ಪ್ರಮುಖ ಆಟಗಾರರಿಗೆ ವಿಶ್ರಾಂತಿ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India Playing XI vs AUS 1st ODI: ಆರಂಭಿಕರಾಗಿ ಶುಭ್​ಮನ್ ಗಿಲ್ ಹಾಗೂ ಇಶಾನ್ ಕಿಶನ್ ಕಣಕ್ಕಿಳಿಯುವುದು ಖಚಿತ ಎನ್ನಬಹುದು. ಇನ್ನು ವಿರಾಟ್ ಕೊಹ್ಲಿಯ ಅನುಪಸ್ಥಿತಿಯಲ್ಲಿ ರುತುರಾಜ್ ಗಾಯಕ್ವಾಡ್​ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು. ಹಾಗೆಯೇ ನಾಲ್ಕನೇ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಬ್ಯಾಟ್ ಬೀಸಲಿದ್ದಾರೆ.

ಪ್ರಮುಖ ಆಟಗಾರರಿಗೆ ವಿಶ್ರಾಂತಿ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
Updated By: ಝಾಹಿರ್ ಯೂಸುಫ್

Updated on: Sep 21, 2023 | 9:22 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುಕ್ರವಾರದಿಂದ ಶುರುವಾಗಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ. ಅಂದರೆ ಏಷ್ಯಾಕಪ್​ ಫೈನಲ್​ನಲ್ಲಿ ಕಣಕ್ಕಿಳಿದ ಬಹುತೇಕ ಆಟಗಾರರು ಈ ಪಂದ್ಯದಿಂದ ಹೊರಗುಳಿದಿದ್ದಾರೆ.

ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಸೇರಿದಂತೆ ಕೆಲ ಆಟಗಾರರಿಗೆ ಈ ಸರಣಿಯ ಮೊದಲ ಎರಡು ಪಂದ್ಯಗಳ ವೇಳೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ತಂಡದ ಆಡುವ ಬಳಗದಲ್ಲೂ ಬದಲಾವಣೆ ಕಂಡು ಬರಲಿದೆ.

ಅದರಂತೆ ಆರಂಭಿಕರಾಗಿ ಶುಭ್​ಮನ್ ಗಿಲ್ ಹಾಗೂ ಇಶಾನ್ ಕಿಶನ್ ಕಣಕ್ಕಿಳಿಯುವುದು ಖಚಿತ ಎನ್ನಬಹುದು. ಇನ್ನು ವಿರಾಟ್ ಕೊಹ್ಲಿಯ ಅನುಪಸ್ಥಿತಿಯಲ್ಲಿ ರುತುರಾಜ್ ಗಾಯಕ್ವಾಡ್​ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು. ಹಾಗೆಯೇ ನಾಲ್ಕನೇ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಬ್ಯಾಟ್ ಬೀಸಲಿದ್ದಾರೆ.

ಇನ್ನು ನಾಯಕ ಕೆಎಲ್ ರಾಹುಲ್ 5ನೇ ಕ್ರಮಾಂಕದಲ್ಲೇ ಮುಂದುವರೆಯಲಿದ್ದಾರೆ. 6ನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಬಹುದು. 7ನೇ ಕ್ರಮಾಂಕದಲ್ಲಿ ಎಂದಿನಂತೆ ರವೀಂದ್ರ ಜಡೇಜಾ ಆಡಲಿದ್ದಾರೆ.

ಹಾಗೆಯೇ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿರುವ ರವಿಚಂದ್ರನ್ ಅಶ್ವಿನ್ 8ನೇ ಸ್ಥಾನದಲ್ಲಿ ಕಣಕ್ಕಿಳಿಯಬಹುದು. ಇನ್ನು ವೇಗಿಗಳಾಗಿ ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  1. ಇಶಾನ್ ಕಿಶನ್
  2. ಶುಭ್​ಮನ್ ಗಿಲ್
  3. ರುತುರಾಜ್ ಗಾಯಕ್ವಾಡ್
  4. ಶ್ರೇಯಸ್ ಅಯ್ಯರ್
  5. ಕೆಎಲ್ ರಾಹುಲ್ (ನಾಯಕ)
  6. ಸೂರ್ಯಕುಮಾರ್ ಯಾದವ್
  7. ರವೀಂದ್ರ ಜಡೇಜಾ
  8. ರವಿಚಂದ್ರನ್ ಅಶ್ವಿನ್
  9. ಮೊಹಮ್ಮದ್ ಶಮಿ
  10. ಜಸ್​ಪ್ರೀತ್ ಬುಮ್ರಾ
  11. ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಗೆದ್ದ ಟೀಮ್ ಇಂಡಿಯಾ: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

ಮೊದಲ 2 ಪಂದ್ಯಗಳಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:

  • ಮೊದಲ ಏಕದಿನ ಪಂದ್ಯ (ಮೊಹಾಲಿ – ಸೆಪ್ಟೆಂಬರ್ 22, 2023)
  • ಎರಡನೇ ಏಕದಿನ ಪಂದ್ಯ (ಇಂದೋರ್ – ಸೆಪ್ಟೆಂಬರ್ 24, 2023)
  • ಮೂರನೇ ಏಕದಿನ ಪಂದ್ಯ (ರಾಜ್‌ಕೋಟ್ – ಸೆಪ್ಟೆಂಬರ್ 27, 2023).