ಟೀಮ್ ಇಂಡಿಯಾಗೆ ಸುಂದರ್, ಅಶ್ವಿನ್ ಆಯ್ಕೆ: ವಿಶ್ವಕಪ್​ ತಂಡದಲ್ಲಿ ಬದಲಾವಣೆ ಸಾಧ್ಯತೆ

India Squad: ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಏಕದಿನ ಪಂದ್ಯಗಳಿಂದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರರು ವಿಶ್ರಾಂತಿಯ ಕಾರಣ ಹೊರಗುಳಿದಿದ್ದಾರೆ. ಹೀಗಾಗಿ ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ ವಿಶ್ವಕಪ್​ಗೆ ಆಯ್ಕೆಯಾಗಿರುವ ಬಳಗವನ್ನೇ ಇಲ್ಲಿ ಮೂರನೇ ಏಕದಿನ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ.

ಟೀಮ್ ಇಂಡಿಯಾಗೆ ಸುಂದರ್, ಅಶ್ವಿನ್ ಆಯ್ಕೆ: ವಿಶ್ವಕಪ್​ ತಂಡದಲ್ಲಿ ಬದಲಾವಣೆ ಸಾಧ್ಯತೆ
Sundar - Ashwin
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 18, 2023 | 10:07 PM

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗಾಗಿ ಆಯ್ಕೆ ಮಾಡಲಾದ ತಂಡದಲ್ಲಿ ಆಲ್​ರೌಂಡರ್​ಗಳಾದ ರವಿಚಂದ್ರನ್ ಅಶ್ವಿನ್ ಹಾಗೂ ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದಿದ್ದಾರೆ. ಇದರೊಂದಿಗೆ ಏಕದಿನ ವಿಶ್ವಕಪ್ ಭಾರತ ತಂಡದಲ್ಲೂ ಬದಲಾವಣೆ ಕಂಡು ಬರುವ ಸಾಧ್ಯತೆ ಹೆಚ್ಚಾಗಿದೆ. ಏಕೆಂದರೆ ಈ ಇಬ್ಬರು ಆಟಗಾರರು ಈ ಹಿಂದೆ ಆಯ್ಕೆ ಮಾಡಲಾದ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ಅಷ್ಟೇ ಅಲ್ಲದೆ ಏಷ್ಯಾಕಪ್ ತಂಡದಲ್ಲೂ ಕಾಣಿಸಿಕೊಂಡಿರಲಿಲ್ಲ.

ಏಷ್ಯಾಕಪ್​ನ ಸೂಪರ್-4 ಹಂತದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದದಲ್ಲಿ ಟೀಮ್ ಇಂಡಿಯಾ ಆಲ್​ರೌಂಡರ್ ಅಕ್ಷರ್ ಪಟೇಲ್ ಗಾಯಗೊಂಡಿದ್ದರು. ಹೀಗಾಗಿ ಬದಲಿ ಆಟಗಾರನಾಗಿ ವಾಷಿಂಗ್ಟನ್ ಸುಂದರ್ ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಸುಂದರ್ ಅವರನ್ನೇ ಉಳಿಸಿಕೊಳ್ಳಲಾಗಿದೆ. ಇದರ ಜೊತೆಗೆ ರವಿಚಂದ್ರನ್ ಅಶ್ವಿನ್ ಅವರನ್ನು ಆಯ್ಕೆ ಮಾಡಿರುವುದು ವಿಶೇಷ.

ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಏಕದಿನ ಪಂದ್ಯಗಳಿಂದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಆಟಗಾರರು ವಿಶ್ರಾಂತಿಯ ಕಾರಣ ಹೊರಗುಳಿದಿದ್ದಾರೆ. ಹೀಗಾಗಿ ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ ವಿಶ್ವಕಪ್​ಗೆ ಆಯ್ಕೆಯಾಗಿರುವ ಬಳಗವನ್ನೇ ಇಲ್ಲಿ ಮೂರನೇ ಏಕದಿನ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ. ಇದರಲ್ಲಿ ಹೆಚ್ಚುವರಿ ಆಟಗಾರರಾಗಿ ರವಿಚಂದ್ರನ್ ಅಶ್ವಿನ್ ಹಾಗೂ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡಿದ್ದಾರೆ.

ಇಲ್ಲಿ ಅಕ್ಷರ್ ಪಟೇಲ್ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡರೆ ಮಾತ್ರ ಮೂರನೇ ಏಕದಿನ ಪಂದ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಒಂದು ವೇಳೆ ಅವರು ಹೊರಗುಳಿದರೆ ಏಕದಿನ ವಿಶ್ವಕಪ್ ತಂಡದಿಂದಲೂ ಹೊರಬೀಳುವ ಸಾಧ್ಯತೆಯಿದೆ. ಹೀಗಾಗಿಯೇ ಅಶ್ವಿನ್ ಹಾಗೂ ಸುಂದರ್ ಅವರನ್ನು ಹೆಚ್ಚುವರಿಯಾಗಿ ಆಯ್ಕೆ ಮಾಡಲಾಗಿದೆ. ಇವರಿಬ್ಬರಲ್ಲಿ ಯಾರು ಉತ್ತಮ ಪ್ರದರ್ಶನ ನೀಡುತ್ತಾರೊ ಅವರಿಗೆ ಏಕದಿನ ವಿಶ್ವಕಪ್ ತಂಡದಲ್ಲಿ ಚಾನ್ಸ್ ಸಿಗುವ ಸಾಧ್ಯತೆಯಿದೆ.

15 ಸದಸ್ಯರ ಬಳಗ:

ಏಕದಿನ ವಿಶ್ವಕಪ್​ಗಾಗಿ ಆರಿಸಲಾದ 15 ಸದಸ್ಯರ ತಂಡವನ್ನೇ ಆಸ್ಟ್ರೇಲಿಯಾ ವಿರುದ್ಧದ 3ನೇ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ. ಇಲ್ಲಿ 15 ಆಟಗಾರರ ಜೊತೆಗೆ ಹೆಚ್ಚುವರಿಯಾಗಿ ರವಿಚಂದ್ರನ್ ಅಶ್ವಿನ್ ಹಾಗೂ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡಿರುವುದು ವಿಶೇಷ. ಅಂದರೆ ಏಕದಿನ ವಿಶ್ವಕಪ್ ಆರಂಭಕ್ಕೂ ಒಂದು ವಾರ ಮುಂಚಿತವಾಗಿ 15 ಸದಸ್ಯರ ಬಳಗದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು.

ಇತ್ತ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಮುಗಿಯುವುದು ಸೆಪ್ಟೆಂಬರ್ 27 ರಂದು. ಇನ್ನು ವಿಶ್ವಕಪ್​ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲು ನೀಡಲಾದ ಗಡುವು ಸೆಪ್ಟೆಂಬರ್ 28. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಅಶ್ವಿನ್ ಹಾಗೂ ಸುಂದರ್ ನಡುವೆ ಭರ್ಜರಿ ಪೈಪೋಟಿಯಂತು ಕಂಡು ಬರಲಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಹೀಗಿದೆ:

ಭಾರತ ತಂಡ (1ನೇ,2ನೇ ಪಂದ್ಯಕ್ಕಾಗಿ): ಕೆಎಲ್ ರಾಹುಲ್ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

ಇದನ್ನೂ ಓದಿ: Mohammed Siraj: 6 ವಿಕೆಟ್ 10 ದಾಖಲೆಗಳು: ಇದು ಮಿಯಾನ್ ಮ್ಯಾಜಿಕ್

ಭಾರತ ತಂಡ (3ನೇ ಪಂದ್ಯಕ್ಕಾಗಿ): ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್ (ಫಿಟ್​ನೆಸ್ ಸಾಧಿಸಿದರೆ).

Published On - 9:58 pm, Mon, 18 September 23

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ