IPL 2021 Teams Points Table: ಆರ್ಸಿಬಿ, ಸಿಎಸ್ಕೆ ಗೆಲುವಿನ ಬಳಿಕ ಪಾಯಿಂಟ್ ಟೇಬಲ್ನಲ್ಲಾಗಿದೆ ಬಹುದೊಡ್ಡ ಬದಲಾವಣೆ
ಎಂ. ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೆ ಅಗ್ರಸ್ಥಾನಕ್ಕೇರಿದೆ. ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಎಂಟರಲ್ಲಿ ಗೆಲುವು ಕಂಡಿದೆ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 16 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +1.069 ನೆಟ್ರೇಟ್ನೊಂದಿಗೆ ಮೊದಲ ಸ್ಥಾನದಲ್ಲಿದೆ.

ಭಾರತದಲ್ಲಿ ಅರ್ಧಕ್ಕೆ ನಿಂತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ 2021 (IPL 2021) ಟೂರ್ನಿ ಯುಎಇನಲ್ಲಿ ಮುಂದುವರೆಯುತ್ತಿದ್ದು ರೋಚಕ ಘಟ್ಟದತ್ತ ತಲುಪುತ್ತಿದೆ. ಈಗಾಗಲೇ ಕೇನ್ ವಿಲಿಯಮ್ಸನ್ ನಾಯಕತ್ವದ ಸನ್ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡ ಟೂರ್ನಿಯಿಂದ ಹೊರಬಿದ್ದಿದೆ. ರಿಷಭ್ ಪಂತ್ (Rishabh Pant) ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ಲೇ ಆಫ್ ಪ್ರವೇಶಿಸಿದೆ. ಇದು ಖಚಿತವಾಗಿದ್ದು ಅಧಿಕೃತವಾಗಬೇಕಷ್ಟೆ. ಭಾನುವಾರದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸಿಎಸ್ಕೆ (CSK vs KKR) ರೋಚಕ ಗೆಲುವು ಸಾಧಿಸಿದೆ. ಮತ್ತೊಂದು ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್ಸಿಬಿ (RCB vs MI) ಜಯ ಕಂಡಿದೆ. ಹೀಗಾಗಿ ಸದ್ಯ ಪಾಯಿಂಟ್ ಟೇಬಲ್ನಲ್ಲಿ (IPL 2021 Points Table) ಸಾಕಷ್ಟು ಬದಲಾವಣೆಗಳಾಗಿವೆ.
ಎಂ. ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೆ ಅಗ್ರಸ್ಥಾನಕ್ಕೇರಿದೆ. ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಎಂಟರಲ್ಲಿ ಗೆಲುವು ಕಂಡಿದೆ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 16 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +1.069 ನೆಟ್ರೇಟ್ನೊಂದಿಗೆ ಮೊದಲ ಸ್ಥಾನದಲ್ಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಎಂಟರಲ್ಲಿ ಗೆಲುವು ಕಂಡಿದೆ. ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 16 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.711 ನೆಟ್ರೇಟ್ನೊಂದಿಗೆ ಎರಡನೇ ಸ್ಥಾನದಲ್ಲಿದೆ.
ಐಪಿಎಲ್ ಎರಡನೇ ಚರಣವನ್ನು ಕೆಟ್ಟದಾಗಿ ಪ್ರಾರಂಭಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಗೂ ಗೆಲುವಿನ ಲಯಕ್ಕೆ ಮರಳಿಸಿದೆ. ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಆರರಲ್ಲಿ ಗೆಲುವು ಕಂಡಿದೆ. ನಾಲ್ಕರಲ್ಲಿ ಸೋತಿದೆ. ಒಟ್ಟು 12 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.339 ನೆಟ್ರೇಟ್ನೊಂದಿಗೆ ಮೂರನೇ ಸ್ಥಾನದಲ್ಲಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಒಟ್ಟು 10 ಪಂದ್ಯಗಳನ್ನು ಆಡಿದ್ದು ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಆರು ಪಂದ್ಯಗಳಲ್ಲಿ ಸೋತಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.322 ನೆಟ್ರೇಟ್ನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಇನ್ನೂ ಕೆ. ಎಲ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಪ್ಲೇ ಆಫ್ಗೆ ಲಗ್ಗೆಯಿಡಲು ಹರಸಾಹಸ ಪಡುತ್ತಿದೆ. ಈವರೆಗೆ ಒಟ್ಟು 10 ಪಂದ್ಯಗಳನ್ನು ಆಡಿದ್ದು ಕೇವಲ 4 ಪಂದ್ಯಗಳನ್ನಷ್ಟೆ ಗೆದ್ದಿದೆ. ಆರು ಪಂದ್ಯಗಳಲ್ಲಿ ಸೋಲುಂಡಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.271 ನೆಟ್ರೇಟ್ನೊಂದಿಗೆ ಐದನೇ ಸ್ಥಾನದಲ್ಲಿದೆ.
ರಾಜಸ್ಥಾನ್ ರಾಯಲ್ಸ್ ತಂಡ ಈವರೆಗೆ ಒಟ್ಟು 9 ಪಂದ್ಯಗಳನ್ನು ಆಡಿದ್ದು ಸಂಕಷ್ಟದಲ್ಲಿದೆ. ನಾಲ್ಕರಲ್ಲಿ ಗೆಲುವು ಕಂಡರೆ ಐದರಲ್ಲಿ ಸೋತಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.319 ನೆಟ್ರೇಟ್ನೊಂದಿಗೆ ಆರನೇ ಸ್ಥಾನದಲ್ಲಿದೆ.
ಮುಂಬೈ ಇಂಡಿಯನ್ಸ್ ತಂಡದ ಪ್ಲೇ ಆಫ್ ಹಾದಿ ತುಂಬಾನೇ ಕಠಿಣವಾಗಿದೆ. ಒಟ್ಟು 10 ಪಂದ್ಯಗಳನ್ನು ಆಡಿದ್ದು ಸೋಲನ್ನು ಹೆಚ್ಚು ಕಂಡಿದೆ. ಕೇವಲ ನಾಲ್ಕರಲ್ಲಿ ಗೆಲುವು ಸಾಧಿಸಿದ್ದು, 6 ಪಂದ್ಯಗಳಲ್ಲಿ ಸೋತಿದೆ. ಒಟ್ಟು 8 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.551 ನೆಟ್ರೇಟ್ನೊಂದಿಗೆ ಏಳನೇ ಸ್ಥಾನದಲ್ಲಿದೆ.
ಸನ್ರೈಸರ್ಸ್ ಹೈದಬಾದ್ ತಂಡ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆ. ಆಡಿದ ಒಂಬತ್ತು ಪಂದ್ಯಗಳಲ್ಲಿ ಕೇವಲ ಒಂದರಲ್ಲಷ್ಟೆ ಗೆದ್ದಿದೆ. ಎಂಟು ಪಂದ್ಯಗಳಲ್ಲಿ ಸೋಲುಂಡಿದೆ. ಪಾಯಿಂಟ್ ಪಟ್ಟಿಯಲ್ಲಿ -0.637 ನೆಟ್ರೇಟ್ನೊಂದಿಗೆ ಕೊನೇಯ ಎಂಟನೇ ಸ್ಥಾನದಲ್ಲಿದೆ.
Virat Kohli, RCB vs MI: ಪೊಲಾರ್ಡ್, ಹಾರ್ದಿಕ್ ವಿಕೆಟ್ ಕೀಳಲು ಕೊಹ್ಲಿ ಮಾಡಿದ ಮಾಸ್ಟರ್ ಪ್ಲ್ಯಾನ್ ಏನು ಗೊತ್ತಾ?
Virat Kohli: ಹ್ಯಾಟ್ರಿಕ್ ಸೋಲಿನಿಂದ ಪಾರಾಗಿ ರೋಚಕ ಗೆಲುವಿನ ಬಗ್ಗೆ ಇಂಚಿಂಚು ಮಾಹಿತಿ ತೆರೆದಿಟ್ಟ ವಿರಾಟ್ ಕೊಹ್ಲಿ
(Points Table IPL 2021 list after CSK and RCB notch-up respective victories)