ದೆಹಲಿ ನವೆಂಬರ್ 15: ಇಂದು(ಬುಧವಾರ) ವಿರಾಟ್ ಕೊಹ್ಲಿ (Virat Kohli) ಕೇವಲ ತಮ್ಮ 50 ನೇ ಏಕದಿನ ಪಂದ್ಯ ಶತಕವನ್ನು ಗಳಿಸಿದ್ದು ಮಾತ್ರವಲ್ಲ ಅತ್ಯುತ್ತಮ ಕ್ರೀಡಾ ಮನೋಭಾವವನ್ನು ವ್ಯಾಖ್ಯಾನಿಸುವ ಶ್ರೇಷ್ಠತೆ ಮತ್ತು ಪರಿಶ್ರಮದ ಮನೋಭಾವವನ್ನು ಸಹ ಪ್ರದರ್ಶಿಸಿದ್ದಾರೆ. ಈ ಗಮನಾರ್ಹ ಮೈಲುಗಲ್ಲು ಅವರ ನಿರಂತರ ಸಮರ್ಪಣೆ ಮತ್ತು ಅಸಾಧಾರಣ ಪ್ರತಿಭೆಗೆ ಸಾಕ್ಷಿಯಾಗಿದೆ. ನಾನು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವರು ಮುಂದಿನ ಪೀಳಿಗೆಗೆ ಬೆಂಚ್ಮಾರ್ಕ್ ಸ್ಥಾಪಿಸುವುದನ್ನು ಮುಂದುವರಿಸಲಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಟ್ವೀಟ್ ಮಾಡಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಅವರ ಶತಕಗಳ ನೆರವಿನಿಂದ ಭಾರತ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು 398 ರನ್ ಗಳ ಬೃಹತ್ ಗುರಿ ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 397 ರನ್ ಗಳಿಸಿತು. ವಿರಾಟ್ ಕೊಹ್ಲಿ ಏಕದಿನ ವೃತ್ತಿಜೀವನದಲ್ಲಿ ನಲ್ಲಿ 50ನೇ ಶತಕ ಸಿಡಿಸಿದ್ದು ಹಲವು ಬ್ಯಾಟಿಂಗ್ ದಾಖಲೆಗಳನ್ನು ಮುರಿದಿದ್ದಾರೆ. ಇಂದಿನ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಮುಂದೆ ಕಿವೀಸ್ ಬೌಲಿಂಗ್ ಮುಗ್ಗರಿಸಿದೆ.
Today, @imVkohli has not just scored his 50th ODI century but has also exemplified the spirit of excellence and perseverance that defines the best of sportsmanship.
This remarkable milestone is a testament to his enduring dedication and exceptional talent.
I extend heartfelt… pic.twitter.com/MZKuQsjgsR
— Narendra Modi (@narendramodi) November 15, 2023
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ 49 ಶತಕಗಳ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದ್ದು ಏಕದಿನ ಕ್ರಿಕೆಟ್ ನಲ್ಲಿ 50 ಶತಕ ಪೂರೈಸಿದ ಮೊದಲ ಆಟಗಾರ ಎಂಬ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಮತ್ತು 50+ ಸ್ಕೋರ್‌ಗಳ ದಾಖಲೆಗಳಲ್ಲಿ ಕೊಹ್ಲಿ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದರು. ಕೊಹ್ಲಿ 106 ಎಸೆತಗಳಲ್ಲಿ ಶತಕ ಪೂರೈಸಿದರು. 113 ಎಸೆತಗಳಲ್ಲಿ 117 ರನ್ ಗಳಿಸಿದ್ದ ಕೊಹ್ಲಿ ಟಿಮ್ ಸೌಥಿ ಎಸೆತದಲ್ಲಿ ಡೆವೊನ್ ಕಾನ್ವೆಗೆ ಕ್ಯಾಚ್ ನೀಡಿ ಔಟಾಗಿದ್ದಾರೆ.
ಟಾಸ್ ಗೆದ್ದ ಭಾರತಕ್ಕೆ ನಾಯಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಉತ್ತಮ ಆರಂಭ ನೀಡಿದರು. ಇಬ್ಬರೂ ಮೊದಲ ವಿಕೆಟ್‌ಗೆ 71 ರನ್ ಕಲೆ ಹಾಕಿದ್ದರು. ಏತನ್ಮಧ್ಯೆ, ಭಾರತ ತಂಡದ ನಾಯಕ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ ದಾಖಲೆಯನ್ನು ಸಹ ಹೊಂದಿದ್ದಾರೆ. ರೋಹಿತ್ 27 ಇನ್ನಿಂಗ್ಸ್‌ಗಳಲ್ಲಿ 50 ಸಿಕ್ಸರ್‌ಗಳನ್ನು ಬಾರಿಸಿದ್ದರು. 34 ಇನ್ನಿಂಗ್ಸ್‌ಗಳಲ್ಲಿ 49 ಸಿಕ್ಸರ್‌ಗಳನ್ನು ಬಾರಿಸಿದ್ದ ವೆಸ್ಟ್‌ಇಂಡೀಸ್‌ನ ಮಾಜಿ ಆಟಗಾರ ಕ್ರಿಸ್ ಗೇಲ್ ಅವರನ್ನು ರೋಹಿತ್ ಶರ್ಮಾ ಹಿಂದಿಕ್ಕಿದ್ದಾರೆ.
ಇದನ್ನೂ ಓದಿ: Virat Kohli: ಏಕದಿನದಲ್ಲಿ ರಿಕಿ ಪಾಂಟಿಂಗ್ ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ ಕಿಂಗ್ ಕೊಹ್ಲಿ..!
ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ವಿಶ್ವಕಪ್‌ನಲ್ಲಿ 1,500 ರನ್ ದಾಟಿದ್ದಾರೆ. ಪಂದ್ಯದಲ್ಲಿ 29 ಎಸೆತಗಳನ್ನು ಎದುರಿಸಿದ ಹಿಟ್ ಮ್ಯಾನ್ ಟಿಮ್ ಸೌಥಿ ಎಸೆತದಲ್ಲಿ ಕೇನ್ ವಿಲಿಯಮ್ಸನ್ ಗೆ ಕ್ಯಾಚಿತ್ತು 47 ರನ್ ಗಳಿಸಿ ಔಟಾದರು. ಶತಕದತ್ತ ದಾಪುಗಾಲಿಡುತ್ತಿದ್ದ ಶುಭಮನ್ ಗಿಲ್ 23ನೇ ಓವರ್ ನಲ್ಲಿ ತೀವ್ರ ಸ್ನಾಯು ಸೆಳೆತದಿಂದ ಕ್ರೀಸ್ ತೊರೆಯಬೇಕಾಗಿ ಬಂತು. ನಾಲ್ಕನೇ ಕ್ರಮಾಂಕದಲ್ಲಿ ಬಂದ ಶ್ರೇಯಸ್ ಜತೆ ಭರ್ಜರಿ ಆಟವಾಡಿ ಕೊಹ್ಲಿ ಶತಕ ಪೂರೈಸಿದರು. ಇದು ಈ ವಿಶ್ವಕಪ್‌ನಲ್ಲಿ ಕೊಹ್ಲಿ ಅವರ ಎಂಟನೇ 50+ ಸ್ಕೋರ್ ಆಗಿದೆ. ಇದರೊಂದಿಗೆ ಸಚಿನ್ ತೆಂಡೂಲ್ಕರ್ ಮತ್ತು ಶಕೀಬ್ ಅಲ್ ಹಸನ್ ದಾಖಲೆ ಮುರಿದಿದೆ.
ಮತ್ತಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ