VIDEO: ಝಿಂಬಾಬರ್… ಬಾಬರ್ನ ಗೇಲಿ ಮಾಡಿದ ಪಾಕಿಸ್ತಾನ್ ಫ್ಯಾನ್ಸ್
PSL 2025: ಪಾಕಿಸ್ತಾನ್ ಸೂಪರ್ ಲೀಗ್ ಸೀಸನ್-10ರಲ್ಲಿ ಕಣಕ್ಕಿಳಿದ ಮೊದಲ ಪಂದ್ಯದಲ್ಲೇ ಪೇಶಾವರ್ ಝಲ್ಮಿ ತಂಡದ ನಾಯಕ ಬಾಬರ್ ಆಝಂ ಶೂನ್ಯಕ್ಕೆ ಔಟಾಗಿದ್ದಾರೆ. ಕ್ವೆಟ್ಟಾ ಗ್ಲಾಡಿಯೇಟರ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ, ಎಡಗೈ ವೇಗಿ ಮೊಹಮ್ಮದ್ ಅಮೀರ್ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು.

ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ (Babar Azam) ‘ಝಿಂಬಾಬರ್’ ಎಂಬ ಟ್ಯಾಗ್ ಲೈನ್ನೊಂದಿಗೆ ಹಲವು ಬಾರಿ ಟೀಕೆಗೆ ಗುರಿಯಾಗಿದ್ದಾರೆ. ಬಲಿಷ್ಠ ತಂಡಗಳ ವಿರುದ್ಧ ಮುಗ್ಗರಿಸುವ ಬಾಬರ್, ಝಿಂಬಾಬ್ವೆ ವಿರುದ್ಧ ಮಾತ್ರ ಉತ್ತಮ ಪ್ರದರ್ಶನ ನೀಡುತ್ತಾರೆ ಎಂಬ ಕಾರಣಕ್ಕೆ ಅವರನ್ನು ಝಿಂಬಾಬರ್ ಎಂದು ಹೀಯಾಳಿಸಲಾಗುತ್ತದೆ. ಇದೀಗ ಪಾಕಿಸ್ತಾನ್ ಸೂಪರ್ ಲೀಗ್ನಲ್ಲೂ (PSL 2025) ಝಿಂಬಾಬರ್ ಘೋಷಣೆಗಳು ಕೇಳಿ ಬಂದಿವೆ. ಅದು ಕೂಡ ಪಾಕ್ ಅಭಿಮಾನಿಗಳಿಂದಲೇ ಎಂಬುದೇ ಅಚ್ಚರಿ.
ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ಪೇಶಾವರ್ ಝಲ್ಮಿ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿರುವ ಬಾಬರ್ ಆಝಂ ಮೊದಲ ಪಂದ್ಯದಲ್ಲೇ ಸೊನ್ನೆ ಸುತ್ತಿದ್ದಾರೆ. ರಾವಲ್ಪಿಂಡಿಯ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಿಎಸ್ಎಲ್ನ 2ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡವು 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 216 ರನ್ ಕಲೆಹಾಕಿತು.
ಈ ಕಠಿಣ ಗುರಿಯನ್ನು ಬೆನ್ನತ್ತಲು ಪೇಶಾವರ್ ಝಲ್ಮಿ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ ಕೇವಲ 2 ಎಸೆತಗಳನ್ನು ಎದುರಿಸಿ ಮೊಹಮ್ಮದ್ ಅಮೀರ್ ಬೌಲಿಂಗ್ನಲ್ಲಿ ಕ್ಯಾಚ್ ನೀಡಿದರು. ಇತ್ತ ಡಕ್ ಔಟ್ ಆಗಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದ ಬಾಬರ್ ಆಝಂ ಅವರನ್ನು ಅಭಿಮಾನಿಗಳು ಝಿಂಬಾಬರ್ ಘೋಷಣೆಯೊಂದಿಗೆ ಗೇಲಿ ಮಾಡಿದರು.
ಇದೀಗ ರಾವಲ್ಪಿಂಡಿ ಸ್ಟೇಡಿಯಂನಲ್ಲಿ ಅಭಿಮಾನಿಗಳು ಬಾಬರ್ನನ್ನು ಝಿಂಬಾಬರ್ ಎಂದು ಗೇಲಿ ಮಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬಾಬರ್ ಆಝಂನ ಗೇಲಿ ಮಾಡುತ್ತಿರುವ ಅಭಿಮಾನಿಗಳು:
ಇನ್ನು ಈ ಪಂದ್ಯದಲ್ಲಿ ಕ್ವೆಟ್ಟಾ ಗ್ಲಾಡಿಯೇಟರ್ಸ್ ನೀಡಿದ 216 ರನ್ಗಳ ಗುರಿಯನ್ನು ಬೆನ್ನತ್ತಿದ ಪೇಶಾವರ್ ಝಲ್ಮಿ ತಂಡವು 15.1 ಓವರ್ಗಳಲ್ಲಿ 136 ರನ್ ಬಾರಿಸಿ ಆಲೌಟ್ ಆಗಿದೆ.
ಇದನ್ನೂ ಓದಿ: ಭಾರತೀಯರು ನಿಮ್ಮನ್ನು… ಪಾಕ್ ಪತ್ರಕರ್ತನ ಪ್ರಶ್ನೆಗೆ ಡೇವಿಡ್ ವಾರ್ನರ್ ಖಡಕ್ ಉತ್ತರ
ಈ ಮೂಲಕ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡವು 80 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ 4 ಓವರ್ಗಳಲ್ಲಿ 42 ರನ್ ನೀಡಿ 4 ವಿಕೆಟ್ ಕಬಳಿಸಿದ ಅಬ್ರಾರ್ ಅಹ್ಮದ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
Published On - 12:54 pm, Mon, 14 April 25