AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ ಸೂಪರ್ ಲೀಗ್: ಆಟಗಾರರು, ಅಧಿಕಾರಿಗಳು ತಂಗಿದ್ದ ಹೋಟೆಲ್‌ನಲ್ಲಿ ಭಾರಿ ಅಗ್ನಿ ಅವಘಡ..!

Pakistan Super League: ಪಾಕಿಸ್ತಾನ ಸೂಪರ್ ಲೀಗ್ನ 10ನೇ ಆವೃತ್ತಿಯು ಇಂದು ಆರಂಭವಾಗಿದೆ. ಆದರೆ, ಪಂದ್ಯಾವಳಿ ಆರಂಭಕ್ಕೂ ಮುನ್ನ ಇಸ್ಲಾಮಾಬಾದ್‌ನ ಸೆರೆನಾ ಹೋಟೆಲ್‌ನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಅನೇಕ ಆಟಗಾರರು ಮತ್ತು ಅಧಿಕಾರಿಗಳು ಈ ಹೋಟೆಲ್‌ನಲ್ಲಿ ತಂಗಿದ್ದರು. ಅದೃಷ್ಟವಶಾತ್, ಯಾರಿಗೂ ಗಾಯಗಳಾಗಿಲ್ಲ. ಅಗ್ನಿಶಾಮಕ ದಳವು ಬೆಂಕಿಯನ್ನು ತ್ವರಿತವಾಗಿ ನಂದಿಸಿತು ಎಂದು ವರದಿಯಾಗಿದೆ.

ಪಾಕಿಸ್ತಾನ ಸೂಪರ್ ಲೀಗ್: ಆಟಗಾರರು, ಅಧಿಕಾರಿಗಳು ತಂಗಿದ್ದ ಹೋಟೆಲ್‌ನಲ್ಲಿ ಭಾರಿ ಅಗ್ನಿ ಅವಘಡ..!
ಪಾಕಿಸ್ತಾನ್ ಹೋಟೆಲ್​ನಲ್ಲಿ ಬೆಂಕಿ
Follow us
ಪೃಥ್ವಿಶಂಕರ
|

Updated on:Apr 11, 2025 | 9:39 PM

ಐಪಿಎಲ್​ಗೆ ಪೈಪೋಟಿ ನೀಡುವ ಸಲುವಾಗಿಯೇ ಪಾಕಿಸ್ತಾನದಲ್ಲಿ ಪಾಕಿಸ್ತಾನ ಸೂಪರ್ ಲೀಗ್​ನ 10ನೇ ಆವೃತ್ತಿಯನ್ನು ಇಂದಿನಿಂದ ಆರಂಭಿಸಲಾಗುತ್ತಿದೆ. ಆದರೆ ಪಂದ್ಯಾವಳಿ ಪ್ರಾರಂಭವಾಗುವ ಕೆಲವೇ ಗಂಟೆಗಳ ಮೊದಲು ಇಸ್ಲಾಮಾಬಾದ್‌ನ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಘಾತಕ್ಕಾರಿ ಸಂಗತಿಯೆಂದರೆ ಇದೇ ಹೋಟೆಲ್‌ನಲ್ಲಿ ಪಾಕ್ ಸೂಪರ್ ಲೀಗ್​ನಲ್ಲಿ ಭಾಗವಹಿಸಲಿರುವ ಅನೇಕ ಆಟಗಾರರು, ತಂಡದ ಅಧಿಕಾರಿಗಳು ಮತ್ತು ಲೀಗ್‌ಗೆ ಸಂಬಂಧಿಸಿದ ಜನರು ತಂಗಿದ್ದರು. ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಗಾಯ ಅಥವಾ ಹಾನಿಯಾಗಲಿಲ್ಲ ಎಂಬುದು ಸಮಾಧಾನಕರ ವಿಷಯವಾಗಿದೆ.

ಹೋಟೆಲ್‌ನಲ್ಲಿ ಬೆಂಕಿ

ಇಸ್ಲಾಮಾಬಾದ್‌ನ ಪ್ರಸಿದ್ಧ ಸೆರೆನಾ ಹೋಟೆಲ್‌ನ ಮೇಲಿನ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಇಸ್ಲಾಮಾಬಾದ್ ಜಿಲ್ಲಾಡಳಿತವನ್ನು ಉಲ್ಲೇಖಿಸಿ ಪಾಕಿಸ್ತಾನಿ ಮಾಧ್ಯಮಗಳು ತಿಳಿಸಿವೆ. ಆದರೆ ಅದು ಹೋಟೆಲ್‌ನ ಇತರ ಮಹಡಿಗಳಿಗೆ ಹರಡಿ ದೊಡ್ಡ ಅನಾಹುತಕ್ಕೆ ಕಾರಣವಾಗುವ ಮೊದಲು, ಅಗ್ನಿಶಾಮಕ ದಳ ಬೆಂಕಿಯನ್ನು ಹತೋಟಿಗೆ ತಂದಿದೆ. ಹಾಗೆಯೇ ಆಟಗಾರರು ಮತ್ತು ಅಧಿಕಾರಿಗಳನ್ನು ತಕ್ಷಣವೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಯಾರಿಗೂ ಗಾಯಗಳಾಗಿಲ್ಲ ಎಂದು ಪಿಎಸ್‌ಎಲ್ ಸಿಇಒ ಸಲ್ಮಾನ್ ನಾಸಿರ್ ತಿಳಿಸಿದ್ದಾರೆ.

ಸೆರೆನಾ ಹೋಟೆಲ್‌ನ ಮೇಲಿನ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಸುದ್ದಿ ತಿಳಿದ ಕೂಡಲೇ ಆರು ಅಗ್ನಿಶಾಮಕ ದಳದ ತಂಡಗಳು ಶೀಘ್ರದಲ್ಲೇ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ನಂದಿಸಲು 50 ಅಗ್ನಿಶಾಮಕ ದಳದವರು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಅಗ್ನಿಶಾಮಕ ದಳದವರ ಸಕಾಲಿಕ ಕಾರ್ಯದಿಂದಾಗಿ ಕೇವಲ ಅರ್ಧ ಗಂಟೆಯೊಳಗೆ ಬೆಂಕಿ ನಂದಿಸಲಾಗಿದೆ. ಇದರಿಂದಾಗಿ ಪಿಎಸ್‌ಎಲ್ ಆರಂಭಕ್ಕೆ ಯಾವುದೇ ಅಡಚಣೆಯಾಗದೆ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವನ್ನು ಹೊರತುಪಡಿಸಿ, ಪಂದ್ಯಗಳು ಸಹ ಸಮಯಕ್ಕೆ ಸರಿಯಾಗಿ ಪ್ರಾರಂಭವಾಗಿವೆ ಎಂದು ವರದಿಯಾಗಿದೆ.

ಪಿಎಸ್‌ಎಲ್‌ ವೇಳಾಪಟ್ಟಿ

ಪಿಎಸ್‌ಎಲ್‌ನ 10 ನೇ ಸೀಸನ್‌ನಲ್ಲಿ 6 ತಂಡಗಳು ಒಟ್ಟು 34 ಪಂದ್ಯಗಳನ್ನು ಆಡಲಿವೆ. ಏಪ್ರಿಲ್ 11 ರಿಂದ ಲೀಗ್ ಆರಂಭವಾಗಲಿದೆ. ಫೈನಲ್ ಪಂದ್ಯ ಮೇ 18 ರಂದು ನಡೆಯಲಿದೆ. ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ 13 ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಎರಡು ಎಲಿಮಿನೇಟರ್‌ಗಳು ಮತ್ತು ಫೈನಲ್ ಸೇರಿವೆ. ರಾವಲ್ಪಿಂಡಿಯಲ್ಲಿ 11 ಪಂದ್ಯಗಳು ನಡೆಯಲಿದ್ದು, ಮೊದಲ ಕ್ವಾಲಿಫೈಯರ್ ಮೇ 13 ರಂದು ನಡೆಯಲಿದೆ. ಕರಾಚಿ ಮತ್ತು ಮುಲ್ತಾನ್‌ನಲ್ಲಿ ತಲಾ ಐದು ಪಂದ್ಯಗಳು ನಡೆಯಲಿವೆ. ಈ ಪಂದ್ಯಾವಳಿಯು ಮೂರು ಡಬಲ್-ಹೆಡರ್ ಪಂದ್ಯಗಳನ್ನು ಸಹ ಒಳಗೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:36 pm, Fri, 11 April 25

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ