IND vs SL: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 3 ಬದಲಾವಣೆ ಸಾಧ್ಯತೆ

|

Updated on: Jul 30, 2024 | 8:03 AM

India vs Sri Lanka: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 43 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಇನ್ನು 2ನೇ ಟಿ20 ಪಂದ್ಯದಲ್ಲಿ 7 ವಿಕೆಟ್​ಗಳ ಗೆಲುವು ದಾಖಲಿಸಿ ಸರಣಿ ವಶಪಡಿಸಿಕೊಂಡಿದೆ. ಇದೀಗ ಮೂರನೇ ಪಂದ್ಯದ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

IND vs SL: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 3 ಬದಲಾವಣೆ ಸಾಧ್ಯತೆ
Team India
Follow us on

ಭಾರತ ಮತ್ತು ಶ್ರೀಲಂಕಾ ನಡುವಣ ಮೂರನೇ ಟಿ20 ಪಂದ್ಯ ಇಂದು (ಜುಲೈ 30) ನಡೆಯಲಿದೆ. ಪಲ್ಲೆಕೆಲೆಯ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಮೂರು ಪಂದ್ಯಗಳ ಸರಣಿಯನ್ನು ಭಾರತ 2-0 ಅಂತರದಿಂದ ಗೆದ್ದುಕೊಂಡಿದ್ದು, ಹೀಗಾಗಿ ಮೊದಲೆರಡು ಪಂದ್ಯಗಳಲ್ಲಿ ಅವಕಾಶ ಸಿಗದ ಆಟಗಾರರಿಗೆ ಇಂದಿನ ಮ್ಯಾಚ್​ನಲ್ಲಿ ಚಾನ್ಸ್ ನೀಡಬಹುದು.

ಅದರಂತೆ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದ್ದು, ಅವರ ಬದಲಿಗೆ ಶಿವಂ ದುಬೆಗೆ ಚಾನ್ಸ್ ನೀಡಬಹುದು. ಹಾಗೆಯೇ ರವಿ ಬಿಷ್ಣೋಯ್ ಸ್ಥಾನದಲ್ಲಿ ಸ್ಪಿನ್ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯಬಹುದು.

ಇನ್ನು ವೇಗಿಗಳ ಪಟ್ಟಿಯಿಂದ ಮೊಹಮ್ಮದ್ ಸಿರಾಜ್​ ಅಥವಾ ಅರ್ಷದೀಪ್ ಸಿಂಗ್ ಬದಲಿಗೆ ಖಲೀಲ್ ಅಹ್ಮದ್ ಕಣಕ್ಕಿಳಿಯಬಹುದು. ಮತ್ತೊಂದೆಡೆ ಸ್ನಾಯು ಸೆಳೆತದ ಕಾರಣ 2ನೇ ಪಂದ್ಯದಿಂದ ಹೊರಗುಳಿದಿದ್ದ ಶುಭ್​ಮನ್ ಗಿಲ್ ಇಂದಿನ ಪಂದ್ಯಕ್ಕೂ ಅಲಭ್ಯರಾದರೆ, ಸಂಜು ಸ್ಯಾಮ್ಸನ್ ಆರಂಭಿಕನಾಗಿ ಕಾಣಿಸಿಕೊಳ್ಳಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

  1. ಯಶಸ್ವಿ ಜೈಸ್ವಾಲ್
  2. ಸಂಜು ಸ್ಯಾಮ್ಸನ್
  3. ರಿಷಭ್ ಪಂತ್ (ವಿಕೆಟ್ ಕೀಪರ್)
  4. ಸೂರ್ಯಕುಮಾರ್ ಯಾದವ್ (ನಾಯಕ)
  5. ಶಿವಂ ದುಬೆ
  6. ರಿಯಾನ್ ಪರಾಗ್
  7. ರಿಂಕು ಸಿಂಗ್
  8. ಅಕ್ಷರ್ ಪಟೇಲ್
  9. ವಾಷಿಂಗ್ಟನ್ ಸುಂದರ್
  10. ಖಲೀಲ್ ಅಹ್ಮದ್
  11. ಮೊಹಮ್ಮದ್ ಸಿರಾಜ್.

ಎಷ್ಟು ಗಂಟೆಗೆ ಪಂದ್ಯ ಶುರು?

ಭಾರತ ಮತ್ತು ಶ್ರೀಲಂಕಾ ನಡುವಣ ಮೂರನೇ ಟಿ20 ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7 ಗಂಟೆಯಿಂದ ಶುರುವಾಗಲಿದೆ. ಹಾಗೆಯೇ ಟಾಸ್ ಪ್ರಕ್ರಿಯೆ 6.30 ಕ್ಕೆ ನಡೆಯಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ ಮತ್ತು ಶ್ರೀಲಂಕಾ ಸರಣಿಯ ಪಂದ್ಯಗಳು ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನ ಚಾನೆಲ್​ಗಳಲ್ಲಿ ನೇರ ಪ್ರಸಾರವಾಗಲಿದೆ. ಹಾಗೆಯೇ ಸೋನಿ ಲೈವ್ ಆ್ಯಪ್​ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ಇದನ್ನೂ ಓದಿ: Suryakumar Yadav: ಸೂರ್ಯಕುಮಾರ್ ಯಾದವ್ ಅಬ್ಬರಕ್ಕೆ ಮ್ಯಾಕ್ಸ್​ವೆಲ್ ವಿಶ್ವ ದಾಖಲೆ ಉಡೀಸ್

ಭಾರತ ತಂಡ: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಖಲೀಲ್ ಅಹ್ಮದ್ , ಶಿವಂ ದುಬೆ.

Published On - 8:03 am, Tue, 30 July 24