IPL 2024: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಕಾಲೆಳೆದ ಪಂಜಾಬ್ ಕಿಂಗ್ಸ್ ಓನರ್..!
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಚಂಡೀಗಢ್ನಲ್ಲಿ ನಡೆಯಲಿರುವ ಈ ಪಂದ್ಯವು ಮಧ್ಯಾಹ್ನ 3.30 ರಿಂದ ಶುರುವಾಗಲಿದೆ. ಇನ್ನು ರಾತ್ರಿ 7.30 ರಿಂದ ಆರಂಭವಾಗಲಿರುವ ಮೂರನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಕಣಕ್ಕಿಳಿಯಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2024) ಕಪ್ ಗೆಲ್ಲದ ಮೂರು ತಂಡಗಳೆಂದರೆ ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು. ಈ ಮೂರು ತಂಡಗಳು ಕಳೆದ 16 ಸೀಸನ್ಗಳಿಂದ ಐಪಿಎಲ್ ಆಡುತ್ತಿದ್ದರೂ ಟ್ರೋಫಿ ಮರೀಚಿಕೆಯಾಗಿಯೇ ಉಳಿದಿದೆ. ಇದಾಗ್ಯೂ ಪರಸ್ಪರ ಟ್ರೋಲ್ ವಿಷಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಹಿಂದೆ ಬಿದ್ದಿಲ್ಲ.
ಇದಕ್ಕೆ ಸಾಕ್ಷಿಯಾಗಿ ಇದೀಗ ಡ್ರೀಮ್ 11 ಕೂಡ ಹೊಸ ಜಾಹೀರಾತು ಪ್ರಕಟಿಸಿದೆ. ಈ ಜಾಹೀರಾತಿನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಸಹ ಮಾಲಕಿ ಪ್ರೀತಿ ಝಿಂಟಾ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಕಾಣಿಸಿಕೊಂಡಿದ್ದಾರೆ.
ವಿಭಿನ್ನವಾಗಿ ಚಿತ್ರೀಕರಿಸಲಾಗಿರುವ ಈ ಜಾಹೀರಾತಿನಲ್ಲಿ ರಿಷಭ್ ಪಂತ್ ತಮ್ಮ ಕಾರಿಗಾಗಿ ಕಾಯುತ್ತಿರುತ್ತಾರೆ. ಇದೇ ವೇಳೆ ಚಕ್ ದೆ ಪಂಜಾಬ್ ಸ್ಟಿಕ್ಕರಿಂಗ್ ಮಾಡಿರುವ ಕಾರಿನಲ್ಲಿ ಪ್ರೀತಿ ಝಿಂಟಾ ಎಂಟ್ರಿ ಕೊಡುತ್ತಾರೆ. ಈ ವೇಳೆ ನನ್ನ ಕಾರನ್ನು ನೀವೇನು ಮಾಡಿದ್ರಿ ಎಂದು ಪಂತ್ ಕೇಳುತ್ತಾರೆ.
ಇದು ಸೋತವರ ಕಾರ್ ಆಗಿತ್ತು. ಇದೀಗ ಗೆದ್ದವರ ಕಾರ್ ಆಗಿ ಬದಲಿಸಿದ್ದೇನೆ ಎಂದೇಳಿ ಪ್ರೀತಿ ಝಿಂಟಾ ಮುಂದೋಗುತ್ತಾರೆ. ಈ ವೇಳೆ ಪಂಜಾಬ್ ಕಿಂಗ್ಸ್ ಯಾವಾಗ ಕಪ್ ಗೆದ್ದಿದೆ ಎಂದು ರಿಷಭ್ ಪಂತ್ ಅಶ್ಚರ್ಯ ವ್ಯಕ್ತಪಡಿಸುತ್ತಾರೆ.
ಇಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇನ್ನೂ ಸಹ ಐಪಿಎಲ್ ಟ್ರೋಫಿ ಗೆದ್ದಿಲ್ಲ ಎಂದು ನಾಯಕ ರಿಷಭ್ ಪಂತ್ ಅವರನ್ನು ಪಂಜಾಬ್ ಕಿಂಗ್ಸ್ ಮಾಲಕಿ ಕಾಲೆಳೆಯುವುದನ್ನು ತೋರಿಸಲಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Car toh bas shuruaat hai @RishabhPant17, Punjab ke flags har jagah dekhne ke liye taiyyar hoja! 😎 . .#Ad #Dream11 #TeamSeBadaKuchNahi pic.twitter.com/jetQvhnUzw
— Preity G Zinta (@realpreityzinta) March 20, 2024
ಶುಭಾರಂಭದ ನಿರೀಕ್ಷೆಯಲ್ಲಿ ಡೆಲ್ಲಿ-ಪಂಜಾಬ್:
ಶನಿವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2024ರ 2ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಉಭಯ ತಂಡಗಳು ಇದುವರೆಗೆ ಐಪಿಎಲ್ ಟ್ರೋಫಿ ಗೆದ್ದಿಲ್ಲ. ಇದೀಗ 17ನೇ ಸೀಸನ್ ಅನ್ನು ಭರ್ಜರಿಯಾಗಿ ಆರಂಭಿಸಲು ಉಭಯ ತಂಡಗಳು ಸಜ್ಜಾಗಿ ನಿಂತಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಯಾರಿಗೆ ವಿಜಯಲಕ್ಷ್ಮಿ ಒಲಿಯಲಿದೆ ಕಾದು ನೋಡಬೇಕಿದೆ.
ಇದನ್ನೂ ಓದಿ: IPL 2024: RCB ವಿರುದ್ಧ ಅಬ್ಬರಿಸುವ ಶಿವಂ ದುಬೆ: ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು
ಚಂಡೀಗಢ್ನ ಮಹಾರಾಜ ಯದವೀಂದ್ರ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಮಧ್ಯಾಹ್ನ 3.30 ರಿಂದ ಶುರುವಾಗಲಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಿದರೆ, ಪಂಜಾಬ್ ಕಿಂಗ್ಸ್ ತಂಡವು ಶಿಖರ್ ಧವನ್ ಸಾರಥ್ಯದಲ್ಲಿ ಕಣಕ್ಕಿಳಿಯಲಿದೆ.