AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೂ ಉಂಟೆ… ಸೋತ ದಿನವೇ ಫೈನಲ್​ಗೇರಿದ RCB ಮತ್ತು ಪಂಜಾಬ್ ಕಿಂಗ್ಸ್

IPL 2025 MI vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 203 ರನ್ ಕಲೆಹಾಕಿದರೆ, ಈ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡ 19 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಪಂಜಾಬ್ ಪಡೆ 11 ವರ್ಷಗಳ ಬಳಿಕ ಫೈನಲ್​ಗೇರಿದೆ.

ಹೀಗೂ ಉಂಟೆ... ಸೋತ ದಿನವೇ ಫೈನಲ್​ಗೇರಿದ RCB ಮತ್ತು ಪಂಜಾಬ್ ಕಿಂಗ್ಸ್
Rcb Vs Pbks
ಝಾಹಿರ್ ಯೂಸುಫ್
|

Updated on: Jun 02, 2025 | 9:04 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲಿಸ್ಟ್​ಗಳು ಕನ್​ಫರ್ಮ್ ಆಗಿದೆ. ಈ ಬಾರಿಯ ಐಪಿಎಲ್​ ಬಿಗ್ ಫೈಟ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಆರ್​ಸಿಬಿ 9 ವರ್ಷಗಳ ಬಳಿಕ ಫೈನಲ್​ಗೇರಿದರೆ, ಪಂಜಾಬ್ ಕಿಂಗ್ಸ್ 11 ವರ್ಷಗಳ ಬಳಿಕ ಫೈನಲ್ ಪಂದ್ಯವಾಡಲು ಸಜ್ಜಾಗುತ್ತಿದೆ.

ಇದಕ್ಕೂ ಮುನ್ನ ಆರ್​ಸಿಬಿ ತಂಡವು ಫೈನಲ್ ಆಡಿದ್ದು 2016 ರಲ್ಲಿ. ಮೇ 29 ರಂದು ನಡೆದ ಐಪಿಎಲ್ ಫೈನಲ್​ನಲ್ಲಿ ರಾಯಲ್ ಪಡೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 8 ರನ್​ಗಳಿಂದ ಸೋಲನುಭವಿಸಿ ಚೊಚ್ಚಲ ಟ್ರೋಫಿ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದರು.

ಕುತೂಹಲಕಾರಿ ವಿಷಯ ಎಂದರೆ ಈ ಸೋಲಿನ ಬಳಿಕ ಆರ್​ಸಿಬಿ ತಂಡವು ಒಮ್ಮೆಯೂ ಫೈನಲ್​ಗೇರಿರಲಿಲ್ಲ. ಆದರೆ ಮೇ 29 ರಂದು ಐಪಿಎಲ್ 2025ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿ ಪಡೆ ಮತ್ತೊಮ್ಮೆ ಫೈನಲ್​ಗೆ ಲಗ್ಗೆಯಿಟ್ಟಿತ್ತು. ಅಂದರೆ 2016 ರಲ್ಲಿ ಮೇ 29 ರಂದು ನಡೆದ ಫೈನಲ್​ನಲ್ಲಿ ಸೋತಿದ್ದ ಆರ್​ಸಿಬಿ, 2025ರ ಮೇ 29 ರಂದೇ ಫೈನಲ್​ಗೇರುವಲ್ಲಿ ಯಶಸ್ವಿಯಾಗಿತ್ತು.

ಇತ್ತ ಪಂಜಾಬ್ ಕಿಂಗ್ಸ್ ತಂಡ ಕೊನೆಯ ಬಾರಿ ಫೈನಲ್ ಆಡಿದ್ದ 2014 ರಲ್ಲಿ. ಜೂನ್ 1 ರಂದು ನಡೆದ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಸೋಲನುಭವಿಸಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಅವಕಾಶವನ್ನು ಕೈಚೆಲ್ಲಿಕೊಂಡಿದ್ದರು. ಆ ಬಳಿಕ ಪಂಜಾಬ್ ಕಿಂಗ್ಸ್ ಪಾಲಿಗೆ ಪ್ಲೇಆಫ್ ಎಂಬುದೇ ಮರೀಚಿಕೆಯಾಗಿತ್ತು.

ಆದರೆ ಈ ಬಾರಿ ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಕಣಕ್ಕಿಳಿದ ಪಂಜಾಬ್ ಕಿಂಗ್ಸ್ ತಂಡವು ಭರ್ಜರಿ ಪ್ರದರ್ಶನ ನೀಡಿದೆ. ಅಲ್ಲದೆ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿ ಫೈನಲ್​ಗೆ ಪ್ರವೇಶಿಸಿದೆ. ಕಾಕತಾಳೀಯ ಎಂಬಂತೆ ಪಂಜಾಬ್ ಕಿಂಗ್ಸ್ ಕೂಡ ಫೈನಲ್​ಗೆ ಪ್ರವೇಶಿಸಿದ್ದು ಜೂನ್ 1 ರಂದು ನಡೆದ ಪಂದ್ಯದ ಮೂಲಕ. ಅಂದರೆ 2014 ರಲ್ಲಿ ಪಂಜಾಬ್ ಕಿಂಗ್ಸ್ ಜೂನ್ 1 ರಂದು ಫೈನಲ್ ಪಂದ್ಯವಾಡಿತ್ತು.

ಇದೀಗ 11 ವರ್ಷಗಳ ಬಳಿಕ ಜೂನ್ 1 ರಂದು ನಡೆದ ಪಂದ್ಯದ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಮತ್ತೊಮ್ಮೆ ಫೈನಲ್​ಗೆ ಪ್ರವೇಶಿಸಿದೆ. ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಫೈನಲ್ ಸೋತ ದಿನವೇ ಮತ್ತೆ ಫೈನಲ್​ಗೇರುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: ಮುಂಬೈ ಇಂಡಿಯನ್ಸ್​ ತಂಡದ 17 ವರ್ಷಗಳ ದಾಖಲೆಗೆ ಬ್ರೇಕ್ ಹಾಕಿದ ಪಂಜಾಬ್ ಕಿಂಗ್ಸ್

ಇದೀಗ ಉಭಯ ತಂಡಗಳು ಚೊಚ್ಚಲ ಟ್ರೋಫಿಯನ್ನು ಎದುರು ನೋಡುತ್ತಿದ್ದು, ಹೀಗಾಗಿ ಜೂನ್ 3 ರಂದು ಒಂದು ತಂಡ ಹೊಸ ಇತಿಹಾಸ ಬರೆಯುವುದು ನಿಶ್ಚಿತ.

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ