AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಅತ್ಯದ್ಭುತ ಕ್ಯಾಚ್ ಹಿಡಿದು, ಬ್ಯಾಟ್ಸ್​ಮನ್​ಗೆ ಹೋಯ್ತಾ ಇರು ಎಂದ ಪೊಲಾರ್ಡ್​

PSL 2023: ಈ ಪಂದ್ಯದಲ್ಲಿ ಟಾಸ್ ಗೆದ್ದ ಶಾಹೀನ್ ಅಫ್ರಿದಿ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಲಾಹೋರ್ ಕಲಂದರ್ಸ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು.

VIDEO: ಅತ್ಯದ್ಭುತ ಕ್ಯಾಚ್ ಹಿಡಿದು, ಬ್ಯಾಟ್ಸ್​ಮನ್​ಗೆ ಹೋಯ್ತಾ ಇರು ಎಂದ ಪೊಲಾರ್ಡ್​
Kieron Pollard
TV9 Web
| Edited By: |

Updated on: Mar 06, 2023 | 4:04 PM

Share

PSL 2023: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಅತ್ಯುತ್ತಮ ರಿಟರ್ನ್​ ಕ್ಯಾಚ್ ಹಿಡಿಯುವ ಮೂಲಕ ಕೀರನ್ ಪೊಲಾರ್ಡ್ (Kieron Pollard) ಎಲ್ಲರ ಗಮನ ಸೆಳೆದಿದ್ದಾರೆ. ಮುಲ್ತಾನ್ ಸುಲ್ತಾನ್ಸ್ (Multan Sultans) ಹಾಗೂ ಲಾಹೋರ್ ಕಲಂದರ್ಸ್ (Lahore Qalandars) ನಡುವಣ ಈ ಪಂದ್ಯದಲ್ಲಿ ಟಾಸ್ ಗೆದ್ದ ಶಾಹೀನ್ ಅಫ್ರಿದಿ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಲಾಹೋರ್ ಕಲಂದರ್ಸ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಅದರಲ್ಲೂ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಅಬ್ದುಲ್ಲಾ ಶೆಫೀಕ್ 35 ಎಸೆತಗಳಲ್ಲಿ 48 ರನ್​ ಬಾರಿಸಿದ್ದರು. ಇನ್ನೇನು ಅರ್ಧಶತಕ ಬಾರಿಸಲಿದ್ದಾರೆ ಎನ್ನುವಷ್ಟರಲ್ಲಿ ಕೀರನ್ ಪೊಲಾರ್ಡ್ ಹಿಡಿದ ಅತ್ಯದ್ಭುತ ಕ್ಯಾಚ್​ಗೆ ಬಲಿಯಾಗಬೇಕಾಯಿತು.

13ನೇ ಓವರ್ ಬೌಲಿಂಗ್ ಮಾಡಿದ ಪೊಲಾರ್ಡ್​ ಅವರ 4ನೇ ಎಸೆತವನ್ನು ಶೆಫೀಕ್ ಸ್ಟ್ರೈಟ್ ಹಿಟ್ ಬೌಂಡರಿ ಬಾರಿಸಲು ಯತ್ನಿಸಿದ್ದರು. ಆದರೆ ನೇರವಾಗಿ ಬಂದ ಚೆಂಡನ್ನು ಕ್ಷಣಾರ್ಧದಲ್ಲೇ ಕೈಯಲ್ಲಿ ಬಂಧಿಸುವ ಮೂಲಕ ಪೊಲಾರ್ಡ್ ಕ್ಯಾಚ್ ಹಿಡಿದರು. ಈ ಅದ್ಭುತ ಕ್ಯಾಚ್ ಬೆನ್ನಲ್ಲೇ ಶೆಫೀಕ್​ಗೆ ಪೆವಿಲಿಯನ್​ ಕಡೆಗೆ ಹಿಂತಿರುಗುವಂತೆ ಸನ್ನೆ ಮಾಡಿ ಕೆಣಕುವ ಪ್ರಯತ್ನ ಮಾಡಿದರು. ಇದೀಗ ಕೀರನ್ ಪೊಲಾರ್ಡ್ ಅವರ ಈ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ
Image
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Image
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
Image
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
Image
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಾಹೋರ್ ಕಲಂದರ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 180 ರನ್​ ಕಲೆಹಾಕಿತು.

181 ರನ್​ಗಳ ಟಾರ್ಗೆಟ್​ ಅನ್ನು ಬೆನ್ನತ್ತಿದ ಮುಲ್ತಾನ್ ಸುಲ್ತಾನ್ಸ್ ತಂಡದ ಅಗ್ರ ಕ್ರಮಾಂಕದ ಬ್ಯಾಟರ್​ಗಳಿಂದ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಕೀರನ್ ಪೊಲಾರ್ಡ್ 28 ಎಸೆತಗಳಲ್ಲಿ 39 ರನ್ ಬಾರಿಸಿ ಔಟಾದರು. ಅಂತಿಮವಾಗಿ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 159 ರನ್​ಗಳಿಸಿ ಮುಲ್ತಾನ್ ಸುಲ್ತಾನ್ಸ್ ತಂಡವು 21 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಲಾಹೋರ್ ಕಲಂದರ್ಸ್​ ಪ್ಲೇಯಿಂಗ್ 11: ಫಖರ್ ಜಮಾನ್ , ಮಿರ್ಜಾ ತಾಹಿರ್ ಬೇಗ್ , ಅಬ್ದುಲ್ಲಾ ಶೆಫೀಕ್ , ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್) , ಹುಸೇನ್ ತಲಾತ್ , ಸಿಕಂದರ್ ರಾಝ , ಡೇವಿಡ್ ವೀಝ , ರಶೀದ್ ಖಾನ್ , ಶಾಹೀನ್ ಅಫ್ರಿದಿ (ನಾಯಕ) , ಹ್ಯಾರಿಸ್ ರೌಫ್ , ಜಮಾನ್ ಖಾನ್.

ಇದನ್ನೂ ಓದಿ: Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ

ಮುಲ್ತಾನ್ ಸುಲ್ತಾನ್ಸ್ ಪ್ಲೇಯಿಂಗ್ 11: ಮೊಹಮ್ಮದ್ ರಿಜ್ವಾನ್ (ನಾಯಕ) , ಶಾನ್ ಮಸೂದ್ , ರಿಲೀ ರೊಸ್ಸೊ , ಡೇವಿಡ್ ಮಿಲ್ಲರ್ , ಕೀರನ್ ಪೊಲಾರ್ಡ್ , ಖುಷ್ದಿಲ್ ಶಾ , ಅನ್ವರ್ ಅಲಿ , ಉಸಾಮಾ ಮಿರ್ , ಅಬ್ಬಾಸ್ ಅಫ್ರಿದಿ , ಸಮೀನ್ ಗುಲ್ , ಇಹ್ಸಾನುಲ್ಲಾ.

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ