AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs AUS A: ಚೊಚ್ಚಲ ಪಂದ್ಯದಲ್ಲೇ ಸಿಡಿಲಬ್ಬರದ ಶತಕ ಸಿಡಿಸಿದ ಪ್ರಿಯಾಂಶ್ ಆರ್ಯ

Priyansh Arya's Debut Century: ಆಸ್ಟ್ರೇಲಿಯಾ ಎ ವಿರುದ್ಧದ ಅನಧಿಕೃತ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಎ ತಂಡದ ಪ್ರಿಯಾಂಶ್ ಆರ್ಯ ತಮ್ಮ ಚೊಚ್ಚಲ ಪಂದ್ಯದಲ್ಲೇ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 84 ಎಸೆತಗಳಲ್ಲಿ 101 ರನ್ ಗಳಿಸಿದ ಪ್ರಿಯಾಂಶ್, ಪ್ರಭ್ಸಿಮ್ರಾನ್ ಸಿಂಗ್ ಜೊತೆ 135 ರನ್‌ಗಳ ಜೊತೆಯಾಟ ನಡೆಸಿದರು. ಯುವರಾಜ್ ಸಿಂಗ್ ಮಾರ್ಗದರ್ಶನದಲ್ಲಿ ಪಳಗಿದ ಈ ಯುವ ಆಟಗಾರ ಭಾರತ ತಂಡಕ್ಕೆ ಸೇರುವ ನಿರೀಕ್ಷೆ ಹೆಚ್ಚಿಸಿದ್ದಾರೆ.

IND A vs AUS A: ಚೊಚ್ಚಲ ಪಂದ್ಯದಲ್ಲೇ ಸಿಡಿಲಬ್ಬರದ ಶತಕ ಸಿಡಿಸಿದ ಪ್ರಿಯಾಂಶ್ ಆರ್ಯ
Priyansh Arya
ಪೃಥ್ವಿಶಂಕರ
|

Updated on:Oct 01, 2025 | 5:25 PM

Share

ಆಸ್ಟ್ರೇಲಿಯಾ ಎ ವಿರುದ್ಧದ ನಡೆದಿದ್ದ 2 ಪಂದ್ಯಗಳ ಅನಧಿಕೃತ ಟೆಸ್ಟ್ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದ್ದ ಭಾರತ ಎ ತಂಡ (India A vs Australia A) ಇದೀಗ ಅನಧಿಕೃತ ಏಕದಿನ ಸರಣಿಯನ್ನು ಆಡುತ್ತಿದೆ. ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತ ಎ ಪರ ಆರಂಭಿಕರಾಗಿ ಕಣಕ್ಕಿಳಿದಿರುವ ಪ್ರಿಯಾಂಶ್ ಆರ್ಯ (Priyansh Arya) ತಮ್ಮ ಚೊಚ್ಚಲ ಪಂದ್ಯದಲ್ಲೇ ಅದ್ಭುತ ಶತಕ ಬಾರಿಸಿದ್ದಾರೆ. ಪ್ರಿಯಾಂಶ್ ಆರ್ಯ ಕಾನ್ಪುರದಲ್ಲಿ ನಡೆಯುತ್ತಿರುವ ಅನಧಿಕೃತ ಏಕದಿನ ಪಂದ್ಯದಲ್ಲಿ ಕೇವಲ 82 ಎಸೆತಗಳಲ್ಲಿ ಶತಕ ಸಿಡಿಸಿದರು. ಪ್ರಿಯಾಂಶ್ ಆರ್ಯ ಅವರನ್ನು ಮೊದಲ ಬಾರಿಗೆ ಭಾರತ ಎ ತಂಡಕ್ಕೆ ಆಯ್ಕೆ ಮಾಡಲಾಗಿದ್ದು ಮೊದಲ ಪಂದ್ಯದಲ್ಲೇ ಶತಕ ಗಳಿಸುವ ಮೂಲಕ ಮತ್ತೊಮ್ಮೆ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಆದಾಗ್ಯೂ, ಪ್ರಿಯಾಂಶ್ ಆರ್ಯ ಶತಕ ಗಳಿಸಿದ ಸ್ವಲ್ಪ ಸಮಯದ ನಂತರವೇ ಔಟಾದರು. ಪ್ರಿಯಾಂಶ್ 84 ಎಸೆತಗಳಲ್ಲಿ 5 ಸಿಕ್ಸರ್‌ಗಳು ಮತ್ತು 11 ಬೌಂಡರಿಗಳ ಸಹಿತ 101 ರನ್ ಗಳಿಸಿ ಔಟಾದರು.

ಪ್ರಿಯಾಂಶ್ ಆರ್ಯ ಬಿರುಸಿನ ಬ್ಯಾಟಿಂಗ್

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಎ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಪ್ರಿಯಾಂಶ್ ಆರ್ಯ ಹಾಗೂ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಪ್ರಭ್ಸಿಮ್ರಾನ್ ಸಿಂಗ್ ಮೊದಲ ವಿಕೆಟ್‌ಗೆ 135 ರನ್‌ಗಳ ಜೊತೆಯಾಟ ನಡೆಸಿದರು. ಪ್ರಭ್ಸಿಮ್ರಾನ್ 53 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳೊಂದಿಗೆ 56 ರನ್ ಗಳಿಸಿದರು. ಇತ್ತ ಪ್ರಿಯಾಂಶ್ 60 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರೆ, ಆ ಬಳಿಕ ಮುಂದಿನ 22 ಎಸೆತಗಳಲ್ಲಿ 51 ರನ್‌ ಚಚ್ಚಿದರು.

ED ಇಕ್ಕಳದಲ್ಲಿ ಯುವರಾಜ್, ಧವನ್, ಉತ್ತಪ್ಪ, ರೈನಾ ವಿಲವಿಲ; ಕೋಟ್ಯಾಂತರ ಮೌಲ್ಯದ ಆಸ್ತಿ ಮುಟ್ಟುಗೋಲು

ಯುವರಾಜ್ ಗರಡಿಯಲ್ಲಿ ಪಳಗಿದ ಪ್ರಿಯಾಂಶ್

ಪ್ರಿಯಾಂಶ್ ಆರ್ಯ ಇತ್ತೀಚೆಗೆ ಯುವರಾಜ್ ಸಿಂಗ್ ಅವರೊಂದಿಗೆ ತರಬೇತಿ ಪಡೆಯುತ್ತಿರುವುದು ಕಂಡುಬಂದಿದೆ. ಆಸ್ಟ್ರೇಲಿಯಾ ಎ ಸರಣಿಗೂ ಮೊದಲು ಪ್ರಿಯಾಂಶ್ ಆರ್ಯ, ಯುವರಾಜ್ ಸಿಂಗ್ ಅವರೊಂದಿಗೆ ಸಮಯ ಕಳೆದಿದ್ದರು. ಯುವರಾಜ್ ಸಿಂಗ್ ಅವರ ಶಿಷ್ಯ ಅಭಿಷೇಕ್ ಶರ್ಮಾ, ಇತ್ತೀಚೆಗೆ ಏಷ್ಯಾಕಪ್‌ನಲ್ಲಿ ಅಬ್ಬರಿಸಿ ಭಾರತವನ್ನು ಚಾಂಪಿಯನ್‌ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಭಿಷೇಕ್ ರೀತಿಯೇ ಪ್ರಿಯಾಂಶ್ ಆರ್ಯ ಯಾವಾಗ ಟೀಂ ಇಂಡಿಯಾವನ್ನು ಸೇರುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Wed, 1 October 25

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​