ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ನಡೆದ ಲಾಹೋರ್ ಖಲಂದರ್ಸ್ ಮತ್ತು ಇಸ್ಲಾಮಾಬಾದ್ ಯುನೈಟೆಡ್ ನಡುವಣ ಪಂದ್ಯದಲ್ಲಿ ಇಂಗ್ಲೆಂಡ್‌ನ 22ರ ಹರೆಯದ ಬ್ಯಾಟ್ಸ್‌ಮನ್ ಬಿರುಸಿನ ಬ್ಯಾಟಿಂಗ್ ಮೂಲಕ ಇದೀಗ ಎಲ್ಲರ ಗಮನ ಸೆಳೆದಿದ್ದಾನೆ. ಲಾಹೋರ್ ಪರ ಕಣಕ್ಕಿಳಿದ ಯುವ ಬ್ಯಾಟರ್ ಹ್ಯಾರಿ ಬ್ರೂಕ್ ಇಸ್ಲಾಮಾಬಾದ್ ಯುನೈಟೆಡ್‌ನ ಬೌಲರ್‌ಗಳ ಬೆಂಡೆತ್ತಿದರು. ಈ ಮೂಲಕ ಪಿಎಸ್ಎಲ್ನಲ್ಲಿ ಚೊಚ್ಚಲ ಶತಕ ಪೂರೈಸಿ ಲಾಹೋರ್ ತಂಡದ ಗೆಲುವಿನ ರೂವಾರಿ ಎನಿಸಿಕೊಂಡರು.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಾಹೋರ್ ತಂಡಕ್ಕೆ ಫಖರ್ ಝಾಮಾನ್ (51) ಉತ್ತಮ ಆರಂಭ ಒದಗಿಸಿದ್ದರು. ಆದರೆ ಮತ್ತೊಂದು ತುದಿಯಿಂದ ಇತರೆ ಆಟಗಾರರಿಂದ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ. ಪರಿಣಾಮ 12 ರನ್ಗೆ 3 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬ್ರೂಕ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು. ಬಿರುಗಾಳಿ ಬ್ಯಾಟಿಂಗ್ ಮೂಲಕ ಅಬ್ಬರಿಸಿದ ಬ್ರೂಕ್ ಸಿಕ್ಸ್-ಫೋರ್ಗಳ ಸುರಿಮಳೆಗೈದರು. ಪರಿಣಾಮ ಕೇವಲ 48 ಎಸೆತಗಳಲ್ಲಿ ಶತಕ ಮೂಡಿಬಂತು. ಅಷ್ಟೇ ಅಲ್ಲದೆ 49 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ ಅಜೇಯ 102 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 197 ಕ್ಕೆ ತಂದು ನಿಲ್ಲಿಸಿದರು.
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಇಸ್ಲಾಮಾಬಾದ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 131 ರನ್ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಲಾಹೋರ್ ಖಲಂದರ್ಸ್ ತಂಡವು 66 ರನ್ಗಳ ಭರ್ಜರಿ ಜಯ ಸಾಧಿಸಿತು. ಸಿಡಿಲಬ್ಬರದ ಶತಕ ಸಿಡಿಸಿ ಗೆಲುವಿನ ರೂವಾರಿ ಎನಿಸಿಕೊಂಡ ಹ್ಯಾರಿ ಬ್ರೂಕ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದರು.
Lahore Qalandars are an unstoppable force right now, thanks to this young man. #HBLPSL7 l #LevelHai l #LQvIU pic.twitter.com/H5xjU1yvMc
— PakistanSuperLeague (@thePSLt20) February 19, 2022
ಇಂಗ್ಲೆಂಡ್ ಆಟಗಾರ:
22 ವರ್ಷದ ಹ್ಯಾರಿ ಬ್ರೂಕ್ ಈಗಾಗಲೇ ಇಂಗ್ಲೆಂಡ್ ಪರ ಪದಾರ್ಪಣೆ ಮಾಡಿದ್ದಾರೆ. ಕಳೆದ ತಿಂಗಳು ಜನವರಿ 26 ರಂದು ಬ್ರಿಡ್ಜ್‌ಟೌನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪದಾರ್ಪಣೆ ಮಾಡಿದ್ದ ಬ್ರೂಕ್ ಇದುವರೆಗೆ ಏಕೈಕ ಟಿ20 ಪಂದ್ಯವಾಡಿದ್ದಾರೆ. ಆದರೆ ಈ ಪಂದ್ಯದಲ್ಲಿ ಅವರು ಕೇವಲ 10 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು ಟಿ20 ಕ್ರಿಕೆಟ್ನಲ್ಲಿ 56 ಪಂದ್ಯಗಳನ್ನು ಆಡಿರುವ ಬ್ರೂಕ್ 1389 ರನ್ ಗಳಿಸಿದ್ದಾರೆ. ಹಾಗೆಯೇ ಪ್ರಥಮ ದರ್ಜೆಯಲ್ಲಿ 48 ಪಂದ್ಯಗಳಲ್ಲಿ 2100 ರನ್ ಗಳಿಸಿದ್ದಾರೆ.
ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?
ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ
ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್
(PSL: Harry Brook’s 48-ball ton guides Lahore Qalandars to thumping win)