VIDEO: ಝಿಂಬಾಬರ್… ಬಾಬರ್​ನ ಗೇಲಿ ಮಾಡಿದ ಪಾಕಿಸ್ತಾನ್ ಫ್ಯಾನ್ಸ್​

|

Updated on: Apr 14, 2025 | 12:56 PM

PSL 2025: ಪಾಕಿಸ್ತಾನ್ ಸೂಪರ್ ಲೀಗ್ ಸೀಸನ್-10ರಲ್ಲಿ ಕಣಕ್ಕಿಳಿದ ಮೊದಲ ಪಂದ್ಯದಲ್ಲೇ ಪೇಶಾವರ್ ಝಲ್ಮಿ ತಂಡದ ನಾಯಕ ಬಾಬರ್ ಆಝಂ ಶೂನ್ಯಕ್ಕೆ ಔಟಾಗಿದ್ದಾರೆ. ಕ್ವೆಟ್ಟಾ ಗ್ಲಾಡಿಯೇಟರ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ, ಎಡಗೈ ವೇಗಿ ಮೊಹಮ್ಮದ್ ಅಮೀರ್ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು.

VIDEO: ಝಿಂಬಾಬರ್... ಬಾಬರ್​ನ ಗೇಲಿ ಮಾಡಿದ ಪಾಕಿಸ್ತಾನ್ ಫ್ಯಾನ್ಸ್​
Babar Azam
Follow us on

ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ (Babar Azam) ‘ಝಿಂಬಾಬರ್’ ಎಂಬ ಟ್ಯಾಗ್​ ಲೈನ್​ನೊಂದಿಗೆ ಹಲವು ಬಾರಿ ಟೀಕೆಗೆ ಗುರಿಯಾಗಿದ್ದಾರೆ. ಬಲಿಷ್ಠ ತಂಡಗಳ ವಿರುದ್ಧ ಮುಗ್ಗರಿಸುವ ಬಾಬರ್, ಝಿಂಬಾಬ್ವೆ ವಿರುದ್ಧ ಮಾತ್ರ ಉತ್ತಮ ಪ್ರದರ್ಶನ ನೀಡುತ್ತಾರೆ ಎಂಬ ಕಾರಣಕ್ಕೆ ಅವರನ್ನು ಝಿಂಬಾಬರ್ ಎಂದು ಹೀಯಾಳಿಸಲಾಗುತ್ತದೆ. ಇದೀಗ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲೂ (PSL 2025) ಝಿಂಬಾಬರ್ ಘೋಷಣೆಗಳು ಕೇಳಿ ಬಂದಿವೆ. ಅದು ಕೂಡ ಪಾಕ್ ಅಭಿಮಾನಿಗಳಿಂದಲೇ ಎಂಬುದೇ ಅಚ್ಚರಿ.

ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಪೇಶಾವರ್ ಝಲ್ಮಿ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿರುವ ಬಾಬರ್ ಆಝಂ ಮೊದಲ ಪಂದ್ಯದಲ್ಲೇ ಸೊನ್ನೆ ಸುತ್ತಿದ್ದಾರೆ. ರಾವಲ್ಪಿಂಡಿಯ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಿಎಸ್​ಎಲ್​ನ 2ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 216 ರನ್ ಕಲೆಹಾಕಿತು.

ಈ ಕಠಿಣ ಗುರಿಯನ್ನು ಬೆನ್ನತ್ತಲು ಪೇಶಾವರ್ ಝಲ್ಮಿ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ ಕೇವಲ 2 ಎಸೆತಗಳನ್ನು ಎದುರಿಸಿ ಮೊಹಮ್ಮದ್ ಅಮೀರ್ ಬೌಲಿಂಗ್​ನಲ್ಲಿ ಕ್ಯಾಚ್ ನೀಡಿದರು. ಇತ್ತ ಡಕ್ ಔಟ್ ಆಗಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದ ಬಾಬರ್ ಆಝಂ ಅವರನ್ನು ಅಭಿಮಾನಿಗಳು ಝಿಂಬಾಬರ್ ಘೋಷಣೆಯೊಂದಿಗೆ ಗೇಲಿ ಮಾಡಿದರು.

ಇದನ್ನೂ ಓದಿ
PSL 2025: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ RCB ಮಾಜಿ ಆಟಗಾರರು
ಪ್ರಿಯಾಂಶ್ ಆರ್ಯನ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್
ಕ್ರಿಸ್​ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
ಉಲ್ಟಾ ಹೊಡೆದ RCB ಕಪ್ ಗೆಲ್ಲಬಾರದು ಎಂದಿದ್ದ ಅಂಬಾಟಿ ರಾಯುಡು

ಇದೀಗ ರಾವಲ್ಪಿಂಡಿ ಸ್ಟೇಡಿಯಂನಲ್ಲಿ ಅಭಿಮಾನಿಗಳು ಬಾಬರ್​ನನ್ನು ಝಿಂಬಾಬರ್ ಎಂದು ಗೇಲಿ ಮಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬಾಬರ್ ಆಝಂನ ಗೇಲಿ ಮಾಡುತ್ತಿರುವ ಅಭಿಮಾನಿಗಳು:

ಇನ್ನು ಈ ಪಂದ್ಯದಲ್ಲಿ ಕ್ವೆಟ್ಟಾ ಗ್ಲಾಡಿಯೇಟರ್ಸ್ ನೀಡಿದ 216 ರನ್​ಗಳ ಗುರಿಯನ್ನು ಬೆನ್ನತ್ತಿದ ಪೇಶಾವರ್ ಝಲ್ಮಿ ತಂಡವು 15.1 ಓವರ್​ಗಳಲ್ಲಿ 136 ರನ್ ಬಾರಿಸಿ ಆಲೌಟ್ ಆಗಿದೆ.

ಇದನ್ನೂ ಓದಿ: ಭಾರತೀಯರು ನಿಮ್ಮನ್ನು… ಪಾಕ್ ಪತ್ರಕರ್ತನ ಪ್ರಶ್ನೆಗೆ ಡೇವಿಡ್ ವಾರ್ನರ್ ಖಡಕ್ ಉತ್ತರ

ಈ ಮೂಲಕ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡವು 80 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ 4 ಓವರ್​ಗಳಲ್ಲಿ 42 ರನ್ ನೀಡಿ 4 ವಿಕೆಟ್ ಕಬಳಿಸಿದ ಅಬ್ರಾರ್ ಅಹ್ಮದ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

 

Published On - 12:54 pm, Mon, 14 April 25