Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ನಮ್ಮ ಟೆನ್ಷನ್… ರಿಷಭ್ ಪಂತ್​ನ ಟ್ರೋಲ್ ಮಾಡಿದ ಪಂಜಾಬ್ ಕಿಂಗ್ಸ್​

Lucknow Super Giants vs Punjab Kings: ಐಪಿಎಲ್​ನ (IPL 2025) 13ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 16.2 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 177 ರನ್ ಬಾರಿಸಿ 8 ವಿಕೆಟ್​ಗಳ ಅಮೋಘ ಜಯ ಸಾಧಿಸಿದೆ.

IPL 2025: ನಮ್ಮ ಟೆನ್ಷನ್... ರಿಷಭ್ ಪಂತ್​ನ ಟ್ರೋಲ್ ಮಾಡಿದ ಪಂಜಾಬ್ ಕಿಂಗ್ಸ್​
Rishabh Pant - Shreyas Iyer
Follow us
ಝಾಹಿರ್ ಯೂಸುಫ್
|

Updated on: Apr 02, 2025 | 2:09 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18ರ 13ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (Punjab Kings) ತಂಡ ಭರ್ಜರಿ ಜಯ ಸಾಧಿಸಿದೆ. ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಪಡೆಯ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 171 ರನ್ ಕಲೆಹಾಕಿದ್ದರು.

172 ರನ್​ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ಪರ ಪ್ರಭ್​ಸಿಮ್ರಾನ್ ಸಿಂಗ್ 69 ರನ್ ಬಾರಿಸಿದರೆ, ನಾಯಕ ಶ್ರೇಯಸ್ ಅಯ್ಯರ್ ಅಜೇಯ 52 ರನ್ ಸಿಡಿಸಿದರು. ಈ ಮೂಲಕ ಕೇವಲ 16.2 ಓವರ್​ಗಳಲ್ಲಿ 177 ರನ್ ಬಾರಿಸಿ ಪಂಜಾಬ್ ಕಿಂಗ್ಸ್ ತಂಡವು 8 ವಿಕೆಟ್​ಗಳ ಜಯ ಸಾಧಿಸಿದೆ.

ಇದನ್ನೂ ಓದಿ
Image
ಯುಜ್ವೇಂದ್ರ ಚಹಲ್-ಧನಶ್ರೀ ವರ್ಮಾ ವಿಚ್ಛೇದನಕ್ಕೆ ಇದುವೇ ಅಸಲಿ ಕಾರಣ
Image
RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್
Image
David Warner: ಡೇವಿಡ್ ವಾರ್ನರ್​ಗೆ ಒಲಿದ ನಾಯಕತ್ವ..!
Image
VIDEO: ಎಂಎಸ್ ಧೋನಿ ಎಂಟ್ರಿಗೆ ಕಿವಿ ಮುಚ್ಚಿ ಕೂತ ನೀತಾ ಅಂಬಾನಿ

ರಿಷಭ್ ಪಂತ್​ನ ಟ್ರೋಲ್ ಮಾಡಿದ ಪಂಜಾಬ್ ಕಿಂಗ್ಸ್:

ಈ ಗೆಲುವಿನ ಬೆನ್ನಲ್ಲೇ ಪಂಜಾಬ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಅವರನ್ನು ಟ್ರೋಲ್ ಮಾಡಿರುವುದು ವಿಶೇಷ. ಸೋಷಿಯಲ್ ಮೀಡಿಯಾದಲ್ಲಿ, ನಮ್ಮ ಟೆನ್ಷನ್ ಐಪಿಎಲ್ ಹರಾಜಿನಲ್ಲಿಯೇ ಕೊನೆಗೊಂಡಿತ್ತು ಎನ್ನುವ ಪೋಸ್ಟ್ ಹಂಚಿಕೊಳ್ಳುವ ಮೂಲಕ ಪಂಜಾಬ್ ಕಿಂಗ್ಸ್ ಅಡ್ಮಿನ್ ಪಂತ್ ಅವರ ಕಾಲೆಳೆದಿದ್ದಾರೆ.

ಇಂತಹದೊಂದು ಪೋಸ್ಟ್ ಹಂಚಿಕೊಳ್ಳಲು ಮುಖ್ಯ ಕಾರಣ ಈ ಹಿಂದೆ ರಿಷಭ್ ಪಂತ್ ನೀಡಿರುವ ಹೇಳಿಕೆ. ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಪಂತ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್​ ಫ್ರಾಂಚೈಸಿ ಖರೀದಿಸಿದ್ದರು.

ಇದನ್ನೂ ಓದಿ: IPL 2025: ಬ್ಯಾನ್ ಬ್ಯಾನ್ ಬ್ಯಾನ್… ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ

27 ಕೋಟಿ ರೂ.ಗೆ ಲಕ್ನೋ ಸೂಪರ್ ಜೈಂಟ್ಸ್ ಪಾಲಾಗಿದ್ದ ಪಂತ್ ಸಂದರ್ಶನವೊಂದರಲ್ಲಿ,  ಐಪಿಎಲ್ ಹರಾಜಿನಲ್ಲಿ ನನಗೆ ಒಂದೇ ಒಂದು ಟೆನ್ಷನ್ ಇತ್ತು. ಅದು ಪಂಜಾಬ್ ಎಂದು ನಗಾಡಿದ್ದರು. ಅಂದರೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ನನ್ನನ್ನು ಖರೀದಿಸುತ್ತಾರೆ ಎಂಬ ಭಯ ನನ್ನಲ್ಲಿತ್ತು ರಿಷಭ್ ಪಂತ್ ಹೇಳಿದ್ದರು.

ಪಂಜಾಬ್ ಕಿಂಗ್ಸ್ ಟ್ರೋಲ್ ಪೋಸ್ಟ್:

ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಅವರ ತವರಿನಲ್ಲೇ ಮಣಿಸಿ ಪಂಜಾಬ್ ಕಿಂಗ್ಸ್ ಮೇಲುಗೈ ಸಾಧಿಸಿದೆ. ಇದರ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಅವರ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಮ್ಮ ಟೆನ್ಷನ್ ಐಪಿಎಲ್ ಹರಾಜಿನಲ್ಲಿಯೇ ಕೊನೆಗೊಂಡಿತ್ತು ಎಂದು ಪಂಜಾಬ್ ಕಿಂಗ್ಸ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದೆ.  ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕನಾದ ಬಳಿಕ ರಿಷಭ್ ಪಂತ್ ನೀಡಿದ್ದ ಹೇಳಿಕೆಗೆ ಪಂಜಾಬ್ ಕಿಂಗ್ಸ್ ಟ್ರೋಲ್ ಮೂಲಕ ಉತ್ತರ ನೀಡಿದ್ದಾರೆ.

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ