Quinton de Kock: KKR vs LSG ಪಂದ್ಯದಲ್ಲಿ ಸಿಡಿಯಿತು ಬರೋಬ್ಬರಿ 27 ಸಿಕ್ಸರ್: ರೋಚಕ ಪಂದ್ಯದ ವಿಡಿಯೋ ಇಲ್ಲಿದೆ

KKR vs LSG, IPL 2022: ಕೋಲ್ಕತ್ತಾ ನೈಟ್ ರೈಡರ್ಸ್​​ ವಿರುದ್ಧ ಲಖನೌ ಸೂಪರ್ ಜೇಂಟ್ಸ್ ತಂಡ 2 ರನ್​ಗಳ ರೋಚಕ ಜಯ ಸಾಧಿಸಿತು. ಈ ಮೂಲಕ ಎಲ್​ಎಸ್​​ಜಿ ಪ್ಲೇ ಆಫ್​ಗೆ ಕ್ವಾಲಿಫೈ ಆದ ಎರಡನೇ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೆ ಕಾರಣ ಕ್ವಿಂಟನ್ ಡಿಕಾಕ್ ಹಾಗೂ ಕೆಎಲ್ ರಾಹುಲ್ ಅವರ ದ್ವಿಶತಕದ ದಾಖಲೆಯ ಜೊತೆಯಾಟ

Quinton de Kock: KKR vs LSG ಪಂದ್ಯದಲ್ಲಿ ಸಿಡಿಯಿತು ಬರೋಬ್ಬರಿ 27 ಸಿಕ್ಸರ್: ರೋಚಕ ಪಂದ್ಯದ ವಿಡಿಯೋ ಇಲ್ಲಿದೆ
Quinton de Kock, KL Rahul and Rinku Sinfg
Follow us
TV9 Web
| Updated By: Vinay Bhat

Updated on:May 19, 2022 | 3:16 PM

ಡಾ. ಡಿವೈ ಪಾಟಿಲ್ ಸ್ಪೋರ್ಟ್ಸ್​​ ಅಕಾಡೆಮಿಯಲ್ಲಿ ನಡೆದ ಐಪಿಎಲ್ 2022ರ 66ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್​​ ವಿರುದ್ಧ ಲಖನೌ ಸೂಪರ್ ಜೇಂಟ್ಸ್ (KKR vs LSG) ತಂಡ 2 ರನ್​ಗಳ ರೋಚಕ ಜಯ ಸಾಧಿಸಿತು. ಕೊನೆಯ ಎಸೆತದ ವರೆಗೂ ತುದಿಗಾಲಿನಲ್ಲಿ ನಿಲ್ಲಿಸಿದ ಪಂದ್ಯವನ್ನು ಅಂತಿಮ ಹಂತದಲ್ಲಿ ರಾಹುಲ್ ಬಳಗ ಬಾಜಿಕೊಂಡಿತು. ಈ ಮೂಲಕ ಎಲ್​ಎಸ್​​ಜಿ ಪ್ಲೇ ಆಫ್​ಗೆ ಕ್ವಾಲಿಫೈ ಆದ ಎರಡನೇ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೆ ಕಾರಣ ಕ್ವಿಂಟನ್ ಡಿಕಾಕ್ (Quinton de Kock) ಹಾಗೂ ಕೆಎಲ್ ರಾಹುಲ್ ಅವರ ದ್ವಿಶತಕದ ದಾಖಲೆಯ ಜೊತೆಯಾಟ. ಇತ್ತ ಕೆಕೆಆರ್ ಪರ ರಿಂಕು ಸಿಂಗ್ (Rinku Singh) ಹಾಗೂ ಸುನಿಲ್ ನರೈನ್ ಅಂತಿಮ ಹಂತದಲ್ಲಿ ಬಂದು ತಂಡದ ಗೆಲುವಿಗೆ ಫೋರ್- ಸಿಕ್ಸರ್​ಗಳನ್ನು ಸಿಡಿಸಿ ಸ್ಫೋಟಕ ಬ್ಯಾಟಿಂಗ್ ನಡೆಸಿದರೂ ಯಾವುದೇ ಪ್ರಯೋಜನ ಆಗಲಿಲ್ಲ. ಐಪಿಎಲ್ 2022 ರಿಂದ ಕೋಲ್ಕತ್ತಾ ಮೂರನೇ ತಂಡವಾಗಿ ಹೊರಬಿದ್ದಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಬರೋಬ್ಬರಿ 27 ಸಿಕ್ಸರ್​ಗಳು ಮೂಡಿಬಂದವು.

ಮೊದಲು ಬ್ಯಾಟಿಂಗ್ ಮಾಡಿದ ಲಖನೌ ಸೂಪರ್ ಜೇಂಟ್ಸ್ ಯಾವುದೇ ವಿಕೆಟ್ ಕಳೆದುಕೊಳ್ಳದೇ 20 ಓವರ್‌ಗಳಲ್ಲಿ ಬರೋಬ್ಬರಿ 210 ರನ್ ಬಾರಿಸಿತು. ಇದು ಐಪಿಎಲ್​ನಲ್ಲಿ ನೂತನ ದಾಖಲೆ ಕೂಡ ಆಯಿತು. ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಮತ್ತು ಕ್ವಿಂಟನ್ ಡಿಕಾಕ್ ವಿಕೆಟ್ ಒಪ್ಪಸದೇ ಅಬ್ಬರಿಸಿದರು. ಡಿ ಕಾಕ್ ಕೇವಲ 70 ಎಸೆತಗಳಲ್ಲಿ ಅಜೇಯ 140 ರನ್ ಬಾರಿಸಿದರೆ, ಕೆಎಲ್ ರಾಹುಲ್ 51 ಎಸೆತಗಳಲ್ಲಿ 68 ರನ್ ಕಲೆಹಾಕಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ನೂತನ ಇತಿಹಾಸ ಬರೆದರು. ಇದು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ತಂಡವೊಂದರ ಆರಂಭಿಕ ಜೋಡಿ ಕಲೆಹಾಕಿರುವ ಅತ್ಯಧಿಕ ರನ್ ಆಗಿದೆ.

ಈ ಹಿಂದೆ ಜಾನಿ ಬೈರ್ಸ್ಟೋವ್‌ ಹಾಗೂ ಡೇವಿಡ್‌ ವಾರ್ನರ್‌, 2019ರಲ್ಲಿ ಆರ್‌ಸಿಬಿ ವಿರುದ್ಧ ಗಳಿಸಿದ್ದ 185 ರನ್‌ಗಳು ಐಪಿಎಲ್‌ನಲ್ಲಿ ಆರಂಭಿಕ ವಿಕೆಟ್‌ಗೆ ದಾಖಲಾದ ಅತ್ಯಧಿಕ ರನ್‌ಗಳ ಜೊತೆಯಾಟವಾಗಿತ್ತು. ಈ ಪಂದ್ಯದಲ್ಲಿ ಲಖನೌ 20 ಓವರ್​ಗೆ ಯಾವುದೇ ವಿಕೆಟ್ ಕಳೆದುಕೊಳ್ಳದೆ 210 ರನ್ ಚಚ್ಚಿತು. ಡಿಕಾಕ್ ಬ್ಯಾಟ್​ನಿಂದ 10 ಫೋರ್ ಮತ್ತು 10 ಸಿಕ್ಸರ್​ಗಳು ಬಂದರೆ, ರಾಹುಲ್ ಅವರು 3 ಫೋರ್ ಮತ್ತು 4 ಸಿಕ್ಸರ್ ಸಿಡಿಸಿದರು. ಈ ರೋಚಕ ಪಂದ್ಯದ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ
Image
KKR vs LSG Highlights, IPL 2022: ರೋಚಕ ಪಂದ್ಯದಲ್ಲಿ ಸೋತ ಕೆಕೆಆರ್; ಪ್ಲೇ ಆಫ್​ಗೆ ಲಕ್ನೋ ಎಂಟ್ರಿ
Image
IPL 2022: RCB ಗೆ ಪ್ಲೇಆಫ್​ ಪ್ರವೇಶಿಸಲು ಇರುವುದು ಮೂರೇ ದಾರಿ..!
Image
IPL 2022: ಟಿ20 ಕ್ರಿಕೆಟ್​ನಲ್ಲಿ ಈ ದಾಖಲೆ ಬರೆದ ಭಾರತದ ಮೊದಲ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ..!
Image
IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್

IBA Womens World Boxing Championships: ಬ್ರೆಜಿಲ್ ಬಾಕ್ಸರ್ ಮಣಿಸಿ ಫೈನಲ್‌ ಪ್ರವೇಶಿಸಿದ ನಿಖತ್ ಜರೀನ್..!

ಇತ್ತ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಬೃಹತ್ ಮೊತ್ತ ಬೆನ್ನಟ್ಟಿದ ಕೆಕೆಆರ್ ಆರಂಭ ಉತ್ತಮವಾಗಿರಲಿಲ್ಲ. ತಂಡವು 9 ರನ್ ಗಳಿಸುವುದರೆಡೆಗೆ ಆರಂಭಿಕರಾದ ವೆಂಕಟೇಶ್ ಅಯ್ಯರ್ (0) ಹಾಗೂ ಅಭಿಜಿತ್ ತೋಮರ್ (4) ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ಹಂತದಲ್ಲಿ ಜೊತೆಗೂಡಿದ ನಾಯಕ ಶ್ರೇಯಸ್ ಅಯ್ಯರ್ ಹಾಗೂ ನಿತೀಶ್ ರಾಣಾ ಆಕ್ರಮಣಕಾರಿ ಆಟವಾಡುವ ಮೂಲಕ ತಿರುಗೇಟು ನೀಡಿದರು. 22 ಎಸೆತಗಳನ್ನು ಎದುರಿಸಿದ ರಾಣಾ ಒಂಬತ್ತು ಬೌಂಡರಿಗಳ ನೆರವಿನಿಂದ 42 ರನ್ ಗಳಿಸಿದರು. ಬಳಿಕ ಸ್ಯಾಮ್ ಬಿಲ್ಲಿಂಗ್ಸ್ ಜೊತೆ ಸೇರಿದ ಅಯ್ಯರ್ ಆಕ್ರಮಣಕಾರಿ ಆಟವನ್ನು ಮುಂದುವರಿಸಿದರು. ಅಲ್ಲದೆ 28 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು.

ಆದರೆ ಫಿಫ್ಟಿ ಬೆನ್ನಲ್ಲೇ ಔಟ್ ಆದರು. 29 ಎಸೆತಗಳನ್ನು ಎದುರಿಸಿದ ಅಯ್ಯರ್ 4 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 50 ರನ್ ಗಳಿಸಿದರು. ಸ್ಯಾಮ್ ಬಿಲ್ಲಿಂಗ್ಸ್ 36 ರನ್‌ಗಳ ಕಾಣಿಕೆ ನೀಡಿದರು. ರಸೆಲ್ (5) ನಿರಾಸೆ ಮೂಡಿಸಿದರು. ಕೊನೆಯ ಹಂತದಲ್ಲಿ ರಿಂಕು ಸಿಂಗ್ ಹಾಗೂ ಸುನಿಲ್ ನಾರಾಯಣ್, 19 ಎಸೆತಗಳಲ್ಲಿ 58 ರನ್‌ಗಳ ಜೊತೆಯಾಟ ನೀಡುವ ಮೂಲಕ ಪಂದ್ಯವನ್ನು ರೋಚಕ ಹಂತಕ್ಕೆ ತಲುಪಿಸಿದರು. ಪರಿಣಾಮ ಅಂತಿಮ ಓವರ್‌ನಲ್ಲಿ ಗೆಲುವಿಗೆ 21 ರನ್ ಬೇಕಾಗಿತ್ತು. ಮಾರ್ಕಸ್ ಸ್ಟೋಯಿನಿಸ್ ಎಸೆದ ಇನ್ನಿಂಗ್ಸ್‌ನ ಅಂತಿಮ ಓವರ್‌ನಲ್ಲಿ ಎವಿನ್ ಲೂಯಿಸ್ ಅದ್ಭುತ ಕ್ಯಾಚ್ ಹಿಡುವ ಮೂಲಕ ರಿಂಕು ಸಿಂಗ್ ಅವರನ್ನು ಔಟ್ ಮಾಡಲು ನೆರವಾದರು. ಇದರೊಂದಿಗೆ ಕೆಕೆಆರ್ ಗೆಲುವಿನ ಕನಸು ಕಮರಿತು. 15 ಎಸೆತಗಳನ್ನು ಎದುರಿಸಿದ ರಿಂಕು, 4 ಸಿಕ್ಸರ್ ಹಾಗೂ 2 ಬೌಂಡರಿ ನೆರವಿನಿಂದ 40 ರನ್ ಗಳಿಸಿದರು. ಸುನಿಲ್ ನಾರಾಯಣ್ ಅಜೇಯ 21 ರನ್ ಗಳಿಸಿದರು. ಕೆಕೆಆರ್ 20 ಓವರ್​ಗೆ 8 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿತು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:00 am, Thu, 19 May 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್