AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSL: 22 ವರ್ಷದ ಯುವ ಬ್ಯಾಟರ್ ಸಿಡಿಲಬ್ಬರ: ಕೇವಲ 48 ಎಸೆತಗಳಲ್ಲಿ ಸ್ಪೋಟಕ ಶತಕ

Harry Brook: 22 ವರ್ಷದ ಹ್ಯಾರಿ ಬ್ರೂಕ್ ಈಗಾಗಲೇ ಇಂಗ್ಲೆಂಡ್ ಪರ ಪದಾರ್ಪಣೆ ಮಾಡಿದ್ದಾರೆ. ಕಳೆದ ತಿಂಗಳು ಜನವರಿ 26 ರಂದು ಬ್ರಿಡ್ಜ್‌ಟೌನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪದಾರ್ಪಣೆ ಮಾಡಿದ್ದ ಬ್ರೂಕ್ ಇದುವರೆಗೆ ಏಕೈಕ ಟಿ20 ಪಂದ್ಯವಾಡಿದ್ದಾರೆ.

PSL: 22 ವರ್ಷದ ಯುವ ಬ್ಯಾಟರ್ ಸಿಡಿಲಬ್ಬರ: ಕೇವಲ 48 ಎಸೆತಗಳಲ್ಲಿ ಸ್ಪೋಟಕ ಶತಕ
Harry Brook
TV9 Web
| Edited By: |

Updated on: Feb 20, 2022 | 2:54 PM

Share

ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ನಡೆದ ಲಾಹೋರ್ ಖಲಂದರ್ಸ್ ಮತ್ತು ಇಸ್ಲಾಮಾಬಾದ್ ಯುನೈಟೆಡ್ ನಡುವಣ ಪಂದ್ಯದಲ್ಲಿ ಇಂಗ್ಲೆಂಡ್‌ನ 22ರ ಹರೆಯದ ಬ್ಯಾಟ್ಸ್‌ಮನ್‌ ಬಿರುಸಿನ ಬ್ಯಾಟಿಂಗ್ ಮೂಲಕ ಇದೀಗ ಎಲ್ಲರ ಗಮನ ಸೆಳೆದಿದ್ದಾನೆ. ಲಾಹೋರ್ ಪರ ಕಣಕ್ಕಿಳಿದ ಯುವ ಬ್ಯಾಟರ್ ಹ್ಯಾರಿ ಬ್ರೂಕ್ ಇಸ್ಲಾಮಾಬಾದ್ ಯುನೈಟೆಡ್‌ನ ಬೌಲರ್‌ಗಳ ಬೆಂಡೆತ್ತಿದರು. ಈ ಮೂಲಕ ಪಿಎಸ್​ಎಲ್​ನಲ್ಲಿ ಚೊಚ್ಚಲ ಶತಕ ಪೂರೈಸಿ ಲಾಹೋರ್ ತಂಡದ ಗೆಲುವಿನ ರೂವಾರಿ ಎನಿಸಿಕೊಂಡರು.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಾಹೋರ್ ತಂಡಕ್ಕೆ ಫಖರ್ ಝಾಮಾನ್ (51) ಉತ್ತಮ ಆರಂಭ ಒದಗಿಸಿದ್ದರು. ಆದರೆ ಮತ್ತೊಂದು ತುದಿಯಿಂದ ಇತರೆ ಆಟಗಾರರಿಂದ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ. ಪರಿಣಾಮ 12 ರನ್​ಗೆ 3 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬ್ರೂಕ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು. ಬಿರುಗಾಳಿ ಬ್ಯಾಟಿಂಗ್ ಮೂಲಕ ಅಬ್ಬರಿಸಿದ ಬ್ರೂಕ್ ಸಿಕ್ಸ್-ಫೋರ್​ಗಳ ಸುರಿಮಳೆಗೈದರು. ಪರಿಣಾಮ ಕೇವಲ 48 ಎಸೆತಗಳಲ್ಲಿ ಶತಕ ಮೂಡಿಬಂತು. ಅಷ್ಟೇ ಅಲ್ಲದೆ 49 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ ಅಜೇಯ 102 ರನ್​ ಬಾರಿಸುವ ಮೂಲಕ ತಂಡದ ಮೊತ್ತವನ್ನು 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 197 ಕ್ಕೆ ತಂದು ನಿಲ್ಲಿಸಿದರು.

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಇಸ್ಲಾಮಾಬಾದ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 131 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಲಾಹೋರ್ ಖಲಂದರ್ಸ್ ತಂಡವು 66 ರನ್​ಗಳ ಭರ್ಜರಿ ಜಯ ಸಾಧಿಸಿತು. ಸಿಡಿಲಬ್ಬರದ ಶತಕ ಸಿಡಿಸಿ ಗೆಲುವಿನ ರೂವಾರಿ ಎನಿಸಿಕೊಂಡ ಹ್ಯಾರಿ ಬ್ರೂಕ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರು.

ಇಂಗ್ಲೆಂಡ್ ಆಟಗಾರ: 22 ವರ್ಷದ ಹ್ಯಾರಿ ಬ್ರೂಕ್ ಈಗಾಗಲೇ ಇಂಗ್ಲೆಂಡ್ ಪರ ಪದಾರ್ಪಣೆ ಮಾಡಿದ್ದಾರೆ. ಕಳೆದ ತಿಂಗಳು ಜನವರಿ 26 ರಂದು ಬ್ರಿಡ್ಜ್‌ಟೌನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪದಾರ್ಪಣೆ ಮಾಡಿದ್ದ ಬ್ರೂಕ್ ಇದುವರೆಗೆ ಏಕೈಕ ಟಿ20 ಪಂದ್ಯವಾಡಿದ್ದಾರೆ. ಆದರೆ ಈ ಪಂದ್ಯದಲ್ಲಿ ಅವರು ಕೇವಲ 10 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು ಟಿ20 ಕ್ರಿಕೆಟ್​ನಲ್ಲಿ 56 ಪಂದ್ಯಗಳನ್ನು ಆಡಿರುವ ಬ್ರೂಕ್ 1389 ರನ್ ಗಳಿಸಿದ್ದಾರೆ. ಹಾಗೆಯೇ ಪ್ರಥಮ ದರ್ಜೆಯಲ್ಲಿ 48 ಪಂದ್ಯಗಳಲ್ಲಿ 2100 ರನ್ ಗಳಿಸಿದ್ದಾರೆ.

ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?

ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ

ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್

(PSL: Harry Brook’s 48-ball ton guides Lahore Qalandars to thumping win)

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ