AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚು ಕಮ್ಮಿಯಾದ್ರೆ ನಮ್ಮನ್ನು ದೂಷಿಸಬೇಡಿ; ವಿದೇಶಿ ಆಟಗಾರರಿಗೆ ಪಾಕ್ ಉಗ್ರ ಸಂಘಟನೆಯಿಂದ ಎಚ್ಚರಿಕೆ

PSL 11 Terror Threat: ಪಾಕಿಸ್ತಾನ ಸೂಪರ್ ಲೀಗ್ 11ನೇ ಆವೃತ್ತಿಗೆ ಸಿದ್ಧತೆಗಳ ನಡುವೆ, ಪಾಕ್ ಕ್ರಿಕೆಟ್ ಮಂಡಳಿಗೆ ವಿದೇಶಿ ಆಟಗಾರರ ಕೊರತೆ, ಇಂಧನ ಬಿಕ್ಕಟ್ಟು ಹಾಗೂ ಉಗ್ರರ ಬೆದರಿಕೆ ದೊಡ್ಡ ಸವಾಲಾಗಿದೆ. ಜಮಾತ್-ಉಲ್-ಅಹ್ರಾರ್ ಸಂಘಟನೆ, ವಿದೇಶಿ ಆಟಗಾರರು ಭಾಗವಹಿಸದಂತೆ ಎಚ್ಚರಿಕೆ ನೀಡಿದೆ, ಇಲ್ಲದಿದ್ದರೆ ಪ್ರಾಣಾಪಾಯಕ್ಕೆ ನಾವು ಜವಾಬ್ದಾರರಲ್ಲ ಎಂದಿದೆ. ಆದರೂ, ಬಾಂಗ್ಲಾದೇಶದ ಆಟಗಾರರು ಈ ಬೆದರಿಕೆಗಳಿಗೆ ಜಗ್ಗದೆ ಪಿಎಸ್‌ಎಲ್‌ನಲ್ಲಿ ಆಡಲು ಸಿದ್ಧರಾಗಿದ್ದಾರೆ.

ಹೆಚ್ಚು ಕಮ್ಮಿಯಾದ್ರೆ ನಮ್ಮನ್ನು ದೂಷಿಸಬೇಡಿ; ವಿದೇಶಿ ಆಟಗಾರರಿಗೆ ಪಾಕ್ ಉಗ್ರ ಸಂಘಟನೆಯಿಂದ ಎಚ್ಚರಿಕೆ
Psl
ಪೃಥ್ವಿಶಂಕರ
|

Updated on:Mar 23, 2026 | 6:10 PM

Share

11ನೇ ಆವೃತ್ತಿಯ ಪಾಕಿಸ್ತಾನ ಸೂಪರ್ ಲೀಗ್ (PSL 2026) ಆರಂಭಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (PCB) ಸಮಸ್ಯೆಗಳು ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಒಂದೆಡೆ ಪಿಸಿಬಿಗೆ, ವಿದೇಶಿ ಆಟಗಾರರ ಅಲಭ್ಯತೆ ದೊಡ್ಡ ತಲೆನೋವಾಗಿದ್ದರೆ, ಮತ್ತೊಂದೆಡೆ ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಲ್ಲಿ ಉಂಟಾಗಿರುವ ಅನಿಲ ಬಿಕ್ಕಟ್ಟು ಹಾಗೂ ಅಪ್ಘಾನಿಸ್ತಾನ ದಾಳಿ ಮಾಡುವ ಆತಂಕ ಮತ್ತೊಂದು ಸವಾಲಾಗಿದೆ. ಇದೀಗ ಇದೆಲ್ಲದರ ನಡುವೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯೊಂದು ವಿದೇಶಿ ಆಟಗಾರರು ಈ ಲೀಗ್​ನಲ್ಲಿ ಪಾಲ್ಗೊಳ್ಳದಂತೆ ಎಚ್ಚರಿಕೆ ನೀಡಿದೆ. ಮಾತ್ರವಲ್ಲದೆ ಲೀಗ್ ನಡೆಯುವ ವೇಳೆ ವಿದೇಶಿ ಆಟಗಾರರಿಗೆ ಪ್ರಾಣಾಪಾಯ ಎದುರಾದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂಬ ಬೆದರಿಕೆಯೊಡ್ಡಿದೆ.

ಜಮಾತ್-ಉಲ್-ಅಹ್ರಾರ್ ಬೆದರಿಕೆ

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದಿಂದಾಗಿ ಉಂಟಾಗಿರುವ ಇಂಧನ ಕೊರತೆಯಿಂದಾಗಿ ಪಿಎಸ್​ಎಲ್ ಪಂದ್ಯಾವಳಿಯನ್ನು ಕೇವಲ 2 ಕ್ರೀಡಾಂಗಣಗಳಲ್ಲಿ ಪ್ರೇಕ್ಷಕರಿಲ್ಲದೆ ನಡೆಸಲು ಪಿಸಿಬಿ ತೀರ್ಮಾನಿಸಿದೆ. ಇದೆಲ್ಲದರ ನಡುವೆ ಜಮಾತ್-ಉಲ್-ಅಹ್ರಾರ್ ಎಂಬ ಪಾಕಿಸ್ತಾನದ ಉಗ್ರ ಸಂಘಟನೆಯೊಂದು, ‘ವಿಶ್ವಾದ್ಯಂತದ ಎಲ್ಲಾ ಕ್ರಿಕೆಟ್ ಮಂಡಳಿಗಳು ತಮ್ಮ ಆಟಗಾರರನ್ನು ಪಾಕಿಸ್ತಾನಕ್ಕೆ ಕಳುಹಿಸದಂತೆ ನಾವು ಸಲಹೆ ನೀಡುತ್ತೇವೆ.

ಈ ಸಲಹೆಯನ್ನು ಮೀರಿ ವಿದೇಶಿ ಆಟಗಾರರು ಪಾಕಿಸ್ತಾನಕ್ಕೆ ಬಂದು ಪಂದ್ಯಾವಳಿಯಲ್ಲಿ ಭಾಗವಹಿಸಿದರೆ, ಅವರಿಗೆ ಇಲ್ಲಿ ಏನಾದರೂ ಸಂಭವಿಸಿದರೆ, ನಾವು ಜವಾಬ್ದಾರರಾಗಿರುವುದಿಲ್ಲ. ನಾವು ಈಗಾಗಲೇ ಎಚ್ಚರಿಕೆ ನೀಡಿದ್ದೇವೆ. ಇದರ ಹೊರತಾಗಿಯೂ ಆಟಗಾರರು ಪಂದ್ಯಾವಳಿಯಿಂದ ಹಿಂದೆ ಸರಿಯದಿದ್ದರೆ, ಪಂದ್ಯಗಳು ನಡೆಯದಂತೆ ತಡೆಯಲು ನಾವು ಏನು ಬೇಕಾದರೂ ಮಾಡುತ್ತೇವೆ. ಆಟಗಾರರು ಮೈದಾನಕ್ಕೆ ಪ್ರವೇಶಿಸುವುದನ್ನು ತಡೆಯಲು ನಾವು ಎಲ್ಲ ಪ್ರಯತ್ನಗಳನ್ನು ಮಾಡುತ್ತೇವೆ’ ಎಂಬ ಬೆದರಿಕೆಯನ್ನು ಹಾಕಿದೆ.

ಬೆದರಿಕೆಗೂ ಬಗ್ಗದ ಬಾಂಗ್ಲಾದೇಶ

ಭಯೋತ್ಪಾದಕ ಸಂಘಟನೆಗಳು ಆಟಗಾರರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರೂ ಸಹ, ಬಾಂಗ್ಲಾದೇಶ ತನ್ನ ಆಟಗಾರರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಲು ಅನುಮತಿ ನೀಡಿದೆ. ಬಾಂಗ್ಲಾದೇಶದ ಆಟಗಾರರು ಪಿಎಸ್‌ಎಲ್‌ನಲ್ಲಿ ಭಾಗವಹಿಸುತ್ತಾರೆ ಎಂದು ಬಾಂಗ್ಲಾದೇಶದ ಆಟಗಾರ ವ್ಯವಸ್ಥಾಪಕರು ತಿಳಿಸಿದ್ದಾರೆ. ಬಾಂಗ್ಲಾದೇಶದ ವೇಗದ ಬೌಲರ್ ನಹಿದ್ ರಾಣಾ ಕೂಡ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸುತ್ತಿರುವ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ ಮತ್ತು ಪರ್ವೇಜ್ ಹುಸೇನ್ ಎಮನ್ ಪಿಎಸ್‌ಎಲ್‌ನಲ್ಲಿ ಭಾಗವಹಿಸಲಿದ್ದಾರೆ. ಮುಸ್ತಾಫಿಜುರ್ ರೆಹಮಾನ್ ಮತ್ತು ಪರ್ವೇಜ್ ಹುಸೇನ್ ಲಾಹೋರ್ ಖಲಂದರ್‌ ತಂಡದ ಭಾಗವಾಗಿದ್ದಾರೆ. ಶೋರಿಫುಲ್ ಇಸ್ಲಾಂ, ನಹಿದ್ ರಾಣಾ ಮತ್ತು ತಂಜಿದ್ ಹಸನ್ ತಮೀಮ್ ಪೇಶಾವರ್ ಜಲ್ಮಿ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಉಳಿದಂತೆ ರಿಯಾದ್ ಹುಸೇನ್ ರಾವಲ್ಪಿಂಡಿ ತಂಡದಲ್ಲಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Mon, 23 March 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ