Duleep Trophy 2024: ಭರ್ಜರಿ ಸೆಂಚುರಿ ಸಿಡಿಸಿದ ಪ್ರಥಮ್ ಸಿಂಗ್

|

Updated on: Sep 14, 2024 | 2:05 PM

Pratham Singh: ದೆಹಲಿ ಮೂಲದ ಪ್ರಥಮ್ ಸಿಂಗ್ ದುಲೀಪ್ ಟ್ರೋಫಿಯಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ. ಈ ಹಿಂದೆ ಐಪಿಎಲ್​ನಲ್ಲಿ ಗುಜರಾತ್ ಲಯನ್ಸ್ ಪರ ಕಣಕ್ಕಿಳಿದಿದ್ದ ಪ್ರಥಮ್ ಇದೀಗ ದೇಶೀಯ ಟೆಸ್ಟ್​ ಟೂರ್ನಿಯಲ್ಲಿ ಮೂರಂಕಿ ಮೊತ್ತ ಕಲೆಹಾಕಿ ಸಂಚಲನ ಸೃಷ್ಟಿಸಿದ್ದಾರೆ.

ಆಂಧ್ರಪ್ರದೇಶದ ಅನಂತಪುರದಲ್ಲಿರುವ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿಯ ಮೂರನೇ ಪಂದ್ಯದಲ್ಲಿ ಯುವ ದಾಂಡಿಗ ಪ್ರಥಮ್ ಸಿಂಗ್ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 290 ರನ್ ಗಳಿಸಿ ಆಲೌಟ್ ಆಯಿತು.

ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಭಾರತ ಡಿ ತಂಡದ ಪರ ದೇವದತ್ ಪಡಿಕ್ಕಲ್ (92) ಅರ್ಧಶತಕ ಬಾರಿಸಿ ಮಿಂಚಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 183 ರನ್​ಗಳಿಸಿ ಭಾರತ ಡಿ ತಂಡವು ಮೊದಲ ಇನಿಂಗ್ಸ್ ಅಂತ್ಯಗೊಳಿಸಿತು.
ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಭಾರತ ಎ ತಂಡಕ್ಕೆ ಪ್ರಥಮ್ ಸಿಂಗ್ ಹಾಗೂ ಮಯಾಂಕ್ ಅಗರ್ವಾಲ್ ಭರ್ಜರಿ ಆರಂಭ ಒದಗಿಸಿದರು.

ಮೊದಲ ವಿಕೆಟ್​ಗೆ 115 ರನ್​ಗಳ ಜೊತೆಯಾಟವಾಡಿದ ಬಳಿಕ ಮಯಾಂಕ್ ಅಗರ್ವಾಲ್ (56) ವಿಕೆಟ್ ಒಪ್ಪಿಸಿದರು. ಇದಾಗ್ಯೂ ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಪ್ರಥಮ್ ಸಿಂಗ್ 149 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 189 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 122 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ವಿಶೇಷ ಎಂದರೆ ಇದು ಪ್ರಥಮ್ ಸಿಂಗ್ ಅವರ ಮೊದಲ ದುಲೀಪ್ ಟ್ರೋಫಿ ಶತಕವಾಗಿದೆ.

ಭಾರತ A (ಪ್ಲೇಯಿಂಗ್ XI): ಪ್ರಥಮ್ ಸಿಂಗ್, ಮಯಾಂಕ್ ಅಗರ್ವಾಲ್ (ನಾಯಕ), ತಿಲಕ್ ವರ್ಮಾ, ರಿಯಾನ್ ಪರಾಗ್, ಶಾಶ್ವತ್ ರಾವತ್, ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್), ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಆಕಿಬ್ ಖಾನ್.

ಭಾರತ D (ಪ್ಲೇಯಿಂಗ್ XI): ಅಥರ್ವ ತೈಡೆ, ಯಶ್ ದುಬೆ, ಶ್ರೇಯಸ್ ಅಯ್ಯರ್ (ನಾಯಕ), ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಸೌರಭ್ ಕುಮಾರ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ವಿಧ್ವತ್ ಕಾವೇರಪ್ಪ, ಆದಿತ್ಯ ಠಾಕರೆ.

 

Follow us on