AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶೀಯ ಟೂರ್ನಿಗಳಲ್ಲಿ ಪೃಥ್ವಿ ಶಾ ಕಣಕ್ಕಿಳಿಯುವುದು ಡೌಟ್

Prithvi Shaw: ಈ ಬಾರಿಯ ಕೌಂಟಿ ಕ್ರಿಕೆಟ್​ನಲ್ಲಿ ನಾರ್ಥಾಂಪ್ಟನ್‌ಶೈರ್ ಪರ ಕಣಕ್ಕಿಳಿದಿದ್ದ ಪೃಥ್ವಿ ಶಾ ಡರ್ಹಾಮ್ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದರು. ಮೊಣಕಾಲಿಗೆ ಉಂಟಾಗಿದ್ದ ಗಾಯದ ಪರಿಣಾಮ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು.

ದೇಶೀಯ ಟೂರ್ನಿಗಳಲ್ಲಿ ಪೃಥ್ವಿ ಶಾ ಕಣಕ್ಕಿಳಿಯುವುದು ಡೌಟ್
Prithvi Shaw
TV9 Web
| Edited By: |

Updated on: Aug 17, 2023 | 8:39 PM

Share

ಇಂಗ್ಲೆಂಡ್​ನಲ್ಲಿ ನಡೆದ ಒನ್​ ಡೇ ಕಪ್ ಟೂರ್ನಿಯಲ್ಲಿ ಗಾಯಗೊಂಡಿದ್ದ ಪೃಥ್ವಿ ಶಾ (Prithvi Shaw) ಮುಂದಿನ ಮೂರು ತಿಂಗಳು ಮೈದಾನದಿಂದ ಹೊರಗುಳಿಯುವ ಸಾಧ್ಯತೆಯಿದೆ. ಈ 3 ತಿಂಗಳ ನಡುವೆ ದೇಶೀಯ ಟೂರ್ನಿಗಳು ನಡೆಯಲಿದ್ದು, ಈ ವೇಳೆ ಅವರು ಕಣಕ್ಕಿಳಿಯುವುದು ಅನುಮಾನ ಎಂದು ತಿಳಿದು ಬಂದಿದೆ.

ಈ ಬಾರಿಯ ಕೌಂಟಿ ಕ್ರಿಕೆಟ್​ನಲ್ಲಿ ನಾರ್ಥಾಂಪ್ಟನ್‌ಶೈರ್ ಪರ ಕಣಕ್ಕಿಳಿದಿದ್ದ ಪೃಥ್ವಿ ಶಾ ಡರ್ಹಾಮ್ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದರು. ಮೊಣಕಾಲಿಗೆ ಉಂಟಾಗಿದ್ದ ಗಾಯದ ಪರಿಣಾಮ ಅವರು ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದೀಗ ವೈದ್ಯಕೀಯ ವರದಿಯಲ್ಲಿ ಅವರ ಗಾಯವು ಗಂಭೀರ ಎಂದು ತಿಳಿದು ಬಂದಿದೆ. ಅಲ್ಲದೆ ವೈದ್ಯರು ಹೆಚ್ಚಿನ ವಿಶ್ರಾಂತಿಯನ್ನು ಸೂಚಿಸಿದ್ದಾರೆ.

ಪ್ರಸ್ತುತ ಮಾಹಿತಿ ಪ್ರಕಾರ, ಪೃಥ್ವಿ ಶಾ ಕನಿಷ್ಠ ಮೂರು ತಿಂಗಳ ಕಾಲ ಮೈದಾನದಿಂದ ಹೊರಗುಳಿಯುವುದು ಖಚಿತ. ಇದರಿಂದ ಮುಂಬರುವ ಸೈಯದ್ ಮುಷ್ತಾಕ್ ಅಲಿ ಟೂರ್ನಿಗೆ ಅವರು ಅಲಭ್ಯರಾಗಲಿದ್ದಾರೆ. ಹಾಗೆಯೇ ವಿಜಯ್ ಹಜಾರೆ ಟ್ರೋಫಿಯಲ್ಲೂ ಕಣಕ್ಕಿಳಿಯುವುದು ಅನುಮಾನ.

ಮುಂಬೈ ಕ್ರಿಕೆಟ್ ಅಸೋಸಿಯೇಷನ್ ​​(ಎಂಸಿಎ) ಅಧಿಕಾರಿಗಳ ಮಾಹಿತಿ ಪ್ರಕಾರ, ಯುವ ಬ್ಯಾಟರ್ ಸೈಯದ್ ಮುಷ್ತಾಕ್ ಅಲಿ (ಅಕ್ಟೋಬರ್ 16 ರಿಂದ ನವೆಂಬರ್ 23) ಮತ್ತು ವಿಜಯ್ ಹಜಾರೆ (ನವೆಂಬರ್ 23- ಡಿಸೆಂಬರ್) ಟೂರ್ನಿಗಳಲ್ಲಿ ಭಾಗವಹಿಸುವ ಸಾಧ್ಯತೆಯಿಲ್ಲ.

ಇನ್ನು ಡಿಸೆಂಬರ್ ಅಂತ್ಯದ ವೇಳೆಗೆ ಅವರು ಸಂಪೂರ್ಣವಾಗಿ ಚೇತರಿಸಿಕೊಂಡರೆ ಜನವರಿ 5 ರಿಂದ ಶುರುವಾಗಲಿರುವ ರಣಜಿ ಟ್ರೋಫಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಎಂಸಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದರೊಂದಿಗೆ ಮುಂದಿನ ಮೂರು ತಿಂಗಳು ಪೃಥ್ವಿ ಶಾ ಮೈದಾನದಿಂದ ಹೊರಗುಳಿಯುವುದು ಕೂಡ ಬಹುತೇಕ ಖಚಿತವಾದಂತಾಗಿದೆ. ಒಟ್ಟಿನಲ್ಲಿ ಭರ್ಜರಿ ಫಾರ್ಮ್​ನಲ್ಲಿದ್ದ ಯುವ ಆಟಗಾರನಿಗೆ ಇದೀಗ ಗಾಯವು ಶಾಪವಾಗಿ ಪರಿಣಮಿಸಿರುವುದು ಮಾತ್ರ ವಿಪರ್ಯಾಸ.

ಇದನ್ನೂ ಓದಿ: ಜಸ್​ಪ್ರೀತ್ ಬುಮ್ರಾ ಟಿ20 ತಂಡದ 11ನೇ ನಾಯಕ: ಉಳಿದ 10 ಕ್ಯಾಪ್ಟನ್​ಗಳ ಪಟ್ಟಿ ಇಲ್ಲಿದೆ

ಏಕೆಂದರೆ ಕಳಪೆ ಫಾರ್ಮ್​ನಲ್ಲಿದ್ದ ಪೃಥ್ವಿ ಶಾ ಕೌಂಟಿ ಕ್ರಿಕೆಟ್​ನತ್ತ ಮುಖ ಮಾಡಿದ್ದರು. ಅಲ್ಲದೆ ಓನ್​ ಡೇ ಕಪ್ ಟೂರ್ನಿಯಲ್ಲಿ ನಾರ್ಥಾಂಪ್ಟನ್‌ಶೈರ್ ತಂಡ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅತ್ಯುತ್ತಮ ಹೊಡೆತಗಳ ಮೂಲಕ ಫಾರ್ಮ್​ ಕಂಡುಕೊಂಡಿದ್ದ ಪೃಥ್ವಿ 4 ಪಂದ್ಯಗಳಲ್ಲಿ 1 ದ್ವಿಶತಕ ಹಾಗೂ 1 ಶತಕದೊಂದಿಗೆ ಒಟ್ಟು 429 ರನ್​ ಚಚ್ಚಿದ್ದರು. ಆದರೆ ಫಾರ್ಮ್​ಗೆ ಮರಳಿದ ಬೆನ್ನಲ್ಲೇ ಇದೀಗ ಗಾಯಗೊಂಡು ಮೂರು ತಿಂಗಳುಗಳ ಕಾಲ ಮೈದಾನದಿಂದ ಹೊರಗುಳಿಯಬೇಕಾಗಿ ಬಂದಿದೆ.

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು