ಮುಖಕ್ಕೆ ಬಿದ್ದ ಚೆಂಡು… ರಚಿನ್ ರವೀಂದ್ರಗೆ ಗಂಭೀರ ಗಾಯ

Pakistan vs New Zealand: ಆತಿಥೇಯ ಪಾಕಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವು ಭರ್ಜರಿ ಜಯ ಸಾಧಿಸಿದೆ. ಲಾಹೋರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕಿವೀಸ್ ಪಡೆ 330 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಕೇವಲ 252 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದ ವೇಳೆ ನ್ಯೂಝಿಲೆಂಡ್ ಆಲ್​ರೌಂಡರ್ ರಚಿನ್ ರವೀಂದ್ರ ಗಂಭೀರವಾಗಿ ಗಾಯಗೊಂಡು ಅರ್ಧದಲ್ಲೇ ಮೈದಾನ ತೊರೆದಿದ್ದಾರೆ.

ಮುಖಕ್ಕೆ ಬಿದ್ದ ಚೆಂಡು... ರಚಿನ್ ರವೀಂದ್ರಗೆ ಗಂಭೀರ ಗಾಯ
Rachin Ravindra
Edited By:

Updated on: Feb 09, 2025 | 9:53 AM

ಪಾಕಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದ ವೇಳೆ ನ್ಯೂಝಿಲೆಂಡ್ ಆಟಗಾರ ರಚಿನ್ ರವೀಂದ್ರ ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 330 ರನ್ ಕಲೆಹಾಕಿತು.

331 ರನ್​ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು 35 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 183 ರನ್ ಕಲೆಹಾಕಿತು. ಈ ಹಂತದಲ್ಲಿ ಕಣಕ್ಕಿಳಿದ ಎಡಗೈ ದಾಂಡಿಗ ಖುಷ್ದಿಲ್ ಶಾ, ಮೈಕೆಲ್ ಬ್ರೇಸ್​ವೆಲ್ ಎಸೆದ 38ನೇ ಓವರ್​ನ 3ನೇ ಎಸೆತದಲ್ಲಿ ಡೀಪ್ ಬ್ಯಾಕ್‌ವರ್ಡ್ ಸ್ಕ್ವೇರ್​ನತ್ತ ಬಾರಿಸಿದ್ದರು.

ಅತ್ತ ಬೌಂಡರಿ ಲೈನ್​ನಲ್ಲಿದ್ದ ರಚಿನ್ ರವೀಂದ್ರ ಕ್ಯಾಚ್ ಹಿಡಿಯಲು ಓಡಿ ಬಂದಿದ್ದಾರೆ. ಆದರೆ ಫ್ಲಡ್‌ಲೈಟ್‌ ಬೆಳಕಿನಿಂದಾಗಿ ಚೆಂಡನ್ನು ಸರಿಯಾಗಿ ಗುರುತಿಸುವಲ್ಲಿ ರಚಿನ್ ಎಡವಿದ್ದಾರೆ. ಪರಿಣಾಮ ಬಾಲ್ ನೇರವಾಗಿ ಮುಖಕ್ಕೆ ಬಡಿದಿದೆ.

ತಕ್ಷಣವೇ ವೈದ್ಯಕೀಯ ಸಿಬ್ಬಂದಿಗಳು ಮೈದಾನಕ್ಕೆ ಆಗಮಿಸಿದ್ದು, ಈ ವೇಳೆ ಅವರ ಮುಖದಿಂದ ರಕ್ತ ಬರುತ್ತಿರುವುದು ಕಂಡು ಬಂದಿದೆ. ಈ ಗಂಭೀರ ಗಾಯದ ಕಾರಣ ರಚಿನ್ ರವೀಂದ್ರ ಅರ್ಧದಲ್ಲೇ ಮೈದಾನ ತೊರೆದಿದ್ದಾರೆ.

ರಚಿನ್ ರವೀಂದ್ರ ವಿಡಿಯೋ:

ಗೆದ್ದು ಬೀಗಿದ ನ್ಯೂಝಿಲೆಂಡ್:

ಇನ್ನು ಈ ಪಂದ್ಯದಲ್ಲಿ ನ್ಯೂಝಿಲೆಂಡ್ ನೀಡಿದ 331 ರನ್​ಗಳ ಗುರಿಯನ್ನು ಬೆನ್ನತ್ತಿದ ಆತಿಥೇಯ ಪಾಕಿಸ್ತಾನ್ ತಂಡವು 47.5 ಓವರ್​ಗಳಲ್ಲಿ 252 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಕಿವೀಸ್ ಪಡೆ ತ್ರಿಕೋನ ಸರಣಿಯ ಮೊದಲ ಮ್ಯಾಚ್​ನಲ್ಲಿ 78 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಪಾಕಿಸ್ತಾನ್ ಪ್ಲೇಯಿಂಗ್ 11: ಫಖರ್ ಝಮಾನ್ , ಬಾಬರ್ ಆಝಂ , ಮೊಹಮ್ಮದ್ ರಿಝ್ವಾನ್ (ನಾಯಕ) , ಖುಷ್ದಿಲ್ ಶಾ , ಕಮ್ರಾನ್ ಗುಲಾಮ್ , ಸಲ್ಮಾನ್ ಅಘಾ , ತಯ್ಯಬ್ ತಾಹಿರ್ , ಶಾಹೀನ್ ಅಫ್ರಿದಿ , ನಸೀಮ್ ಶಾ , ಹರಿಸ್ ರೌಫ್ , ಅಬ್ರಾರ್ ಅಹ್ಮದ್.

ನ್ಯೂಝಿಲೆಂಡ್ ಪ್ಲೇಯಿಂಗ್ 11: ರಚಿನ್ ರವೀಂದ್ರ , ವಿಲ್ ಯಂಗ್ , ಕೇನ್ ವಿಲಿಯಮ್ಸನ್ , ಡ್ಯಾರಿಲ್ ಮಿಚೆಲ್ , ಟಾಮ್ ಲ್ಯಾಥಮ್ (ವಿಕೆಟ್ ಕೀಪರ್) , ಗ್ಲೆನ್ ಫಿಲಿಪ್ಸ್ , ಮೈಕೆಲ್ ಬ್ರೇಸ್‌ವೆಲ್ , ಮಿಚೆಲ್ ಸ್ಯಾಂಟ್ನರ್ (ನಾಯಕ) , ಮ್ಯಾಟ್ ಹೆನ್ರಿ , ಬೆನ್ ಸಿಯರ್ಸ್ , ವಿಲಿಯಂ ಒರೂಕ್.