AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prithvi Shaw: 39 ಎಸೆತಗಳಲ್ಲಿ 65 ರನ್! ಮೊದಲ ಕೌಂಟಿ ಪಂದ್ಯದಲ್ಲೇ ಅಬ್ಬರಿಸಿದ ಪೃಥ್ವಿ ಶಾ

Prithvi Shaw: ಪೃಥ್ವಿ ಶಾ 39 ಎಸೆತಗಳಲ್ಲಿ 65 ರನ್‌ಗಳ ಇನಿಂಗ್ಸ್‌ ಆಡಿದರು. ಅವರ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳು ಸೇರಿದ್ದವು.

Prithvi Shaw: 39 ಎಸೆತಗಳಲ್ಲಿ 65 ರನ್! ಮೊದಲ ಕೌಂಟಿ ಪಂದ್ಯದಲ್ಲೇ ಅಬ್ಬರಿಸಿದ ಪೃಥ್ವಿ ಶಾ
ಪೃಥ್ವಿ ಶಾ
ಪೃಥ್ವಿಶಂಕರ
|

Updated on: Aug 02, 2023 | 8:00 AM

Share

ಒಂದು ಕಾಲದಲ್ಲಿ ಟೀಂ ಇಂಡಿಯಾದ (Team India) ಭವಿಷ್ಯದ ಸೂಪರ್ ಸ್ಟಾರ್ ಎನಿಸಿಕೊಂಡಿದ್ದ ಡೆಲ್ಲಿ ಡ್ಯಾಶರ್ ಪೃಥ್ವಿ ಶಾಗೆ (Prithvi Shaw) ಇತ್ತೀಚಿನ ದಿನಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ . 2018ರಲ್ಲಿ ಭಾರತಕ್ಕೆ ಅಂಡರ್-19 ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದ ಪೃಥ್ವಿಗೆ ಅದೇ ವರ್ಷದಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿತ್ತು. ಇದೇ ವೆಸ್ಟ್ ಇಂಡೀಸ್ ವಿರುದ್ಧವೇ ತಾನು ಆಡಿದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಶಾ, ಟೀಂ ಇಂಡಿಯಾಕ್ಕೆ ಉತ್ತಮ ಆರಂಭಿಕನಾಗುವ ಸೂಚನೆ ನೀಡಿದ್ದರು. ಆದರೆ ನಂತರ ಪೃಥ್ವಿ ಅವರ ವೃತ್ತಿಜೀವನದ ಗ್ರಾಫ್ ಮೇಲೇರುವ ಬದಲು, ಹಂತಹಂತವಾಗಿ ಕುಸಿಯಲಾರಂಭಿಸಿತು. ಹೀಗಾಗಿ ಪೃಥ್ವಿಗೆ ಟೀಂ ಇಂಡಿಯಾದ ಕದ ಮುಚ್ಚಲಾರಂಭಿಸಿತು. ಇತ್ತ ಐಪಿಎಲ್​ನಲ್ಲಿ ಪೃಥ್ವಿ ಬ್ಯಾಟ್ ಸದ್ದು ಮಾಡಲಿಲ್ಲ. ಹೀಗಾಗಿ ಮತ್ತೆ ಟೀಂ ಇಂಡಿಯಾಕ್ಕೆ ಮರಳಲು ನಾನಾ ಕಸರತ್ತು ಮಾಡುತ್ತಿರುವ ಪೃಥ್ವಿ, ಕೌಂಟಿ ಕ್ರಿಕೆಟ್​ನತ್ತ (County stint) ಮುಖ ಮಾಡಿದ್ದು, ಅಲ್ಲಿ ಅದ್ಭುತ ಇನ್ನಿಂಗ್ಸ್ ಆಡಿದ್ದಾರೆ.

ದೇಶಿ ಕ್ರಿಕೆಟ್​ನಲ್ಲೂ ನಿರೀಕ್ಷಿತ ಪ್ರದರ್ಶನ ನೀಡಿದ ಪೃಥ್ವಿ ಶಾ ಇದೀಗ ಇಂಗ್ಲೆಂಡ್‌ನ ಕೌಂಟಿ ತಂಡವಾದ ನಾರ್ಥಾಂಪ್ಟನ್‌ಶೈರ್‌ ಪರ ಏಕದಿನ ಕಪ್‌ನಲ್ಲಿ ಆಡುತ್ತಿದ್ದಾರೆ. ತಾನು ಆಡಿದ ಮೊದಲ ಪಂದ್ಯದಲ್ಲೇ ಅಬ್ಬರಿಸಿದ ಪೃಥ್ವಿ, ಸ್ಫೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.

Duleep Trophy: ‘ಪೂಜಾರ ಸರ್ ನನ್ನಂತೆ ಬ್ಯಾಟ್ ಮಾಡಲು ಸಾಧ್ಯವಿಲ್ಲ’! ಸ್ಫೋಟಕ ಹೇಳಿಕೆ ನೀಡಿದ ಪೃಥ್ವಿ ಶಾ

39 ಎಸೆತಗಳಲ್ಲಿ 65 ರನ್‌

ಗ್ಲೌಸೆಸ್ಟರ್‌ಶೈರ್ ತಂಡದ ವಿರುದ್ಧ ನಡೆಯಲ್ಲಿರುವ ಏಕದಿನ ಪಂದ್ಯಕ್ಕೂ ಮುನ್ನ ನಡೆದ ಇಂಟ್ರಾ ಸ್ಕ್ವಾಡ್ ಪಂದ್ಯದಲ್ಲಿ ಇನಿಂಗ್ಸ್ ಆರಂಭಿಸಿದ ಶಾ ತಮ್ಮ ಬಿರುಸಿನ ಬ್ಯಾಟಿಂಗ್ ಮೂಲಕ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು. ಈ ಪಂದ್ಯದಲ್ಲಿ ಶಾ 39 ಎಸೆತಗಳಲ್ಲಿ 65 ರನ್‌ಗಳ ಇನಿಂಗ್ಸ್‌ ಆಡಿದರು. ಅವರ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳು ಸೇರಿದ್ದವು. ಹಸನ್ ಆಜಾದ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ ಪೃಥ್ವಿ ಮೊದಲ ವಿಕೆಟ್‌ಗೆ 99 ರನ್ ಜೊತೆಯಾಟವನ್ನು ಹಂಚಿಕೊಂಡರು.

ಈ ಪಂದ್ಯದಲ್ಲಿ ಮತ್ತೊಬ್ಬ ಆರಂಭಿಕನಾಗಿ ಕಣಕ್ಕಿಳಿದಿದ್ದ ಆಜಾದ್, 130 ಎಸೆತಗಳಲ್ಲಿ 12 ಬೌಂಡರಿಗಳ ನೆರವಿನಿಂದ 113 ರನ್ ಸಿಡಿಸಿದರು. ಆದರೆ, ಇವರಿಬ್ಬರನ್ನು ಬಿಟ್ಟರೆ ತಂಡದ ಬೇರಾವ ಬ್ಯಾಟ್ಸ್‌ಮನ್‌ಗಳು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ನಾರ್ಥಾಂಪ್ಟನ್ ಶೈರ್ ತಂಡ 305 ರನ್ ಕಲೆಹಾಕಿತು.

ನ್ಯೂಜಿಲೆಂಡ್ ಸರಣಿಯಲ್ಲಿ ಅವಕಾಶ ಸಿಗಲಿಲ್ಲ

ಭಾರತ ಈ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಿತ್ತು. ಇದರಲ್ಲಿ ಪೃಥ್ವಿ ಶಾ ಕೂಡ ತಂಡದಲ್ಲಿ ಆಯ್ಕೆಯಾಗಿದ್ದರು. ಆದರೆ ಅವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಈ ವರ್ಷ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭಾಗವಹಿಸುತ್ತಿದೆ. ಇದಕ್ಕಾಗಿ ತಂಡವನ್ನು ಪ್ರಕಟಿಸಲಾಗಿದೆ. ಆದರೆ ಅನೇಕ ಅನುಭವಿಗಳ ಅನುಪಸ್ಥಿತಿಯಲ್ಲೂ ಶಾ, ಆ ತಂಡದಲ್ಲಿಯೂ ಸ್ಥಾನ ಪಡೆದಿಲ್ಲ. ಅಲ್ಲದೆ ಆರಂಭಿಕ ಸ್ಥಾನಕ್ಕೆ ಹಲವು ಆಟಗಾರರು ಪೈಪೋಟಿ ನಡೆಸುತ್ತಿರುವುದರಿಂದ ಪೃಥ್ವಿಗೆ ಟೀಂ ಇಂಡಿಯಾ ಕದ ತೆರೆಯುವುದು ಕೊಂಚ ಅನುಮಾನವಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!