Yuvraj Singh: ಯುವರಾಜ್ ಸಿಂಗ್ ಮನೆಯಲ್ಲಿ ಕಳ್ಳತನ; ಮನೆ ಕೆಲಸದವರ ವಿರುದ್ಧ ಎಫ್‌ಐಆರ್..!

Yuvraj Singh: ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ 2011 ರ ಏಕದಿನ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ಮನೆಯಲ್ಲಿ ಭಾರೀ ಅವಘಡವೊಂದು ನಡೆದಿದೆ. ಪಂಚಕುಲದಲ್ಲಿರುವ ಯುವರಾಜ್ ಸಿಂಗ್ ಅವರ ತಾಯಿ ಶಬ್ನಮ್ ಸಿಂಗ್ ಅವರ ಮನೆಯಲ್ಲಿ ಕಳ್ಳತನವಾಗಿದೆ.

Yuvraj Singh: ಯುವರಾಜ್ ಸಿಂಗ್ ಮನೆಯಲ್ಲಿ ಕಳ್ಳತನ; ಮನೆ ಕೆಲಸದವರ ವಿರುದ್ಧ ಎಫ್‌ಐಆರ್..!
ಯುವರಾಜ್ ಸಿಂಗ್
Follow us
ಪೃಥ್ವಿಶಂಕರ
|

Updated on:Feb 16, 2024 | 8:26 PM

ಟೀಂ ಇಂಡಿಯಾದ (Team India) ಮಾಜಿ ಆಟಗಾರ ಹಾಗೂ 2011 ರ ಏಕದಿನ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ (Yuvraj Singh) ಮನೆಯಲ್ಲಿ ಭಾರೀ ಅವಘಡವೊಂದು ನಡೆದಿದೆ. ಪಂಚಕುಲದಲ್ಲಿರುವ ಯುವರಾಜ್ ಸಿಂಗ್ ಅವರ ತಾಯಿ ಶಬ್ನಮ್ ಸಿಂಗ್ (Shabnam Singh) ಅವರ ಮನೆಯಲ್ಲಿ ಕಳ್ಳತನವಾಗಿದೆ. ಆರು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ. ಮನೆಯಲ್ಲಿದ್ದ ಚಿನ್ನಾಭರಣ ಹಾಗೂ 75 ಸಾವಿರ ರೂಪಾಯಿ ಕಳ್ಳತನವಾಗಿದೆ ಎಂದು ಶಬ್ನಮ್ ಸಿಂಗ್ ಎಂಡಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವರದಿಯ ಪ್ರಕಾರ, ಕಳ್ಳರು 2023 ರಲ್ಲಿ ಚಿನ್ನಾಭರಣ ಮತ್ತು ನಗದನ್ನು ದೋಚಿದ್ದಾರೆ ಎಂದು ತಿಳಿದುಬಂದಿದೆ.

ಮನೆ ಕೆಲಸದವರ ಮೇಲೆ ಅನುಮಾನ

ಯುವರಾಜ್ ಸಿಂಗ್ ಅವರ ತಾಯಿ ಶಬ್ನಮ್ ಸಿಂಗ್ ಅವರು ನೆಲೆಸಿರುವ ಮನೆಯಲ್ಲಿ ಇಬ್ಬರು ಸೇವಕರಿದ್ದು, ಇವರೇ ಕಳ್ಳತನ ಮಾಡಿರುವ ಶಂಕೆ ಇದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸೇವಕರನ್ನು ಲಲಿತಾ ದೇವಿ ಮತ್ತು ಶೈಲೇಂದ್ರ ದಾಸ್ ಎಂದು ಗುರುತಿಸಲಾಗಿದೆ. ಪೊಲೀಸರು ಈ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಶಬ್ನಮ್ ಸಿಂಗ್ ಅವರು ಗುರ್ಗಾಂವ್‌ನಲ್ಲಿರುವ ತಮ್ಮ ಇನ್ನೊಂದು ನಿವಾಸದಲ್ಲಿ ಸ್ವಲ್ಪ ದಿನ ವಾಸಿಸಲು ಹೋಗಿದ್ದ ವೇಳೆ ಈ ಕಳ್ಳತನ ನಡೆದಿದೆ ಎಂಬುದು ತಿಳಿದುಬಂದಿದೆ. ಒಟ್ಟು 1 ಲಕ್ಷ 75 ಸಾವಿರ ಮೌಲ್ಯದ ಸ್ವತ್ತು ಕಳ್ಳತನವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಚಿನ್ನಾಭರಣಗಳು ಮತ್ತು ಹಣ ನಾಪತ್ತೆ

ಗುರ್ಗಾಂವ್‌ ನಿವಾಸದಿಂದ ಪಂಚಕುಲದಲ್ಲಿರುವ ಮನೆಗೆ ವಾಪಸ್ಸಾದ ಬಳಿಕ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯ ಮೇಲಿನ ಮಹಡಿಯಲ್ಲಿರುವ ಕೋಣೆಯಲ್ಲಿ ಚಿನ್ನಾಭರಣಗಳು ಮತ್ತು ಹಣ ನಾಪತ್ತೆಯಾಗಿರುವುದು ಶಬ್ನಮ್ ಸಿಂಗ್ ಗಮನಕ್ಕೆ ಬಂದಿದೆ. ಆ ಬಳಿಕ ಮನೆಯಲ್ಲಿದ್ದ ಎಲ್ಲಾ ಕೆಲಸದವರನ್ನು ಶಬ್ನಮ್ ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಯಾರು ಎಂಬುದು ಪತ್ತೆಯಾಗಿಲ್ಲ.

ಸ್ವಲ್ಪ ದಿನದ ನಂತರ ಮನೆಯ ಇಬ್ಬರು ಮನೆಯ ಕೆಲಸದವರಾದ ಲಲಿತಾ ದೇವಿ ಮತ್ತು ಸಲೀಂದರ್ ದಾಸ್ 2023 ರ ದೀಪಾವಳಿ ವೇಳೆ ಯಾರಿಗೂ ಹೇಳದೆ ಮನೆ ಕೆಲಸ ಬಿಟ್ಟು ಓಡಿಹೋಗಿದ್ದಾರೆ. ಅಲ್ಲದೆ ಈ ಇಬ್ಬರೇ ಆಭರಣ ಮತ್ತು ನಗದು ಇರುವ ಬೀರು ಡ್ರಾಯರ್‌ಗಳ ಬೀಗಗಳನ್ನು ತೆಗೆದುಕೊಂಡಿದ್ದಾರೆ ಎಂದು ಶಬ್ನಮ್ ಶಂಕಿಸಿದ್ದಾರೆ. ಕಳ್ಳತನವಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಆರೋಪಿಗಳು ಸದ್ಯ ತಲೆಮರೆಸಿಕೊಂಡಿದ್ದಾರೆ ಎಂದು ಎಂಡಿಸಿ ಪೊಲೀಸ್ ಠಾಣೆ ಎಸ್‌ಎಚ್‌ಒ ಧರಂಪಾಲ್ ಸಿಂಗ್ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:14 pm, Fri, 16 February 24

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್