‘ದೇವರು ನಿಮ್ಮನ್ನು ನೋಡುತ್ತಿದ್ದಾನೆ, ನೆನಪಿಡಿ’; ಬಿಸಿಸಿಐ ವಿರುದ್ಧ ಸಿಡಿದ ಪೃಥ್ವಿ, ಉಮೇಶ್, ರಾಣಾ, ಬಿಷ್ಣೋಯ್..!

ನ್ಯೂಜಿಲೆಂಡ್ ವಿರುದ್ಧದ ಏಕದಿನ-ಟಿ20 ಸರಣಿ ಮತ್ತು ಬಾಂಗ್ಲಾದೇಶ ವಿರುದ್ಧದ ಟೆಸ್ಟ್-ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ತಂಡದಲ್ಲಿ ಅವಕಾಶ ಸಿಗದ ಕೆಲವು ಆಟಗಾರರು ತಮ್ಮ ನಿರಾಸೆಯನ್ನು ಹೊರಹಾಕಿದ್ದಾರೆ.

‘ದೇವರು ನಿಮ್ಮನ್ನು ನೋಡುತ್ತಿದ್ದಾನೆ, ನೆನಪಿಡಿ’; ಬಿಸಿಸಿಐ ವಿರುದ್ಧ ಸಿಡಿದ ಪೃಥ್ವಿ, ಉಮೇಶ್, ರಾಣಾ, ಬಿಷ್ಣೋಯ್..!
Prithvi Shaw, Ravi Bishnoi and Umesh YadavImage Credit source: hindustan times
Follow us
TV9 Web
| Updated By: ಪೃಥ್ವಿಶಂಕರ

Updated on:Nov 01, 2022 | 12:22 PM

ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ (New Zealand and Bangladesh) ಪ್ರವಾಸಕ್ಕೆ ಟೀಂ ಇಂಡಿಯಾ (Team India) ತನ್ನ ತಂಡವನ್ನು ಪ್ರಕಟಿಸಿದೆ. ಸೋಮವಾರ ರಾತ್ರಿ, ಭಾರತದ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ ಏಕದಿನ ಹಾಗೂ ಟಿ20 ಮತ್ತು ಬಾಂಗ್ಲಾದೇಶ ವಿರುದ್ಧ ಏಕದಿನ ಹಾಗೂ ಟೆಸ್ಟ್ ಸರಣಿಗೆ ತಂಡಗಳನ್ನು ಪ್ರಕಟಿಸಿದರು. ಭಾರತ ನಾಲ್ಕು ತಂಡಗಳನ್ನು ಘೋಷಿಸಿದ್ದು ಅದರಲ್ಲಿ ಕೆಲವು ಯುವ ಆಟಗಾರರಿಗೆ ಅವಕಾಶ ಸಿಕ್ಕಿದೆ. ಹಾಗೆಯೇ ಕೆಲವು ಆಟಗಾರರು ಮತ್ತೆ ತಂಡಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದು, ಇನ್ನೂ ಕೆಲವರು ತಂಡದಲ್ಲಿ ಚೊಚ್ಚಲ ಅವಕಾಶ ಪಡೆದಿದ್ದಾರೆ. ಆದರೆ ದೇಶೀ ಕ್ರಿಕೆಟ್​ನಲ್ಲಿ ಮಿಂಚಿದ್ದರು ಸಹ ತಂಡಕ್ಕೆ ಆಯ್ಕೆಯಾಗದ 4 ಆಟಗಾರರು ತುಂಬಾ ನಿರಾಸೆಗೊಂಡಿದ್ದು ಬಿಸಿಸಿಐ (BCCI) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಈ ಸರಣಿಗಳಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯದ ಪ್ರಮುಖ ಹೆಸರುಗಳಲ್ಲಿ ಪೃಥ್ವಿ ಶಾ, ರವಿ ಬಿಷ್ಣೋಯ್, ಉಮೇಶ್ ಯಾದವ್ ಮತ್ತು ನಿತೀಶ್ ರಾಣಾ ಸೇರಿದ್ದಾರೆ. ತಂಡಕ್ಕೆ ಆಯ್ಕೆಯಾಗದ ಬೇಸರವನ್ನು ವ್ಯಕ್ತಪಡಿಸಿರುವ ಈ ಆಟಗಾರರು ನೇರವಾಗಿ ಬಿಸಿಸಿಐ ವಿರುದ್ಧ ಏನನ್ನೂ ಹೇಳದೆ, ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಉಮೇಶ್ ಯಾದವ್ ಇನ್‌ಸ್ಟಾಗ್ರಾಮ್ ಪೋಸ್ಟ್‌

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿರುವ ಉಮೇಶ್ ಯಾದವ್, ಉಳಿದ ಸರಣಿಗಳಿಗೆ ತಂಡದಲ್ಲಿ ಅವಕಾಶ ಸಿಗದಿದ್ದಕ್ಕೆ ಅಸಮಾದಾನಗೊಂಡಿದ್ದು, ಬಿಸಿಸಿಐ ವಿರುದ್ಧ ಕಿಡಿಕಾರಿದ್ದಾರೆ. ತಮ್ಮ ಅಸಮಾದಾನವನ್ನು ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೊರಹಾಕಿರುವ ಉಮೇಶ್, ‘ನೀವು ನನ್ನನ್ನು ಮೂರ್ಖರಾಗಿಸಬಹುದು ಆದರೆ ದೇವರು ನಿಮ್ಮನ್ನು ನೋಡುತ್ತಿದ್ದಾನೆ, ನೆನಪಿಡಿ’ ಎಂದು ಬರೆದುಕೊಂಡಿದ್ದಾರೆ.

ಹಿಂದಿರುಗುವ ಭರವಸೆ ವ್ಯಕ್ತಪಡಿಸಿದ ಬಿಷ್ಣೋಯ್

ಟಿ20, ಏಕದಿನ ಹಾಗೂ ಟೆಸ್ಟ್‌ನ ಮೂರೂ ತಂಡಗಳಲ್ಲೂ ರವಿ ಬಿಷ್ಣೋಯ್​ಗೆ ಅವಕಾಶ ಸಿಕ್ಕಿಲ್ಲ. ಇದರಿಂದ ಬೇಸರಗೊಂಡಿರುವ ಬಿಷ್ಣೋಯ್ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, ‘ಕಮ್ ಬ್ಯಾಕ್ ಆಲ್ವೇಸ್ ಸ್ಟ್ರಾಂಗ್’ ಎಂದು ಬರೆದುಕೊಂಡಿದ್ದಾರೆ. ಈ ಎರಡು ದೇಶಗಳ ಸರಣಿಗೆ ಆಯ್ಕೆಯಾಗದ ಬಿಷ್ಣೋಯ್, ಟಿ20 ವಿಶ್ವಕಪ್‌ನ ಸ್ಟ್ಯಾಂಡ್‌ಬೈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: 13 ಬೌಂಡರಿ, 13 ಸಿಕ್ಸರ್‌, 57 ಎಸೆತಗಳಲ್ಲಿ 162 ರನ್‌..! ಟಿ20 ಕ್ರಿಕೆಟ್​ನಲ್ಲಿ ಬಿರುಗಾಳಿ ಎಬ್ಬಿಸಿದ ‘ಬೇಬಿ ಎಬಿ’

ಅಳಲು ತೋಡಿಕೊಂಡ ನಿತೀಶ್ ರಾಣಾ

ನಿತೀಶ್ ರಾಣಾ ಕೂಡ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿಲ್ಲ. ಈ ಎಡಗೈ ಬ್ಯಾಟ್ಸ್‌ಮನ್ ಕೂಡ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ನೋವನ್ನು ವ್ಯಕ್ತಪಡಿಸಿದ್ದು, ಭರವಸೆ. ಸ್ವಲ್ಪ ಕಾಯಿರಿ, ನೋವು ಕೊನೆಗೊಳ್ಳುತ್ತದೆ ಎಂಬರ್ಥದ ಸ್ಟೋರಿ ಹಾಕಿದ್ದಾರೆ.

ಸಾಯಿ ಮೊರೆ ಹೋದ ಪೃಥ್ವಿ ಶಾ

ಪೃಥ್ವಿ ಶಾಗೂ ಟೀಂ ಇಂಡಿಯಾದಲ್ಲಿ ಅವಕಾಶ ಸಿಗಲಿಲ್ಲ. ಸೈಯದ್ ಮುಷ್ತಾಕ್ ಅಲಿಯಲ್ಲಿ ಶತಕ ಬಾರಿಸಿದರೂ ಈ ಆಟಗಾರನಿಗೆ ತಂಡಕ್ಕೆ ಮರಳಲು ಸಾಧ್ಯವಾಗಿಲ್ಲ. ಇದರಿಂದ ಬೇಸರಗೊಂಡಿರುವ ಶಾ, ದೇವರ ಮೊರೆಹೋಗಿದ್ದು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, ‘ಸಾಯಿಬಾಬಾ, ನೀವು ಎಲ್ಲವನ್ನೂ ನೋಡುತ್ತಿದ್ದೀರಿ ಎಂದು ಭಾವಿಸುತ್ತೇವೆ’ ಎಂದು ಬರೆದುಕೊಂಡಿದ್ದಾರೆ.

ನ್ಯೂಜಿಲೆಂಡ್ ಟಿ20 ಸರಣಿಗೆ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಭ್ ಪಂತ್ (ಉಪನಾಯಕ), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಮತ್ತು ಉಮ್ರಾನ್ ಮಲಿಕ್

ನ್ಯೂಜಿಲೆಂಡ್ ಏಕದಿನ ಸರಣಿಗೆ ತಂಡ: ಶಿಖರ್ ಧವನ್ (ನಾಯಕ), ರಿಷಭ್ ಪಂತ್ (ಉಪನಾಯಕ), ಶುಭಮನ್ ಗಿಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಶಹಬಾಜ್ ಅಹ್ಮದ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ದೀಪಕ್ ಚಾಹರ್, ಕುಲದೀಪ್ ಸೇನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ ಮತ್ತು ಉಮ್ರಾನ್ ಮಲಿಕ್.

ಬಾಂಗ್ಲಾದೇಶ ಏಕದಿನ ಸರಣಿಗೆ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಯಶ್ ದಯಾಳ್, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್.

ಬಾಂಗ್ಲಾದೇಶ ಟೆಸ್ಟ್ ಸರಣಿಗೆ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಕೆ.ಎಸ್ ಭರತ್, ಆರ್. ಅಶ್ವಿನ್, ರವೀಂದ್ರ ಜಡೇಜಾ ಮತ್ತು ಉಮೇಶ್ ಯಾದವ್.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:17 pm, Tue, 1 November 22

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ