PBKS vs GT: ಐಪಿಎಲ್​​ನಲ್ಲಿಂದು ಮಯಾಂಕ್ vs ಹಾರ್ದಿಕ್: ಗೆಲುವಿನ ಓಟ ಮುಂದುವರೆಸುತ್ತಾ ಗುಜರಾತ್?

Punjab vs GT, IPL 2022: ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮುಂಬೈನ ಬ್ರಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಹೈವೋಲ್ಟೇಜ್ ಮ್ಯಾಚ್ ನಿರೀಕ್ಷಿಸಲಾಗಿದೆ.

PBKS vs GT: ಐಪಿಎಲ್​​ನಲ್ಲಿಂದು ಮಯಾಂಕ್ vs ಹಾರ್ದಿಕ್: ಗೆಲುವಿನ ಓಟ ಮುಂದುವರೆಸುತ್ತಾ ಗುಜರಾತ್?
PBKS vs GT
Follow us
TV9 Web
| Updated By: Vinay Bhat

Updated on: Apr 08, 2022 | 8:27 AM

15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 16ನೇ ಪಂದ್ಯದಲ್ಲಿ ಇಂದು ನೂತನ ತಂಡವಾದ ಹಾರ್ದಿಕ್ ಪಾಂಡ್ಯ (Hardik Pandya) ನೇತೃತ್ವದ ಗುಜರಾತ್ ಟೈಟಾನ್ಸ್ ತಂಡವು ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ (PBKS vs GT) ತಂಡವನ್ನು ಎದುರಿಸಲಿದೆ. ಈ ಪಂದ್ಯ ಮುಂಬೈನ ಬ್ರಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಹೈವೋಲ್ಟೇಜ್ ಮ್ಯಾಚ್ ನಿರೀಕ್ಷಿಸಲಾಗಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನೂತನ ತಂಡವಾಗಿ ಕಣಕ್ಕಿಳಿದಿರುವ ಗುಜರಾತ್ ಟೈಟನ್ಸ್ ಇಲ್ಲಿಯವರೆಗೂ ಆಡಿರುವ ಎರಡೂ ಪಂದ್ಯಗಳಲ್ಲಿ ಕೂಡ ಗೆಲುವು ಸಾಧಿಸಿದೆ. ಇತ್ತ ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 3 ಪಂದ್ಯಗಳನ್ನಾಡಿರುವ ಮಯಾಂಕ್ ಅಗರ್ವಾಲ್ (Nayank Agarwal) ನಾಯಕತ್ವದ ಪಂಜಾಬ್ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಉಳಿದೊಂದು ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ. ಉಭಯ ತಂಡಗಳಿಗೆ ಈ ಪಂದ್ಯ ಬಹುಮುಖ್ಯವಾಗಿದ್ದು ಯಾವ ಟೀಮ್ ಗೆಲುವು ಸಾಧಿಸುತ್ತೆ ಎಂಬುದು ಕುತೂಹಲ ಕೆರಳಿಸಿದೆ.

ತನ್ನ ಚೊಚ್ಚಲ ಪಂದ್ಯದಲ್ಲಿ ಆರ್‌ಸಿಬಿಯನ್ನು 5 ವಿಕೆಟ್‌ಗಳಿಂದ ಮಣಿಸಿ ಅಭಿಯಾನ ಆರಂಭಿಸಿದ ಪಂಜಾಬ್‌ ಕಿಂಗ್ಸ್‌, ಬಳಿಕ ಕೆಕೆಆರ್‌ ಕೈಯಲ್ಲಿ 6 ವಿಕೆಟ್‌ಗಳ ಸೋಲನುಭವಿ ಸಿತು. 3ನೇ ಮುಖಾಮುಖೀಯಲ್ಲಿ ಚೆನ್ನೈಗೆ 54 ರನ್ನುಗಳ ಸೋಲುಣಿಸಿ ಟ್ರ್ಯಾಕ್‌ ಏರಿತು. ನಾಯಕ ಮಾಯಾಂಕ್‌ ಅಗರ್ವಾಲ್‌, ಶಿಖರ್‌ ಧವನ್‌, ಭನುಕ ರಾಜಪಕ್ಸ, ಲಿಯಮ್‌ ಲಿವಿಂಗ್‌ಸ್ಟೋನ್‌, ಶಾರೂಖ್‌ ಖಾನ್‌, ಒಡೀನ್‌ ಸ್ಮಿತ್‌ ಅವರನ್ನೊಳಗೊಂಡ ಪಂಜಾಬ್‌ ಬ್ಯಾಟಿಂಗ್‌ ಸರದಿ ಅತ್ಯಂತ ಬಲಿಷ್ಠವಾಗಿಯೇ ಗೋಚರಿಸುತ್ತಿದೆ. ಆದರೆ ಚೆನ್ನೈ ಎದುರಿನ ಕೊನೆಯ ಪಂದ್ಯದಲ್ಲಿ ಲಿವಿಂಗ್‌ಸ್ಟೋನ್‌ ಏಕಾಂಗಿ ಯಾಗಿ ಬ್ಯಾಟಿಂಗ್‌ ಹೋರಾಟ ಸಂಘಟಿಸಿದ ಪರಿಣಾಮ ಗೆದ್ದಿತು ಎಂದರೆ ತಪ್ಪಾಗಲಾರದು. ಇದರ ನಡುವೆ ಜಾನಿ ಬೇರ್‌ಸ್ಟೊ ಕೂಡ ಕಣಕ್ಕಿಳಿದರೆ ಪಂಜಾಬ್ ದೊಡ್ಡ ಸ್ಕೋರ್ ಕಲೆಹಾಕುವುದು ಖಚಿತ. ಪಂಜಾಬ್‌ ಬೌಲಿಂಗ್‌ ಕಗಿಸೊ ರಬಾಡ, ರಾಹುಲ್‌ ಚಹರ್‌, ಲಿವಿಂಗ್‌ಸ್ಟೋನ್‌, ಆರ್ಷದೀಪ್‌, ವೈಭವ್‌ ಅರೋರಾ ಅವರನ್ನು ನೆಚ್ಚಿಕೊಂಡಿದೆ. ಇವರೆಲ್ಲರೂ ಚೆನ್ನೈ ವಿರುದ್ಧ ವಿಕೆಟ್‌ ಕೀಳುವಲ್ಲಿ ಯಶಸ್ವಿಯಾಗಿದ್ದರು. ಅದೇ ಲಯದಲ್ಲಿ ಬೌಲಿಂಗ್ ಮುಂದುವರೆಸಬೇಕದೆ.

ಇತ್ತ ಗುಜರಾತ್ ತಂಡದಲ್ಲಿ ಲೂಕಿ ಫರ್ಗ್ಯುಸನ್ ಮತ್ತು ಮೊಹಮ್ಮದ್ ಶಮಿ ಅವರನ್ನೊಳಗೊಂಡ ಉತ್ತಮ ಬೌಲಿಂಗ್ ಪಡೆ ಇದೆ. ಸ್ಪಿನ್ನರ್ ರಶೀದ್ ಖಾನ್ ಮತ್ತು ವರುಣ್ ಆಯರನ್ ಅವರ ಜೊತೆಗೆ ಇದ್ದಾರೆ. ಹಿಂದಿನ ಎರಡು ಗೆಲುವಿನಲ್ಲಿ ಬೌಲರ್‌ಗಳೇ ಪ್ರಮುಖ ಪಾತ್ರವಹಿಸಿದ್ದಾರೆ. ಆರಂಭಿಕನಾಗಿ ಶುಭ್ಮನ್ ಗಿಲ್ ಗಮನಸೆಳೆಯುತ್ತಿದ್ದರೆ, ಅಗ್ರಕ್ರಮಾಂಕದಲ್ಲಿ ವಿಜಯ್ ಶಂಕರ್, ಮ್ಯಾಥ್ಯೂ ವೇಡ್ ಸಾಥ್ ನೀಡಬೇಕಿದೆ. ರಾಹುಲ್ ತೆವಾಟಿಯಾ, ಕನ್ನಡಿಗ ಅಭವಿನ್ ಮನೋಹರ್, ನಾಯಕ ಹಾರ್ದಿಕ್ ಪಾಂಡ್ಯ ಅಬ್ಬರದ ಬ್ಯಾಟಿಂಗ್ ಮೂಲಕ ಬೌಲರ್‌ಗಳಿಗೆ ಅಹಾಯ ಆಗಬೇಕಿದೆ. ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ ಸತತವಾಗಿ ಎರಡೂ ಪಂದ್ಯಗಳಲ್ಲೂ ವಿಲರಾಗಿದ್ದಾರೆ. ಆಲ್ರೌಂಡರ್ ವಿಜಯ್ ಶಂಕರ್‌ರಿಂದ ನಿರೀಕ್ಷಿತ ನಿರ್ವಹಣೆ ಬರುತ್ತಿಲ್ಲ. ಹೀಗಾಗಿ ತಂಡದಲ್ಲಿ ಪ್ರಮುಖ ಬದಲಾವಣೆ ನಿರೀಕ್ಷಿಸಲಾಗಿದೆ.

ಪಿಚ್ ಹೇಗಿದೆ?: ಪಂಜಾಬ್ ಕಿಂಗ್ಸ್ ತನ್ನ ಹಿಂದಿನ ಪಂದ್ಯವನ್ನು ಇದೇ ಮೈದಾನದಲ್ಲಿ ಆಡಿರುವ ಅನುಭವ ಹೊಂದಿದೆ. ಹೀಗಾಗಿ ಗುಜರಾತ್ ಟೈಟಾನ್ಸ್‌ಗಿಂತ ಸ್ವಲ್ಪ ಹೆಚ್ಚು ಪ್ರಯೋಜನವನ್ನು ಪಡೆಯಬಹುದು. ಇನ್ನು ಮುಂಬೈನ ಬ್ರಬೌರ್ನ್ ಕ್ರೀಡಾಂಗಣದ ಪಿಚ್ ಇದುವರೆಗೆ ಬ್ಯಾಟಿಂಗ್‌ಗೆ ಉತ್ತಮವಾಗಿದೆ. ಆದಾಗ್ಯೂ, ಟಾಸ್ ಗೆದ್ದ ನಾಯಕ ಇಲ್ಲಿ ಮೊದಲು ಬೌಲಿಂಗ್ ಆಯ್ಕೆ ಮಾಡುತ್ತಾನೆ ಏಕೆಂದರೆ, ಈ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿ ದೊಡ್ಡ ಮೊತ್ತ ಕಲೆಹಾಕುವುದಕ್ಕಿಂತ ಮೊದಲು ಬೌಲಿಂಗ್ ಮಾಡಿ ನಂತರ ಎದುರಾಳಿ ತಂಡ ನೀಡುವ ಗುರಿಯನ್ನು ಬೆನ್ನಟ್ಟುವುದು ಸುಲಭವಾಗಿದೆ.

ಎರಡೂ ತಂಡಗಳ ಸಂಭಾವ್ಯ ಪ್ಲೇಯಿಂಗ್ XI

ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಮಯಾಂಕ್ ಅಗರ್ವಾಲ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್ಸ್ಟನ್, ಶಾರುಖ್ ಖಾನ್, ಓಡಿಯನ್ ಸ್ಮಿತ್, ಕಗಿಸೊ ರಬಾಡ, ರಾಹುಲ್ ಚಹಾರ್, ವೈಭವ್ ಅರೋರಾ.

ಗುಜರಾತ್ ಟೈಟಾನ್ಸ್: ಶುಭ್ಮನ್ ಗಿಲ್, ಮ್ಯಾಥ್ಯೂ ವೇಡ್, ವಿಜಯ್ ಶಂಕರ್, ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ರಶೀದ್ ಖಾನ್, ವರುಣ್ ಆರೋನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ.

LSG vs DC: ಸಿಕ್ಸ್​ ಸಿಡಿಸಿ ಲಖನೌಗೆ ರೋಚಕ ಜಯ ತಂದುಕೊಟ್ಟ ಜೂನಿಯರ್ ಎಬಿಡಿ ಬದೋನಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ