AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

36 ಎಸೆತಗಳಲ್ಲಿ ಶತಕ, 181 ರನ್‌ಗಳ ಸುನಾಮಿ; ದಾಖಲೆಗಳ ಮೇಲೆ ಪ್ರಿಯಾಂಶ್ ದಾಳಿ

ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ದೆಹಲಿಯ ಪ್ರಿಯಾಂಶ್ ಆರ್ಯ ತಮಿಳುನಾಡು ವಿರುದ್ಧ ಕೇವಲ 36 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 181 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಮೂಲಕ ತಮ್ಮದೇ ಹಿಂದಿನ ದಾಖಲೆ ಮುರಿದು, ಅತಿ ಹೆಚ್ಚು ವೈಯಕ್ತಿಕ ರನ್ ಗಳಿಸಿದ ಭಾರತೀಯ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಪ್ರಿಯಾಂಶ್ ಅಬ್ಬರದಿಂದ ದೆಹಲಿ 275 ರನ್ ಗಳಿಸಿ, ಭರ್ಜರಿ ಜಯ ಸಾಧಿಸಿದೆ.

36 ಎಸೆತಗಳಲ್ಲಿ ಶತಕ, 181 ರನ್‌ಗಳ ಸುನಾಮಿ; ದಾಖಲೆಗಳ ಮೇಲೆ ಪ್ರಿಯಾಂಶ್ ದಾಳಿ
Priyansh Arya
ಪೃಥ್ವಿಶಂಕರ
|

Updated on:Nov 24, 2026 | 3:02 PM

Share

ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ದೆಹಲಿಯ ಯುವ ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ ಅಬ್ಬರಿಸಿದ್ದಾರೆ. ನವೆಂಬರ್ 24ರಂದು ತಮಿಳುನಾಡು ವಿರುದ್ಧ ನಡೆದ ಪಂದ್ಯದಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಎದುರಾಳಿ ಬೌಲರ್‌ಗಳನ್ನು ಬೆಚ್ಚಿಬೀಳಿಸಿದ್ದಾರೆ. ಕೇವಲ 36 ಎಸೆತಗಳಲ್ಲಿ ಶತಕ ಸಿಡಿಸಿದ ಪ್ರಿಯಾಂಶ್, ಟಿ20 ಕ್ರಿಕೆಟ್‌ನಲ್ಲಿ ತಮ್ಮ ಮೂರನೇ ಶತಕ ದಾಖಲಿಸಿದ್ದಾರೆ. ಅಷ್ಟೇ ಅಲ್ಲ, ಇದು ಅವರ ಟಿ20 ವೃತ್ತಿಜೀವನದ ಅತಿ ವೇಗದ ಶತಕವೂ ಆಗಿದೆ. ಈ ಮೂಲಕ ತಮ್ಮ ಹಿಂದಿನ ದಾಖಲೆಯನ್ನೇ ಮುರಿದು ಹೊಸ ದಾಖಲೆ ಬರೆದಿದ್ದಾರೆ.

39 ಎಸೆತಗಳ ದಾಖಲೆ ಮುರಿದ ಪ್ರಿಯಾಂಶ್

ಪ್ರಿಯಾಂಶ್ ಆರ್ಯ ಅವರ ಹಿಂದಿನ ಅತಿ ವೇಗದ ಟಿ20 ಶತಕ 39 ಎಸೆತಗಳಲ್ಲಿ ಬಂದಿತ್ತು. ಐಪಿಎಲ್ 2025ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅವರು ಈ ಸಾಧನೆ ಮಾಡಿದ್ದರು. ಆದರೆ ತಮಿಳುನಾಡು ವಿರುದ್ಧದ ಪಂದ್ಯದಲ್ಲಿ ಕೇವಲ 36 ಎಸೆತಗಳಲ್ಲೇ ಶತಕ ಪೂರೈಸಿ ತಮ್ಮದೇ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಈ ಶತಕದ ಹಾದಿಯಲ್ಲಿ ನಾಲ್ಕು ಬೌಂಡರಿ ಹಾಗೂ 12 ಸಿಕ್ಸರ್‌ಗಳನ್ನು ಸಿಡಿಸಿದ್ದರು. ಶತಕದ ಬಳಿಕವೂ ಅವರ ಬ್ಯಾಟಿಂಗ್ ಅಬ್ಬರ ಕಡಿಮೆಯಾಗಲಿಲ್ಲ. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದ ಪ್ರಿಯಾಂಶ್, ಬೌಲರ್‌ಗಳ ಪಾಲಿಗೆ ಸಿಂಹಸ್ವಪ್ನವಾದರು.

ಟಿ20ಯಲ್ಲಿ 2ನೇ ಗರಿಷ್ಠ ವೈಯಕ್ತಿಕ ಸ್ಕೋರ್

ತಮಿಳುನಾಡು ವಿರುದ್ಧ ಪ್ರಿಯಾಂಶ್ ಆರ್ಯ ಸಿಡಿಸಿದ 181 ರನ್‌ಗಳ ಇನ್ನಿಂಗ್ಸ್ ಮತ್ತೊಂದು ದೊಡ್ಡ ದಾಖಲೆಗೆ ಸಾಕ್ಷಿಯಾಯಿತು. ಕೇವಲ 68 ಎಸೆತಗಳಲ್ಲಿ 266ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಅವರು, 19 ಸಿಕ್ಸರ್ ಹಾಗೂ 7 ಬೌಂಡರಿಗಳನ್ನು ಸಿಡಿಸಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವೈಯಕ್ತಿಕ ರನ್ ಗಳಿಸಿದ ಭಾರತೀಯ ಆಟಗಾರ ಎನಿಸಿಕೊಂಡರು. ವಿಶ್ವಮಟ್ಟದಲ್ಲಿ ಎರಡನೇ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ದಾಖಲಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

6 ಇನ್ನಿಂಗ್ಸ್‌ಗಳಲ್ಲಿ 3 ಅರ್ಧಶತಕ, ಒಂದು ಶತಕ

2026ರ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಪ್ರಿಯಾಂಶ್ ಆರ್ಯ ಅಮೋಘ ಫಾರ್ಮ್‌ನಲ್ಲಿದ್ದಾರೆ. ಆಡಿರುವ ಆರು ಇನ್ನಿಂಗ್ಸ್‌ಗಳಲ್ಲಿ ಮೂರು ಅರ್ಧಶತಕ ಹಾಗೂ ಒಂದು ಶತಕ ಸಿಡಿಸಿದ್ದಾರೆ. ಸತತವಾಗಿ ರನ್ ಮಳೆ ಸುರಿಸುತ್ತಿರುವ ಅವರು ಟೂರ್ನಿಯ ಪ್ರಮುಖ ರನ್ ಗಳಿಕೆದಾರರ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ.

ರೋಚಕ ಫೈನಲ್‌ನಲ್ಲಿ ಕರ್ನಾಟಕದ ತಾಕತ್ತು ಪ್ರದರ್ಶನ; ಒಲಿದ ಚೊಚ್ಚಲ ಟಿ20 ಪ್ರಶಸ್ತಿ

ಪ್ರಿಯಾಂಶ್ ಅಬ್ಬರ, ದೆಹಲಿಗೆ ಜಯ

ಪ್ರಿಯಾಂಶ್ ಆರ್ಯ ಅವರ ದಾಖಲೆಯ ಇನ್ನಿಂಗ್ಸ್ ನೆರವಿನಿಂದ ದೆಹಲಿ ತಂಡ ಟಿ20 ಕ್ರಿಕೆಟ್‌ನಲ್ಲಿ ತನ್ನ ಗರಿಷ್ಠ ಮೊತ್ತ ದಾಖಲಿಸಿತು. ತಮಿಳುನಾಡು ವಿರುದ್ಧದ ಪಂದ್ಯದಲ್ಲಿ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 275 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಈ ಗುರಿ ಬೆನ್ನಟ್ಟಿದ ತಮಿಳುನಾಡು ತಂಡ 159 ರನ್​ಗಳಿಗೆ ಆಲೌಟ್ ಆಗುವ ಮೂಲಕ 116 ರನ್​​ಗಳಿಂದ ಸೋಲೊಪ್ಪಿಕೊಂಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Tue, 24 November 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ