AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

T20 World Cup 2026 Final India vs New zealand: ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್​ಗಳಲ್ಲಿ 159 ರನ್​ ಬಾರಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 96 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ
Pm Modi
ಝಾಹಿರ್ ಯೂಸುಫ್
|

Updated on: Mar 09, 2026 | 9:58 AM

Share

T20 World Cup 2026: ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಟೀಮ್ ಇಂಡಿಯಾಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ಮುಖಾಮುಖಿಯಾಗಿತ್ತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ 89 ರನ್ ಬಾರಿಸಿದರೆ, ಅಭಿಷೇಕ್ ಶರ್ಮಾ 52 ರನ್ ಚಚ್ಚಿದ್ದರು. ಇನ್ನು ಇಶಾನ್ ಕಿಶನ್ 54 ರನ್​ಗಳ ಇನಿಂಗ್ಸ್ ಆಡಿದ್ದರು. ಈ ಮೂರು ಅರ್ಧಶತಕಗಳ ನೆರವಿನೊಂದಿಗೆ ಟೀಮ್ ಇಂಡಿಯಾ ಈ ಪಂದ್ಯದಲ್ಲಿ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು.

ಅದರಂತೆ 256 ರನ್​ಗಳ ಗುರಿ ಪಡೆದ ನ್ಯೂಝಿಲೆಂಡ್ ತಂಡವು 72 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಮಾರಕ ದಾಳಿ ಮುಂದುವರೆಸಿದ ಜಸ್​ಪ್ರೀತ್ ಬುಮ್ರಾ 4 ವಿಕೆಟ್ ಉರುಳಿಸಿದರು. ಈ ಮೂಲಕ ಟೀಮ್ ಇಂಡಿಯಾ ಬೌಲರ್​ಗಳು ನ್ಯೂಝಿಲೆಂಡ್ ತಂಡವನ್ನು 19 ಓವರ್​ಗಳಲ್ಲಿ 159 ರನ್​ಗಳಿಗೆ ನಿಯಂತ್ರಿಸಿ ಆಲೌಟ್ ಮಾಡಿದರು. ಈ ಮೂಲಕ ಟೀಮ್ ಇಂಡಿಯಾ 96 ರನ್​ಗಳ ಪ್ರಚಂಡ ಗೆಲುವು ದಾಖಲಿಸಿದೆ.

ಭಾರತ ತಂಡದ ಈ ಅಮೋಘ ಗೆಲುವಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಟೀಮ್ ಇಂಡಿಯಾದ ಪ್ರದರ್ಶನವನ್ನು ಹಾಡಿ ಹೊಗಳಿದಿದ್ದಾರೆ.

ಚಾಂಪಿಯನ್ಸ್! ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು! ಈ ಗಮನಾರ್ಹ ಗೆಲುವು ಅಸಾಧಾರಣ ಕೌಶಲ್ಯ, ದೃಢನಿಶ್ಚಯ ಮತ್ತು ತಂಡದ ಕೆಲಸವನ್ನು ಪ್ರತಿಬಿಂಬಿಸುತ್ತದೆ. ಟೀಮ್ ಇಂಡಿಯಾ ಟೂರ್ನಿಯುದ್ದಕ್ಕೂ ಅತ್ಯುತ್ತಮ ಧೈರ್ಯವನ್ನು ತೋರಿಸಿದ್ದಾರೆ. ಈ ಗೆಲುವು ಪ್ರತಿಯೊಬ್ಬ ಭಾರತೀಯನು ಸಂತಸ ಮತ್ತು ಹೆಮ್ಮೆ ಪಡುವಂತೆ ಮಾಡಿದೆ. ಅಭಿನಂದನೆಗಳು, ಟೀಮ್ ಇಂಡಿಯಾ! ಎಂದು ಪ್ರಧಾನಿ ಮೋದಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಟೀಮ್ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ್ದು,  ಟೂರ್ನಮೆಂಟ್ ಉದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್ ಮತ್ತು ಜಸ್​ಪ್ರೀತ್ ಬುಮ್ರಾ ಅವರನ್ನು ಶ್ಲಾಘಿಸಿದ್ದಾರೆ. ಹಾಗೆಯೇ ಅದ್ಭುತ ಗೆಲುವಿನೊಂದಿಗೆ  ತವರಿನಲ್ಲಿ ಟ್ರೋಫಿಯನ್ನು ಉಳಿಸಿಕೊಂಡು ಮತ್ತೊಮ್ಮೆ ಮರೆಯಲಾಗದ ಕ್ಷಣವನ್ನು ನೀಡಿದ ಟೀಮ್ ಇಂಡಿಯಾಗೆ ಅಭಿನಂದನೆಗಳು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್