಲ್ಲಿ ಅಭಿನಂದಿಸಿದ ಮೋದಿ

ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಅಭಿಯಾನದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿರುವ ಪ್ರಧಾನಿ ಮೋದಿ, ಪ್ರೀತಿಯ ಭಾರತ ತಂಡ, ಈ ವಿಶ್ವಕಪ್​ನಲ್ಲಿ ನಿಮ್ಮ ಪ್ರತಿಭೆ ಮತ್ತು ದೃಢನಿಶ್ಚಯ ಗಮನಾರ್ಹವಾಗಿದೆ. ನೀವು ಬಹಳ ಉತ್ಸಾಹದಿಂದ ಆಡಿದ್ದೀರಿ ಮತ್ತು ರಾಷ್ಟ್ರಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದೀರಿ ನಾವು ಇಂದು ಮತ್ತು ಯಾವಾಗಲೂ ನಿಮ್ಮೊಂದಿಗೆ ಇರುತ್ತೇವೆ ಎಂದು ಬರೆದುಕೊಂಡಿದ್ದರು.

ಈ ಹಿಂದೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುಂಡಿದ್ದ ಭಾರತ, ಒಂದೇ ವರ್ಷದಲ್ಲಿ ಎರಡನೇ ಬಾರಿ ಐಸಿಸಿ ಫೈನಲ್‌ನಲ್ಲಿ ಆಸೀಸ್ ವಿರುದ್ಧ ಮುಗ್ಗರಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:27 pm, Mon, 20 November 23

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್